ರಾಜ್ಯ
ಅಕಾಶವಾಣಿಯನ್ನು ಕೇಂದ್ರ ಮುಚ್ಚುವ ಕೆಲಸ ಮಾಡುತ್ತಿದೆ; ಕೇಂದ್ರದ ವಿರುದ್ಧ ಎಚ್ ಡಿ ಕೆ ಆಕ್ರೋಶ
ಬೆಂಗಳೂರು, ಜ,28:ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕನ್ನಡದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುತ್ತಿರುವ ಕೇಂದ್ರ ಸರ್ಕಾರ ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ…



















