Browsing: ರಾಜ್ಯ

ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಲಕಿಗೆ ತೆರಳಲು ಸಿಎಂ ನೂತನ ಸಚಿವರಿಗೆ ಸೂಚನೆ

ಬೆಂಗಳೂರು ,ಆ. 4: ನೂತನ ಸಚಿವರ ಪ್ರಮಾಣ ವಚನದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೊದಲ ಸಚಿವ ಸಂಪುಟ ಸಭೆ ನಡೆಸಿದ್ದಾರು. ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಸಚಿವ ಸಂಪುಟ ವಿಸ್ತರಣೆ ಬಳಿಕ ಮೊದಲ ಸಂಪುಟ ಸಭೆ ನಡೆಸಿದ್ದು, ಈ ವೇಳೆ ಕೋವಿಡ್​ ನಿಯಂತ್ರಣ ಮತ್ತು ನೆರೆ ವೀಕ್ಷಣೆ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನಲೆ ಕೋವಿಡ್​ ಮೂರನೇ ಅಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಅಲ್ಲದೇ,…

ಅಕ್ರಮವಾಗಿ ಸಾಗಿಸುತ್ತಿದ್ದ ೫೮೬ಪಡಿತರ ಅಕ್ಕಿ ಚೀಲ ವಶ

ನಿಡಗುಂದಿ,ಆ,04:ಬಡವರಿಗೆ ಪಡಿತರಕ್ಕಾಗಿ ವಿತರಿಸುವ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಮಂಗಳವಾರ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯ ಮುದ್ದೇಬಿಹಾಳ ಕ್ರಾಸ್ ಬಳಿ ಜರುಗಿದೆ. ವಶಪಡಿಸಿಕೊಂಡ ಲಾರಿಯಲ್ಲಿನ ಅಕ್ಕಿಯನ್ನು ಆಲಮಟ್ಟಿಯ ಗೋಡಾವನ್ ನಲ್ಲಿ ಇರಿಸಲಾಗಿದೆ. ಒಟ್ಟಾರೆ 586 ಅಕ್ಕಿ ಚೀಲಗಳನ್ನು‌ ವಶಪಡಿಸಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಸತೀಶ ಕೂಡಲಗಿ ಹೇಳಿದರು. ಅಕ್ರಮ ಸಾಗಣೆ; ರಾಯಚೂರ ಜಿಲ್ಲೆ ಮಾನ್ವಿಯಿಂದ ಗುಜರಾತ್ ಗೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ರೇಷನ್ ಅಕ್ಕಿಯನ್ನು ಹೇಗೆ ಸಂಗ್ರಹಿಸಲಾಗುತ್ತಿತ್ತು? ಎಂಬುದನ್ನು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ. ಖಚಿತ…

ಕೃಷ್ಣನದಿಯಲ್ಲಿ ಎತ್ತುಗಳು ಮುಳುಗಿ ಸಾವು

ಆಲಮಟ್ಟಿ,ಆ,03 : ಮೇಯಲು ಬಿಟ್ಟ ಎರಡು ಎತ್ತುಗಳು ಗಣಿ ಪುನರ್ವಸತಿ ಕೇಂದ್ರದ ಬಳಿ ಇರುವ ಕೃಷ್ಣಾನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ. ರೈತ ನಾಗಪ್ಪ,ಯಮನಪ್ಪ ಕೊಳಮಲಿ ಎನ್ನುವವರು ತಮ್ಮ ಎತ್ತುಗಳನ್ನು ಕೃಷ್ಣಾ ನದಿ ತೀರದಲ್ಲಿ ಮೇಯಲು ಬಿಟ್ಟು ತಮ್ಮ ಕೆಲಸದಲ್ಲಿ ತೊಡಗಿದ್ದರು ಈ ವೇಳೆ ಎತ್ತುಗಳು ಕಾಣದೆ ಇದ್ದ ಸಂದರ್ಭದಲ್ಲಿ ಹುಡುಕಾಡಿದಾಗ ನದಿಯ ನೀರಿನಲ್ಲಿ ಮುಳುಗಿರುವುದು ತಿಳಿದುಬಂದಿದೆ. ಕೂಡಲೆ ತೆಪ್ಪದ ಸಹಾಯದಿಂದ ರಕ್ಷಣೆಗೆ ಧಾವಿಸಿದರೂ ಅಷ್ಟೋತ್ತಿಗಾಗಲೇ ಎರಡೂ ಎತ್ತುಗಳು ಮೃತಪಟ್ಟಿದ್ದವು. ಎರಡು ಲಕ್ಷ ಬೆಲೆಬಾಳುವ ಎತ್ತುಗಳನ್ನು…

