ರಾಷ್ಟ್ರೀಯ
ಪಾಕಿಸ್ತಾನದ ದ್ರೋನ್ ದಾಳಿಯನ್ನು ವಿಫಲಗೊಳಿಸಿದ ಸುದರ್ಶನ ಅಸ್ತ್ರ
ನವದೆಹಲಿ, ಮೇ,10- ಭಾರತದ ದಾಳಿಗೆ ಈಗ ಪಾಕಿಸ್ತಾನ ತಿರುಗೇಟು ನೀಡಲು ಸನ್ನದ್ದವಾಗಿದ್ದು ಗಡಿಯಲ್ಲಿ ಪಾಕ್ ಕತ್ತಲೆ ದಾಳಿ ಆರಂಭಿಸಿದೆ. ರಾಜೌರಿ, ಪೂಂಚ್ ಮತ್ತು ಜಮ್ಮು ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಪಾಕಿಸ್ತಾನ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಪಾಕಿಸ್ತಾನಿ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ…