ರಾಜ್ಯ
ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್:ಸುಧಾಕರ್
ಬೆಂಗಳೂರು, ಮೇ 20:ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳಿಗೆ 25 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಲಾಗುತ್ತಿದೆ. ಇತ್ತೀಚೆಗೆ 800 ಕಾನ್ಸಂಟ್ರೇಟರ್ ಬಂದಿದ್ದು, ಜಿಲ್ಲೆಗಳಿಗೆ ಹಂಚಲಾಗುತ್ತಿದೆ. ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ ಎಂದರು. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು…



