ಸಾಧಕರಿಗೆ ಸನ್ಮಾನ

ಬೆಂಗಳೂರು,ಆ,01:ಸಿನಿಮಾಪತ್ರಿಕಾಛಾಯಾಗ್ರಾಹಕರು ಕರೋನಾ ವಾರಿಯರ‍್ಸ್ ಕಳೆದ ಹದಿನೆಂಟು ತಿಂಗಳುಗಳಿಂದ ವಿಶ್ವಕ್ಕೆ ವ್ಯಾಪಿಸಿರುವ ಕರೋನ ಎಂಬಮಹಾಮಾರಿಯಿಂದ ಜನರುಹೈರಣಾಗಿದ್ದಾರೆ.ಸರ್ಕಾರವುಲಾಕ್‌ಡೌನ್‌ಏರಿದಕಾರಣ ಚಟುವಟಿಕೆಗಳುಸ್ತಬ್ದಗೊಂಡಿದ್ದವು.ಈ ಸಂದರ್ಭದಲ್ಲಿಜೀವದ ಹಂಗನ್ನುತೊರೆದುಸಾಮಾಜಿಕ ಸೇವೆಯಲ್ಲಿತೊಡಗಿಕೊಂಡಿದ್ದ ವಿವಿಧ ಕ್ಷೇತ್ರಗಳ ಸಾಧಕರನ್ನು ಎಸ್.ಎಸ್.ಕಲಾ ಸಂಗಮವು ಗುರುತಿಸಿ ಅವರನ್ನುಗೌರವಿಸುವ ಕಾರ್ಯಕ್ರಮನ್ನುಏರ್ಪಡಿಸಿತ್ತು. ಈ ಪೈಕಿ ಕಳೆದಮೂರು ದಶಕಗಳಿಂದ ಸಿನಿಮಾ ಪತ್ರಿಕೆಗಳಿಗೆ ಫೋಟೋಗಳನ್ನು ಒದಗಿಸುತ್ತಿರುವ ಹಿರಿಯಛಾಯಾಗ್ರಾಹಕರುಗಳಾದಕೆ.ಎನ್.ನಾಗೇಶ್‌ಕುಮಾರ್, ಮನೋಹರ್‌ಅಲಿಯಾಸ್ ಮನು ಮತ್ತು ಕೆ.ಎಸ್.ಮೋಕ್ಷೇಂದ್ರ ಇವರುಗಳನ್ನು ಸಂಸ್ಥೆಯು ಹಾರ, ಶಾಲು, ಪೇಟ ಮತ್ತುಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು. ನಜ್ಮಾ ಫಾರುಖ್, ಅಸಿಸ್ಟೆಂಟ್ ಕಮಿಷನರ್‌ಆಫ್ ಪೋಲೀಸ್, ಖ್ಯಾತಗಾಯಕ ಶಶಿಧರ್‌ಕೋಟೆ, ಸಮಾಜ ಸೇವಕ ಮಂಜುನಾಥ್‌ಬನಶಂಕರಿ, ನಿವೃತ್ತ…

ನೆರೆ ಸಂತ್ರಸ್ತರಿಗೆ ಬಿಎಸ್ ವೈ ಸರ್ಕಾರ ಮಾದರಿಯಲ್ಲೇ ಪರಿಹಾರ; ಬೊಮ್ಮಾಯಿ

ಬೆಂಗಳೂರು,ಆ,01:ನೆರೆ ಸಂತ್ರಸ್ತರಾದವರಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ನೀಡುತ್ತಿದ್ದ ಮಾದರಿಯಲ್ಲಿಯೇ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕುರಿತು ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ಭಾನುವಾರ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ನೆರೆ ಹಾನಿ ಸಮೀಕ್ಷೆಗೆ ರಾಜ್ಯಕ್ಕೆ ಕೇಂದ್ರ ತಂಡವನ್ನು ಕಳುಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದೇನೆ’ ಎಂದು ಹೇಳಿದರು. ‌ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅಧಿಕಾರಿ…

ಖಾಸಗಿ ಶಾಲೆಗಳ ಆರಂಭ ಸದ್ಯಕ್ಕಿಲ್ಲ; ಸಿಎಂ

ಬೆಂಗಳೂರು ,ಆ,೦೧: ರಾಜ್ಯದಲ್ಲಿ ಖಾಸಗಿ ಶಾಲೆಗಳ ಆರಂಭ ಕುರಿತು ಎಲ್ಲ ಆಯಾಮದಲ್ಲಿಯೂ ಚರ್ಚಿಸಿ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟದ ಜೊತೆಯಲ್ಲಿ ಸೌಹಾರ್ದಯುತವಾಗಿ ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಶಾಲೆಗಳ ಆರಂಭಕ್ಕೆ ಮುಂದಾಗಿದ್ದ ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟಕ್ಕೆ ಸೂಚನೆ ನೀಡಿ, ಸದ್ಯಕ್ಕೆ ಶಾಲೆ ಆರಂಭ ಬೇಡ ಎಂದು ತಿಳಿಸಲಾಗಿದೆ. ಈ ಸಂಬಂಧ ಮುಂದುವರೆದು ಖಾಸಗಿ ಶಾಲೆಗಳ ಅಸೋಸಿಯೇಷನ್ ಜೊತೆ ಮಾತುಕತೆ…

ಯಾರೇ ಅಡ್ಡಿಪಡಿಸಿದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ; ಸಿಎಂ

ಬೆಂಗಳೂರು, ಜು,31: ಮೇಕೆ ದಾಟು ಯೋಜನೆಗೆ ಯಾರೆ ಅಡ್ಡಬಂದರೂ ನಿಲ್ಲುವುದಿಲ್ಲ ಯೋಜನೆಯನ್ನು ಮಾಡೀಯೇ ತೀರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕರ್ನಾಟಕದ ಕಾವೇರಿ ನದಿಗೆ ಮೇಕೆದಾಟು ಬಳಿ ಡ್ಯಾಂ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದಕ್ಕೆ ತಮಿಳುನಾಡು ಸರ್ಕಾರ ವಿರೋಧಿಸುತ್ತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ತಮಿಳುನಾಡು ಬಿಜೆಪಿ ಘಟಕ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಈ ಹಿಂದೆಯೇ ತಿಳಿಸಿದ್ದರು. ಆದರೆ ಈಗ ಮೇಕೆದಾಟು ಯೋಜನೆ ವಿರೋಧಿಸಿ ಕೆ.ಅಣ್ಣಾಮಲೈ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಅಣ್ಣಾಮಲೈ ವಿಚಾರ…

ಸಂಶೋಧನಾತ್ಮಕ ಸುದ್ದಿಗಳ ಕೊರತೆ; ಶಾಸಕ ಶಿವಾನಂದ ಪಾಟೀಲ್ ವಿಷಾದ

ಆಲಮಟ್ಟಿ,ಜು,31:ಅವಸರದ ಸುದ್ದಿಗೆ ಮಹತ್ವ ನೀಡಿ, ಘಟನೆಯ ವಿವರಾತ್ಮಕ ಬರಹಗಳತ್ತ ಪತ್ರಕರ್ತರು ಗಮನಹರಿಸುತ್ತಿಲ್ಲ ಹೀಗಾಗಿ ಸಂಶೋಧನಾತ್ಮಕ ಸುದ್ದಿಗಳ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಶಿವಾನಂದ ಪಾಟೀಲ ವಿಷಾದಿಸಿದರು. ಇಲ್ಲಿಯ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನಿಡಗುಂದಿ ತಾಲ್ಲೂಕು ಘಟಕ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಜಾಪ್ರಭುತ್ವ ಹಾಗೂ ಸಮಾಜದ ಏರು ಪೇರುಗಳನ್ನು ಪತ್ರಕರ್ತರು, ವ್ಯಂಗ್ಯ ಚಿತ್ರಕಾರರು, ಸಾಹಿತಿಗಳು ಸ್ಥಿರವಾಗಿ ನಿರೂಪಿಸುತ್ತಾ ಬಂದಿದ್ದಾರೆ, ಸಾಮಾಜಿಕ ಜಾಲ ತಾಣಗಳ ಮಧ್ಯೆಯೂ ಪತ್ರಿಕೆಗಳನ್ನು…

ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಓ ಭೇಟಿ

ಆಲಮಟ್ಟಿ,ಜು,31:ಆಲಮಟ್ಟಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಡಕಲಗುಂಡಪ್ಪ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಶನಿವಾರ ಜಿಲ್ಲಾ ಪಂಚಾಯ್ತಿ ಸಿಇಓ ಗೋವಿಂದ ರೆಡ್ಡಿ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಆಲಮಟ್ಟಿ ಗ್ರಾಮ ಪಂಚಾಯ್ತಿಯಿಂದ ಇಲ್ಲಿಯವರೆಗೆ ನರೇಗಾ ಯೋಜನೆಯಡಿ ಕೂಲಿಕರ‍್ಮಿಕರಿಗೆ ಕೆಲಸವೇ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮಂಜುನಾಥ ಹಿರೇಮಠ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯರ ಪ್ರಯತ್ನದ ಫಲವಾಗಿ ಮೊದಲ ಹಂತದಲ್ಲಿ ೧೫೦ ಮಹಿಳೆಯರಿಗೆ ಜಾಬ್ ಕರ್ಡ್ ಮಾಡಿಸಿ ಕೂಲಿ ಕೆಲಸ ನೀಡಲಾಗಿದೆ. ಸಿಇಓ ಗೋವಿಂದರೆಡ್ಡಿ ಮಾತನಾಡಿ,…

ವಿವಿಧ ಲೇಖಕರ ಕೃತಿಗಳಿಗೆ ಸಾಹಿತ್ಯಪರಿಷತ್ ದತ್ತಿ ಪ್ರಶಸ್ತಿ ಪ್ರಕಟ

ಬೆಂಗಳೂರು, ಜು,31: ಕನ್ನಡ ಸಾಹಿತ್ಯ ಪರಿಷತ್ತು 2020 ನೇ ಸಾಲಿಗೆ ವಿವಿಧ ಲೇಖಕರ ಒಟ್ಟು 48 ಕೃತಿಗಳಿಗೆ ದತ್ತಿ ಪ್ರಶಸ್ತಿಯನ್ನು ಪ್ರಕಟಿಸಿದೆ. ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಅವರು ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಿದ್ದಾರೆ. ‘ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್ ದತ್ತಿ ಪ್ರಶಸ್ತಿ’ಗೆ ಎಸ್.ಪಿ. ಯೋಗಣ್ಣ ಅವರ ‘ಆರೋಗ್ಯ ಎಂದರೇನು?’ ಕೃತಿ ಆಯ್ಕೆಯಾಗಿದೆ. ‘ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ ವಾಸುದೇವ ಬಡಿಗೇರ ಅವರ ‘ದೇವರ ದಾಸಿಮಯ್ಯ-ಮರುಚಿಂತನೆ’ ಕೃತಿ, ‘ಭಾರತಿ ಮೋಹನ ಕೋಟಿ…

ಜಿಎಸ್ ಟಿ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಸಿಎಂ ಮನವಿ

ನವದೆಹಲಿ, ಜು,31:ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ ಮಾಡುವುದಾಗಿ ಕೇಂದ್ರ…

ರಾಜ್ಯದ ಆರೋಗ್ಯ ಮೂಲಸೌಕರ್ಯ ಅಭಿವೃದ್ದಿಗೆ ಕೇಂದ್ರದಿಂದ ನೆರವು : ಸಿಎಂ ಬೊಮ್ಮಾಯಿ

ನವದೆಹಲಿ,ಜು31 : ಕೋವಿಡ್ 3 ನೇ ಅಲೆ ತಡೆಗಟ್ಟಲು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ, ಐಸಿಯು, ಆಕ್ಸಿಜನ್, ಔಷಧಿ ಖರೀದಿಗೆ ರಾಜ್ಯಕ್ಕೆ 800 ಕೋಟಿ ರೂ. ಮಂಜೂರು ಮಾಡಲು ಳ ಮನ್ ಸುಖ್ ಮಾಂಡವೀಯ, ಕೇಂದ್ರ ಆರೋಗ್ಯ ಸಚಿವರು ಸಮ್ಮತಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.…

