ರಾಜ್ಯ
ರಾಜ್ಯದಲ್ಲಿ ಅತ್ಯಾಧುನಿಕ ಜ್ಯುವೆಲ್ಲರಿ ಪಾರ್ಕ್ ನಿರ್ಮಾಣಕ್ಕೆ ಬೆಂಬಲ; ಬೊಮ್ಮಾಯಿ
ಬೆಂಗಳೂರು, ಆ, 27: ಉದ್ಯೋಗ ಸೃಜಿಸುವ ಆಭರಣ ಉದ್ದಿಮೆ ಕೌಶಲ್ಯವಿರುವ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಹೀಗಾಗಿ ಆಧುನಿಕ ತಂತ್ರಜ್ಞಾನದಿಂದ ಆಭರಣ ಉತ್ಪಾದನೆಗೆ ಅನುಕೂಲವಾಗುವಂಥ ಅತ್ಯಾಧುನಿಕ ಜುವೆಲರಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಇರುವ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುವೆಲ್ಲರಿ ಸಂಸ್ಥೆಗೆ ಸಲಹೆ ನೀಡಿದರು. ಇಂದು ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸೌತ್ ಜ್ಯುವೆಲ್ಲರಿ ಷೋ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಬ್ಯುಲಿಯನ್ ವಿನಿಮಯ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಭಾರತದ ಆಭರಣ ವ್ಯಾಪಾರ ಅಂತರರಾಷ್ಟ್ರೀಯ ಮಟ್ಟದಲ್ಲಿ ಪೈಪೋಟಿ ಮಾಡಬೇಕಾದ ಸಂದರ್ಭವಿದೆ.…


















