ರಾಜ್ಯ
ಮಾಜಿ ಸಚಿವ ಸಿ.ಎಂ.ಉದಾಸಿ ನಿಧನ
ಬೆಂಗಳೂರು,ಜೂ,೦೮: ಮಾಜಿ ಸಚಿವ ಹಾಗೂ ಹಾಲಿ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನರಾಗಿದ್ದಾರೆ. ಅವರಿಗೆ ೮೫ ವರ್ಷ ವಯಸ್ಸಾಗಿತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಕಳೆದ ೧೫ ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಾರದ ಹಿಂದೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಮಂಗಳವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿ, ಮಧ್ಯಾಹ್ನದ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರಿಗೆ…
















