ರಾಜ್ಯ
ಹುಬ್ಬಳ್ಳಿ ಪ್ರಕರಣ; ಗಲಭೆಕೋರರ ವಿರುದ್ಧ ಕಠಿಣ ಕ್ರಮ- ಸಿಎಂ
ಹುಬ್ಬಳ್ಳಿ, ಏ, 24:ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪ್ರಕರಣದಲ್ಲಿ ಬೇರೆ ಬೇರೆ ಶಕ್ತಿಗಳ ಹುನ್ನಾರ, ಕುಮ್ಮಕ್ಕು ಏನಿದೆ ಎಂದು ತನಿಖೆಯಾಗುತ್ತಿದೆ. ಈಗಾಗಲೇ ಬಂಧಿಸಿರುವವರಿಂದ ಹೇಳಿಕೆಗಳನ್ನು…