Browsing: ರಾಜ್ಯ

ರಾಜ್ಯ

ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ ಚಾಲನೆ

ಬೆಂಗಳೂರು, ಮೇ,17: ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಏರ್ಪಡಿಸಿದ್ದ ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ Ôವಸತಿ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಈ ವೇಳೆ ಇತ್ತೀಚೆಗೆ ಕೋವಿಡ್ ನಿಂದ ಸಾವನ್ನಪ್ಪಿದ  ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ಮಹದೇವ ಪ್ರಕಾಶ್,ಸೇರಿದಂತೆ ಸಾವನ್ನಪ್ಪಿದ  ಪತ್ರಕರ್ತರುಗಳಿಗೆ ಶ್ರದ್ದಾಂಜಲಿ ಸಲ್ಲಿಸಿ ನುಡಿ ನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕೆ.ಯು.ಡಬ್ಲು.ಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು,ರಾಜ್ಯಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ್, ಬಂಗ್ಲೆ ಮಲ್ಲಿಕಾರ್ಜುನ,ಬಿ.ಬಿ.ಎಂ.ಪಿ.ಸದಸ್ಯ…

ಜಿಡಿಎಸ್ ನಿಂದ 2ಡಿಜಿ ಔ‍ಷಧ ಖರೀದಿಸಿ ಹಂಚಲು ಚಿಂತನೆ

ಬೆಂಗಳೂರು,ಮೇ,17: ರಾಜ್ಯದ ಕೋವಿಡ್‌ ಸ್ಥಿತಿಗತಿ ಮತ್ತು ಜೆಡಿಎಸ್‌ ವತಿಯಿಂದ ಜನರಿಗೆ ನೀಡಲಾಗುತ್ತಿರುವ ಪರಿಹಾರ ಕಾರ್ಯಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಪಕ್ಷದ ಶಾಸಕರು, ಮುಖಂಡರೊಂದಿಗೆ ಸೋಮವಾರ ಆನ್‌ಲೈನ್‌ ಸಮಾಲೋಚನೆ ನಡೆಸಿದರು. ಕೊರೊನಾ ವೈರಸ್‌ ಸೋಂಕು ಪತ್ತೆ ಪರೀಕ್ಷೆ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು, ಪರೀಕ್ಷಾ ವರದಿಗಳು ವಿಳಂಬವಾಗಿ ಬರುತ್ತಿರುವುದು ಮತ್ತು ವರದಿ ವಿಳಂಬವಾಗುತ್ತಿರುವುದರಿಂದ ಆಗುತ್ತಿರುವ ಅನಾಹುತಗಳು, ಲಸಿಕೆ ಅಭಿಯಾನ ಅವ್ಯವಸ್ಥೆ, ಆಕ್ಸಿಜನ್‌ ಪೂರೈಕೆಯಲ್ಲಿ ಅಗುತ್ತಿರುವ ಸಮಸ್ಯೆ, ತಾರತಮ್ಯ, ಆಸ್ಪತ್ರೆಗಳು ರೋಗಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ…