ಆಲಮಟ್ಟಿ ಡ್ಯಾಂಗೆ ಹೆಚ್ಚಿದ ನೀರು ಜಮೀನುಗಳು ಜಲಾವೃತ

ಆಲಮಟ್ಟಿ,ಜು,೩೧: ಆಲಮಟ್ಟಿ ಜಲಾಶಯದ ಹೊರಹರಿವನ್ನು ಗುರುವಾರ ಮಧ್ಯರಾತ್ರಿಯಿಂದ ಹೆಚ್ಚಿಸಲಾಗಿದ್ದು, ೪.೨೦ ಲಕ್ಷ ಕ್ಯುಸೆಕ್ ನೀರನ್ನು ಜಲಾಶಯದ ಮೂಲಕ ಬಿಡಲಾಗುತ್ತಿದೆ. ಇದರಿಂದ ಪ್ರವಾಹದ ಆತಂಕ ಇನ್ನಷ್ಟು ಹೆಚ್ಚಿದ್ದು, ಜಲಾಶಯದ ಒಳಹರಿವು ಕೂಡಾ ೪.೨೦ ಲಕ್ಷ ಕ್ಯುಸೆಕ್ ಇದೆ. ಸದ್ಯ ೫೧೯.೬೦ ಮೀ. ಗರಿಷ್ಠ ಎತ್ತರದ ಜಲಾಶಯದಲ್ಲಿ ೫೧೭.೧೭ ಮೀ.ವರೆಗೆ ನೀರಿದ್ದು, ೮೬.೫೯ ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಆಲಮಟ್ಟಿಯಿಂದ ಹೊರಹರಿವು ಹೆಚ್ಚಿದ್ದರಿಂದ ನಿಡಗುಂದಿ ತಾಲ್ಲೂಕಿನ ಕೃಷ್ಣಾ ತೀರದ ಗ್ರಾಮಗಳಾದ ಅರಳದಿನ್ನಿ, ಕಾಶೀನಕುಂಟಿ, ಯಲ್ಲಮ್ಮನೂದಿಹಾಳ, ಯಲಗೂರ, ಮಸೂತಿ ಗ್ರಾಮzಲ್ಲಿ ಇಲ್ಲಿಯವರೆಗೆ…

ನಿಡಗುಂದಿ: ಪೊಲೀಸರು ಜನಸ್ನೇಹಿಯಾಗಿ ಕೆಲಸ ನಿರ್ವಹಿಸಲು ಸಲಹೆ

ನಿಡಗುಂದಿ,ಜು,೩೧:ಜನಸಾಮಾನ್ಯರ ಕಷ್ಟ ಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಮತ್ತದು ನನ್ನ ಪ್ರಥಮ ಆದ್ಯತೆಯೂ ಹೌದು, ಆ ದಿಸೆಯಲ್ಲಿ ಜಿಲ್ಲೆಯ ಎಲ್ಲಾ ಪೊಲೀಸರಿಗೂ ನಿರ್ದೇಶನ ನೀಡಿದ್ದೇನೆ ಎಂದು ವಿಜಯಪುರ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ ಎಚ್.ಡಿ. ಹೇಳಿದರು. ಕೊಲ್ಹಾರ, ನಿಡಗುಂದಿ, ಆಲಮಟ್ಟಿ, ಕೂಡಗಿ, ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿ ಒಳಗೊಂಡ ನಿಡಗುಂದಿ ಆರಕ್ಷಕ ವೃತ್ತ ನಿರೀಕ್ಷಕರ (ಸಿಪಿಐ) ಕಚೇರಿ ಉದ್ಘಾಟಿಸಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸಾಮಾನ್ಯ ಜನರು ನೆಮ್ಮದಿಯ ಜೀವನ ನಡೆಸುವುದಕ್ಕೆ…

ಪ್ರಧಾನಿ ಭೇಟಿ ಮಾಡಿ ಚರ್ಚಿಸಿದ ಸಿಎಂ ಬೊಮ್ಮಾಯಿ

ನವದೆಹಲಿ,ಜು,೩೦: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ದೆಹಲಿ ಪ್ರಯಾಣ ಬೆಳಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಿಜೆಪಿ ವರಿಷ್ಠರ ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಂಗ್ ಶೇಖಾವತ್ ಅವರನ್ನೂ ಭೇಟಿ ಮಾಡಿದ್ದು ರಾಜ್ಯದ ಸಂಸದರಿಗೆ ಔತಣ ಕೂಟ ಆಯೋಜಿಸಿದ್ದರು. ಹುಬ್ಬಳ್ಳಿ-ಧಾರವಾಡಕ್ಕೆ…