ಆನೇಕಲ್ ;ಬೆಡ್ ಬುಕಿಂಗ್, ಮಿನಿ ವಾರ್ ರೂಂ ಸೇವೆಗಳಿಗೆ ಚಾಲನೆ

ಪರಶಿವ ಧನಗೂರು. ಬೆಂಗಳೂರು,ಮೇ17:ಎರೆಡನೇ ಅಲೆಯ ರೂಪಾಂತರಿ ಡಬಲ್ ಮ್ಯುಟೆಂಟ್ ವೈರಸ್ ಆನೇಕಲ್ ತಾಲೂಕಿಗೆ ವಿಶೇಷ ಶಾಪವಾಗಿ ಪರಿಣಮಿಸಿದ್ದು ಈವರೆಗೆ ಬೆಡ್ ಬುಕಿಂಗ್, ಆಮ್ಲಜನಕ ಕೊರತೆ ವೆಂಟಿಲೇಷನ್ ಆಸ್ಪತ್ರೆಗಳ ಅಲಭ್ಯತೆ ಸೋಂಕಿತರನ್ನು ಸಾಕಷ್ಟು ಕಾಡಿತ್ತು. ಬೆಂಗಳೂರಿನ ಬೊಮ್ಮನಹಳ್ಳಿ ವಾರ್ ರೂಂ ಅಕ್ಷರಶಃ ಆನೇಕಲ್ ಜನತೆಗೆ ಮರೀಚಿಕೆಯಾಗಿತ್ತು. ಸಾಕಷ್ಟು ಸಾವುಗಳನ್ನು ಕಂಡ ಜನತೆಗೆ ಬೆಂಗಳೂರು ನಗರ ಜಿಲ್ಲಾದಿಕಾರಿಗಳು ರಾಜ್ಯ ಸರ್ಕಾರದ ಆದೇಶದಂತೆ ಆನೇಕಲ್ ವಿಧಾನ ಸಭಾ ಕ್ಷೇತ್ರದಲ್ಲಿಯೇ ಕೋವಿಡ್-19 ಚಿಕಿತ್ಸೆಯ ಸರಧಿ ತೀರ್ಮಾನ ಕೇಂದ್ರ (ಟ್ರೈಯಾಗಿಂಗ್ ಸೆಂಟರ್) ವನ್ನು ಚಾಲನೆಗೊಳಿಸಿದರು.…

ಹತ್ತನೇ,ಪಿಯು ಪರೀಕ್ಷೆಗಳ ರದ್ದತಿಗೆ ತೀರ್ಮಾನಿಸಿಲ್ಲ-ಸುರೇಶ್‌ಕುಮಾರ್

ಬೆಂಗಳೂರು,ಮೇ,೧೭: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು  ಹೇಳಿದರು ಕೆಲವೆಡೆ ಪರೀಕ್ಷೆ ರದ್ದು ಮಾಡುವ ಬಗ್ಗೆ ಊಹಾಪೋಹವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ…

ಬ್ಲಾಕ್ ಫಂಗಸ್ ಔಷಧ ತರಿಸಿಕೊಳ್ಳುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಬೆಂಗಳೂರು, ಮೇ ೧೭: ರಾಜ್ಯದಲ್ಲಿ ಎಲ್ಲರಲ್ಲೂ ಭಯ ಹುಟ್ಟಿಸಿರುವ ಕಪ್ಪು ಶಿಲೀಂಧ್ರದ ಔಷಧಗಳನ್ನು ತರಿಸಿಕೊಳ್ಳುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ತರಿಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ ೧,೦೫೦ ವಾಯ್ಲ್‌ಗಳು (ಶೀಶೆ)…

ದಾಖಲೆ ಮಟ್ಟದ ಕೋವಿಡ್ ಇಳಿಕೆಗೆ ಅಸಲಿ ಕಾರಣ ಏನುಗೊತ್ತೇ..?!

ಬೆಂಗಳೂರು, ಮೇ ೧೬: ಇದು ನಿಜಕ್ಕೂ ಅಚ್ಚರಿಯ ವಿಷಯ ಹೀಗೂ ಸರ್ಕಾರ ಜನರನ್ನು ಯಾಮರಿಸುತ್ತದೆಯೇ ಎನ್ನುವ ಅನುಮಾನಗಳು ಈಗ ಕಾಡುತ್ತಿವೆ. ಯಾಕೆಂದರೆ ರಾಜ್ಯದಲ್ಲಿ ದಿಡೀರ್ ಕೊರೊನಾ ವೈರಸ್ ಸೋಂಕಿತರ ಸಖ್ಯೆ ಇಳಿಮುಖವಾಗಿದೆ ಅದು ಸಾವಿರ ಗಟ್ಟಲೆ ಇಳಿಕೆಯಾಗಿದೆ ಎಂದರೆ ಅದರ ಹಿಂದಿನ ಅಸಲಿ ಸತ್ಯವನ್ನು ಹುಡುಕುತ್ತಾ ಹೋದಾಗ ಸತ್ಯಾಂಶಗಳು ಬಯಲಾಗಿವೆ. ಹೌದು. ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡಿದರೂ ಕೂಡ ಸೋಂಕಿತ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರತೊಡಗಿದವು ಇದರಿಂದ ಸರ್ಕಾರಕ್ಕೆ ಒಂದು ರೀತಿ ಮುಜುಗರ ಉಂಟಾಯಿತು ಇದರಿಂದ ಕೊರೊನಾ…

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ;ಸುಧಾಕರ್

ಬೆಂಗಳೂರು, ಮೇ 16:ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ.…

ವಿಪತ್ತು ಸ್ಪಂದನಾ ಪಡೆ ಬಲ ಹೆಚ್ಚಳಕ್ಕೆ ಆದ್ಯತೆ;ಬೊಮ್ಮಾಯಿ

ಬೆಂಗಳೂರು,ಮೇ,16:ಕರ್ನಾಟಕ ರಾಜ್ಯ ವಿಪತ್ತು ಸ್ಪಂದನಾ ಪಡೆ ಪಡೆಯ ಬಲವನ್ನು ಹೆಚ್ಚಿಸಲಾಗುವುದು. ಅದರಜೊತೆಗೆ ಪ್ರಸಕ್ತ ವರ್ಷದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ವಾಹನ, ಅತ್ಯಾಧುನಿಕ ಉಪಕರಣ ಖರೀದಿಯ ಜೊತೆಗೆ ರಾಜ್ಯದ ಎರಡು ಕಡೆ ಎಸ್ ಡಿ ಆರ್ ಎಫ್ ತಂಡದ ಕಚೇರಿಯನ್ನು ಸ್ಥಾಪಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯ ಅಗ್ನಿಶಾಮಕ ತುರ್ತು ಸೇವೆ ಗೃಹರಕ್ಷಕ ಪೌರರಕ್ಷಣೆ SDRF ನಿರ್ದೇಶನಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ…

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ:ಬಿ.ಸಿ.ಪಾಟೀಲ್

ಬೆಂಗಳೂರು,ಮೇ.16 :ಹಿರೇಕರೂರು ಮತಕ್ಷೇತ್ರದಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ. ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ. ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ…

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಸವದಿ

ಬೆಂಗಳೂರು,ಮೇ,16:ಬಿಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯುಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ  ಸೋಮವಾರದಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್…

ಬಸವಣ್ಣನಿಗೆ ವಚನಜ್ಯೋತಿ ಬಳಗದ ವಿಶಿಷ್ಟ ನಮನ

ಬೆಂಗಳೂರು,ಮೇ,16:ವಚನಜ್ಯೋತಿ ಬಳಗ ಬಸವ ಜಯಂತಿಯನ್ನು ವಚನ ಗಾನಾಭಿಷೇಕದ ಮೂಲಕ ವಿಶಿಷ್ಟವಾಗಿ ಆಚರಿಸಿತು. ಗೂಗಲಮೀಟಿನಲ್ಲಿ ನಡೆದ ಗಾನಾಭಿಷೇಕವನ್ನು ಹಿಂದೂಸ್ಥಾನಿ ಸಂಗೀತದ ಹಿರಿಯ ವಿದ್ವಾಂಸರಾದ ಪಂ. ದೇವೇಂದ್ರಕುಮಾರ ಪತ್ತಾರ್ ಅಲ್ಲಮಪ್ರಭುಗಳ ಬಸವ ಸ್ತುತಿಯೊಂದಿಗೆ ಉದ್ಘಾಟಿಸಿದರು. ನೇತೃತ್ವ ವಹಿಸಿದ್ದ ಬಳಗದ ಮಹಾಪೋಷಕಿ 86 ವರ್ಷದ ಪಾರ್ವತಮ್ಮ ಶಿವಲಿಂಗಯ್ಯ ಪಂಡಿತರು ಅತ್ಯಂತ ಉತ್ಸಾಹದಿಂದ ಅಣ್ಣನ ವಚನ “ತನುವ ಕೊಟ್ಟು ತನು ಬಯಲಾಯಿತ್ತು” ಹಾಡಿ ಗಾನಾಭಿಷೇಕಕ್ಕೆ ಮೆರುಗು ಕೊಟ್ಟರು. ಗೋಕಾಕದ ವಿದ್ಯಾಮಗ್ದಂ, ವಿಜಯಪುರ ಚಡಚಣದ ವಿದ್ಯಾ ಕಲ್ಯಾಣಶೆಟ್ಟಿ, ಚಿಕ್ಕನಾಯಕನಹಳ್ಳಿ ಹುಳಿಯಾರಿನ ಕವಿತಾ, ಮೈಸೂರಿನ…