ಕೊರೊನಾ ಹೆಚ್ಚಳ; ಗಡಿಗಳಲ್ಲಿ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

ನವದೆಹಲಿ, ಜು, ೩೦:ಪಕ್ಕದ ಕೇರಳ ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ಕೊರೊನಾ ಹೆಚ್ಳವಾಗುತ್ತಿದ್ದು ಗಡಿ ಭಾಗಗಳಲ್ಲಿ ಹೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ ದೆಹಲಿಗೆ ಭೇಟಿ ನೀಡಿದ ಅವರು, ರಾಜ್ಯದ ಕೊರೊನಾ ಸ್ಥಿತಿಗತಿ ಕುರಿತು ಮಾತನಾಡಿದ್ದಾರೆ. ಕೊರೊನಾ ಮುಂದಿನ ಅಲೆಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ರಾಜ್ಯದಲ್ಲಿ ಆರೋಗ್ಯ ಸೌಲಭ್ಯಗಳನ್ನು ಸುಧಾರಿಸುವ ಕುರಿತು ಚಿಂತನೆ ನಡೆಸುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಏಕಾಏಕಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ…

ಅತಿವೃಷ್ಠಿ ಪೀಡಿತ ಸ್ಥಳಗಳಿಗೆ ಮುಖ್ಯಮಂತ್ರಿ ಭೇಟಿ

ಯಲ್ಲಾಪುರ ಜು. 29 : ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಬಾಧಿತಗೊಳಗಾದ ಯಲ್ಲಾಪುರ ತಾಲೂಕಿನ ವಿವಿಧ ಪ್ರದೇಶಗಳಿಗೆ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್ -19 ಲಸಿಕೆ ನೀಡುವ ಕೇಂದ್ರನ್ನೂ ಪರಿಶೀಲನೆ ಮಾಡಿದರು. ನಂತರ ಒಳ ಹಾಗೂ ಹೊರ ರೋಗಿಗಳ ಆರೈಕೆಯಲ್ಲಿ ಯಾವುದೇ ಕೊರತೆಯಾಗದಂತೆ ಕ್ರಮವಹಿಸಲು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.…

ತಂದೆ -ತಾಯಿ ಸಮಾಧಿಗೆ ಗೌರವ ಸಲ್ಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ ,ಜು, 29:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು , ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ,ಮಾಜಿಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು. ತಂದೆ -ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲನಿಮಿಷ ಮೌನವಾಗಿ ಸ್ಮರಣೆ ಮಾಡಿದರು.ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ ,ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ…

ಹುಬ್ಬಳ್ಳಿ -ಧಾರವಾಡ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ- ಸಿ ಎಂ

ಹುಬ್ಬಳ್ಳಿ.29:ಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ತೆರಳುವ ಮುನ್ನ ವಿಮಾನ ನಿಲ್ದಾಣದ‌ ಬಳಿ ಮಾಧ್ಯಮ‌ದವರೊಂದಿಗೆ ಮಾತನಾಡಿದರು. ಹುಬ್ಬಳ್ಳಿ ನನಗೆ ಅತ್ಯಂತ ಪ್ರೀತಿಯ ಊರು. ನನ್ನ ಶೈಕ್ಷಣಿಕ ಜೀವನದ ಅಪಾರ ಪ್ರಮಾಣದ ಸ್ನೇಹಿತರ ಬಳಗ ಇಲ್ಲಿದೆ. ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಆಗಮಿಸುತ್ತೇನೆ…

ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಭರ್ಜರಿ ಗಿಫ್ಟ್ ಕೊಟ್ಟ ನೂತನ ಸಿಎಂ

ರೈತರ ಮಕ್ಕಳು, ಹಿರಿಯ ನಾಗರೀಕರು ಮತ್ತು ವಿಶೇಷ ಚೇತನರಿಗೆ ಭರ್ಜರಿ ಗಿಫ್ಟ್ ಕೊಟ್ಟ ಬಸವರಾಜ ಬೊಮ್ಮಾಯಿ ಬೆಂಗಳೂರು,ಜು,28:  ಮಕ್ಕಳು, ಹಿರಿಯ ನಾಗರೀಕರು, ವಿಧವೆಯರು ಮತ್ತು ವಿಶೇಷ ಚೇತನರಿಗೆ ಶಿಷ್ಯವೇತನನ್ನು ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಘೋಷಿಸಿದ್ದಾರೆ‌. ಹೌದು ಅಧಿಕಾರಿಗಳ ಜತೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ರೈತರ ಮಕ್ಕಳಿಗೆ ಹೊಸ ಶಿಷ್ಯವೇತನ ಜಾರಿ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಅನುದಾನ ನೀಡಲಾಗುತ್ತದೆ. ರೈತರ ಮಕ್ಕಳು…

1 35 36 37 38 39 49
error: Content is protected !!