ತೌಕ್ತೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ ನೇಮಕ – ಬೊಮ್ಮಾಯಿ

ಬೆಂಗಳೂರು,ಮೇ,15:    ತೌಕ್ತೆ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಲು NDRF, SDRF ಸೇರಿದಂತೆ ಒಟ್ಟು ಒಂದು ಸಾವಿರ ನುರಿತ ರೆಸ್ಕ್ಯೂ ಆಪರೇಷನ್ ಟೀಮ್ ಅನ್ನು ನಿಯೋಜಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಶನಿವಾರ ಬೆಂಗಳೂರಿನಲ್ಲಿ ಟೌಟೆ ಚಂಡಮಾರುತ ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆಗಳ ಕುರಿತು ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಒಟ್ಟು 434 ಜನ sdrf ತಂಡದಲ್ಲಿದ್ದಾರೆ. ಕಲಬುರ್ಗಿ ಮತ್ತು…

ಅಮೂಲಾಗ್ರ ಸುಧಾರಣೆಗೆ ಕ್ರಮ;ಅಶ್ವತ್ಥ ನಾರಾಯಣ

ಬೆಂಗಳೂರು,ಮೇ,15: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನರಿರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್‌ ಕಾರ್ಯಪಡೆಯು ತಜ್ಞರರದಿ ಪಡೆಯಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ…

ಕಾಂಗ್ರೆಸ್ ಜನಪ್ರತಿನಿಧಿಗಳ ಪ್ರಧೇಶಾಭಿವೃದ್ಧಿ ಹಣ ಬಿಡುಗಡೆಗೆ ಸಿದ್ದು ಸಿಎಂಗೆ ಪತ್ರ

ಬೆಂಗಳೂರು,ಮೇ,೧೫: ಕಾಂಗ್ರೆಸ್ ಪಕ್ಷದ ಶಾಸಕರು, ವಿಧಾನಸಭಾ ಸದಸ್ಯರ,ಸಂಸದರು ಮತ್ತು ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ತಲಾ ಒಂದು ಕೋಟಿರೂ ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆಂದು ನೀಡಲಾಗುವ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ೧ ಕೋಟಿ ರೂಪಾಯಿಗಳನ್ನು ಲಸಿಕೆ ಖರೀದಿಸಿ ಜನರಿಗೆ ನೀಡಲು ಉದ್ದೇಶಿಸಿದ್ದೇವೆ. ಇದರಿಂದ ಸುಮಾರು ೯೦ ಕೋಟಿ ರೂಗಳಷ್ಟು ಸಂಗ್ರಹವಾಗುತ್ತದೆ. ಇನ್ನುಳಿದ ಹತ್ತು ಕೋಟಿ ರೂಗಳನ್ನು ಪಕ್ಷದ…

ಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ ೩೫ ಶಿಕ್ಷಕರು ಕೊರೊನಾಗೆ ಬಲಿ

ಬೆಂಗಳೂರು,ಮೇ, ೧೫; ಇತ್ತೀಚಗೆ ರಾಜ್ಯದಲ್ಲಿ ನಡೆದ ಲೋಕಸಭೆ ಹಾಗೂ ವಿಧಾನ ಸಭೆಗಳ ಉಪ ಚುನಾವಣೆಗಳ ಕಾರ್ಯನಿರ್ವಹಿಸಿದ ೩೫ ಶಿಕ್ಷಕರು ಸೋಂಕಿಗೆ ಬಲಿಯಾಗಿದ್ದಾರೆ ಎನ್ನುವ ಅಘಾತಕಾರ ಮಾಹಿತಿ ಹೊರಬಿದ್ದಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೆಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ ಕಾರ್ಯನಿರ್ವಹಿಸಿದ್ದ ೩೫ ಮಂದಿ ಕೊರೊನಾದಿಂದ ಸಾವನ್ನಪ್ಪಿರುವ ಬಗ್ಗೆ ಶಿಕ್ಷಣ ಇಲಾಖೆ ವರದಿ ನೀಡಿದೆ. ಎಸ್.ಎಸ್.ಭರಾಟೆ (೪೨), ರವೀಂದ್ರನಾಥ್ ಬಶಟ್ಟಿ (೫೮), ಸಂಗಪ್ಪ ವಾನೆ (೪೩), ರಾಜೇಶ್ವರಿ (೪೧), ಶ್ರೀದೇವಿ (೫೨), ಪ್ರಶಾಂತ್ ಮಂತ್ರೆ (೩೬),…

ರಾಜ್ಯದಲ್ಲಿ ಭಾರಿ ಮಳೆ ಸೂಚನೆ- ೭ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು,ಮೇ, ೧೫ : ಕರ್ನಾಟಕಕ್ಕೆ ತೌಕ್ತೆ ಚಂಡಮಾರುತ ಆಗಮಿಸುವ ಹಿನ್ನೆಲೆಯಲ್ಲಿ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಇಂದಿನಿಂದ ಮೇ ೧೭ ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಂಭವವಿರು ಕಾರಣ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಗಾಲದ ವಾತಾವರಣ ನಿರ್ಮಾಣವಾಗಿದ್ದು, ಗುಡುಗು, ಮಿಂಚು ಸಹಿತ ಮಳೆ…

೨ನೇ ಕಂತಿನ ಆಮ್ಲಜನಕ ಹೊತ್ತು ತಂದ ಎಕ್ಸ್ ಪ್ರೆಸ್ ರೈಲು

ಬೆಂಗಳೂರು, ಮೇ,೧೫: ಕೋವಿಡ್-೧೯ ಚಿಕಿತ್ಸೆಗಾಗಿ ಆಕ್ಸಿಜನ್ ಕೊರತೆ ಮುಂದುವರೆದಿದ್ದು ಕೇಂದ್ರ ಸರ್ಕಾರ ೨ನೆ ಬಾರಿ ರಾಜ್ಯಕ್ಕೆ ಆಕ್ಸಿಜನ್ ರವಾನೆ ಮಾಡಿದೆ. ೧೨೦ ಮೆಟ್ರಿಕ್ ಟನ್ ಆಕ್ಸಿಜನ್ ಶನಿವಾರ ಬೆಳಿಗ್ಗೆ ಎಕ್ಸ್ ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ತಲುಪಿತು. ಕಳಿಂಗ ನಗರದಿಂದ ಬೇಂಗಳೂರಿಗೆ ಬೆಳಗಿನ ಜಾವ೩.೨೦ಕ್ಕೆ ತಲುಪಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ತಲಾ ೨೦ ಟನ್ ಆಕ್ಸಿಜನ್ ಸಾಮರ್ಥ್ಯದ ಒಟ್ಟು ಆರು ಕಂಟೇನರ್ ಗಳಲ್ಲಿ ಸುಮಾರು ೧೨೦ ಮೆಟ್ರಿಕ್ ಟನ್ ನಷ್ಟು ತೂಕದ ಆಮ್ಲಜನಕ ಹೊತ್ತು…

ಎಸ್.ಆರ್.ಪಾಟೀಲ್ ರಿಂದ ಉಚಿತ ಆಂಬುಲೆನ್ಸ್

ನಿಡಗುಂದಿ, ಮೇ,15:ದಿನೇ ದಿನೇ ಕೊರೊನಾ ಅಟ್ಟಹಾಸ ಜಾಸ್ತಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ,ತಾಲ್ಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಜನಪ್ರತಿನಿದಿಗಳು ಹಲವು ಸೇವೆಗಳನ್ನು ಮನನ ಅಡುತ್ತಿದ್ದಾರೆ. ನಿಡಗುಂದಿ ಆರೋಗ್ಯ ಸಮುದಾಯ ಕೇಂದ್ರಕ್ಕೆ ಅವಶ್ಯಕತೆ ಇದ್ದ ಆಂಬುಲೆನ್ಸ್ ಅನ್ನು ವಿಧಾನ ಪರಿಷತ್ ಸದಸ್ಯ ಎಸ್.ಆರ್. ಪಾಟೀಲ್ ಉಚಿತವಾಗಿ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಅಂಬುಲೆಸ್ಸ್ ನೀಡಿದ್ದು ಇದರ ಸದುಪಯೋಗ ಪಡೆಯುವಂತೆ ಅವರು ತಿಳಿಸಿದ್ದಾರೆ. ಇದೇ ವೇಳೆ ಎಸ್.ಆರ್.ಪಾಟೀಲ್ ಪರವಾಗಿ ಅವರ ಸಹೋದರ ಶಿವಾನಂದ ಮಾವಟಿ ಅವರಿಗೆ ಸನ್ಮಾನಿಸಲಾಯಿತು.

ಶುಕ್ರವಾರ ಕೋವಿಡ್‌ನಿಂದ ೩೫,೮೭೯ ಮಂದಿ ಮುಕ್ತ

ಬೆಂಗಳೂರು,ಮೇ,೧೪:ಕಳೆದ ೨೪ ಗಂಟೆಯಲ್ಲಿ ೩೫,೮೭೯ ಜನಕೋವಿಡ್ ಸೋಂಕಿನಿಂದ ಮುಕ್ತರಾಗಿದ್ದಾರೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಕೋವಿಡ್ ವರದಿಯಲ್ಲಿ ತಿಳಿಸಿದೆ. ಆರೋಗ್ಯ ಮತ್ತು ಕುಟುಂಬ ಇಲಾಖೆ ಈ ವರದಿಯನ್ನು ನೀಡಿದ್ದು,ಶುಕ್ರವಾರದ ಅಂಕಿ ಅಂಶದ ಪ್ರಕಾರ, ರಾಜ್ಯದಲ್ಲಿ ಈವರೆಗೆ ಒಟ್ಟು ೧೫,೧೦,೫೫೭ ಮಂದಿ ಕೋವಿಡ್ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕರ್ನಾಟಕದಲ್ಲಿ ಇಂದು ೪೧,೭೭೯ ಹೊಸ ಪ್ರಕರಣ ವರದಿಯಾಗಿದ್ದು, ರಾಜ್ಯದಲ್ಲಿ ೫,೯೮,೬೦೫ ಸಕ್ರಿಯ ಪ್ರಕರಣಗಳಿವೆ. ಅಲ್ಲದೆ, ಶುಕ್ರವಾರ ಒಟ್ಟು ೩೭೩ ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್-೧೯: ದೇಶದಾದ್ಯಂತ…

ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಕೋವಿಡ್ ಗೆ ಬಲಿ

ಬೆಂಗಳೂರು, ಮೇ,14: ಹಿರಿಯ ಪತ್ರಕರ್ತ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಕಾರ್ಯದರ್ಶಿ ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ್ ಕೋವಿಡ್ ಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ತಗುಲಿದ ಕಾರಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ. 65 ವರ್ಷದ ಮಹಾದೇವ್ ಪ್ರಕಾಶ್ 1975 ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮ ಆರಂಭಿಸಿದ್ದ ಅವರು ನಂತರ ತಮ್ಮದೆ ಸಂಪಾದಕತ್ವದ ‘ಈ ಭಾನುವಾರ ‘ಪತ್ರಿಕೆ ತರುತ್ತಿದ್ದರು ಅಲ್ಲದೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ…

error: Content is protected !!