Browsing: ರಾಷ್ಟ್ರೀಯ

ರಾಷ್ಟ್ರೀಯ

ಕ್ರಿಮಿನಲ್ ಅಭ್ಯರ್ಥಿ ವಿವರ ಅಯ್ಕೆಯಾದ ೪೮ ಗಂಟೆಯೊಳಗೆ ಪ್ರಕರಟಿಸಲು ಸುಪ್ರೀಂ ನಿರ್ದೇಶನ

ನವದೆಹಲಿ, ಆ. ೧೦: ಚುನಾವಣೆ ಘೋಷಣೆಯಾದ ಬಳಿಕ ರಾಜಕೀಯ ಪಕ್ಷಗಳು ಅಭ್ಯರ್ಥಿಗಳಲ್ಲಿ ಯಾವುದಾದರೂ ಕ್ರಿಮಿನಲ್ ಕೇಸ್‌ಗಳು ಇದ್ದರೆ ಅದನ್ನ ಆ ಅಭ್ಯರ್ಥಿಯ ಆಯ್ಕೆಯಾದ ೪೮ ಗಂಟೆಯೊಳಗೆ ಪ್ರಕಟಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನ ಹೊರಡಿಸಿದೆ. ಕಳೆದ ವರ್ಷದ ಫೆಬ್ರವರಿ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಇದೇ ವಿಚಾರದಲ್ಲಿ ಇದೇ ರೀತಿಯ ತೀರ್ಪು ನೀಡಿತ್ತು. ರಾಜಕೀಯ ಪಕ್ಷಗಳು ಅಭ್ಯರ್ಥಿಯಲ್ಲಿ ಕ್ರಿಮಿನಲ್ ಕೇಸ್ ಇದ್ದರೆ ಅದರ ಮಾಹಿತಿಯನ್ನ ೪೮ ಗಂಟೆಯೊಳಗೆ ಪ್ರಕಟಿಸಬೇಕು. ಅಥವಾ ನಾಮಪತ್ರ ಸಲ್ಲಿಕೆಯ ದಿನಕ್ಕೆ ೨ ವಾರ ಮುಂಚಿತವಾಗಿ…

ಕಚ್ಚಾತೈಲ ಬೆಲೆ ಕುಸಿದರೂ ಪರಿಷ್ಕರಣೆಯಾಗದ ಇಂಧನ ಬೆಲೆ..!

ನವದೆಹಲಿ, ಆ, 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಕುಸಿತವಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 23 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 9ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.…

ʼಇ-ರೂಪಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಮೋದಿ ಚಾಲನೆ

ನವದೆಹಲಿ,ಆ,02: ದೇಶದಲ್ಲಿ ಡಿಜಿಟಲ್ ಪಾವತಿಗೆ ಉತ್ತೇಜನ ನೀಡುವ ಸಲುವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫೆರೆನ್ಸ್‌ ಮೂಲಕ ʼಇ-ರೂಪಿ ಡಿಜಿಟಲ್ ಪಾವತಿ ವ್ಯವಸ್ಥೆಗೆ ಚಾಲನೆ ನೀಡಿದ್ದಾರೆ. ಈ ಇ-ರುಪಿ, ಸರ್ಕಾರಿ ಯೋಜನೆಗಳ ಲಾಭಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ಸರ್ಕಾರ ಹಾಗೂ ಫಲಾನುಭವಿ ನಡುವೆ ಪ್ರಸ್ತುತ ಇರುವ ಸೋರಿಕೆ ಹಾಗೂ ದುರುಪಯೋಗವನ್ನು ತಡೆಗಟ್ಟುವಂತಹ ಒಂದು ಉಪಯುಕ್ತ ಉಪಕ್ರಮವಾಗಿದೆ. ಈ ಆಯಪ್ ಅನ್ನು ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದೊಂದಿಗೆ…

ರದ್ದದ ಐಟಿಬಿಟಿ ಕಾಯ್ದೆಅಡಿ ಪ್ರಕರಣದಾಖಲಾತಿಗೆ ಸುಪ್ರೀ ಕೇಂದ್ರಾಡಳಿತ ಪ್ರದೇಶಗಳಿಗೆ ನೊಟೀಸ್

ನವದೆಹಲಿ,ಆ,೦೨: ರದ್ದಾದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ ೬೬ಎ ಅಡಿಯಲ್ಲಿ ಪ್ರಕರಣ ದಾಖಲಿಸುತ್ತಿರುವುದಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಮತ್ತು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಗಳಿಗೆ ನೋಟಿಸ್ ನೀಡಿದೆ. ೨೦೧೫ರಲ್ಲಿ ಸುಪ್ರೀಂ ಕೋರ್ಟ್ ರದ್ದಗೊಳಿಸಿದ್ದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ ೬೬ಎ ಅಡಿಯಲ್ಲಿ ಈಗಲೂ ಜನರ ವಿರುದ್ಧ ಪ್ರಕರಣದಾಖಲಿಸಲಾಗುತ್ತಿದೆ ಎಂದು ಎನ್ ಜಿಒ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಎಲ್ಲಾ ಹೈಕೋರ್ಟ್ ಗಳ ರಿಜಿಸ್ಟ್ರಾರ್…

ಒಲಂಪಿಕ್ಸ್ ಕ್ರೀಡೆಗಳ ಗೆಲುವಿಗೆ ಕೊಂಡಾಡಿದ ಮೋದಿ

ನವದೆಹಲಿ,ಆ,೦೨: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಸೆಮಿಫೈನಲ್ ಗೇರಿರುವ ಭಾರತದ ಸಾಧನೆಯನ್ನು ಪ್ರಧಾನಿ ಮೋದಿ ಕೊಂಡಾಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್ ಲಸಿಕೆ ವಿತರಣೆಯಾಗುತ್ತಿದ್ದು, ಜುಲೈನಲ್ಲಿ ೧೩ ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಈ ತಿಂಗಳು ಲಸಿಕೆ ಕಾರ್ಯಕ್ರಮವನ್ನು ಇನ್ನಷ್ಟು ವೇಗಗೊಳಿಸಲಾಗುವುದು ಸರ್ಕಾರದ ಆದ್ಯತೆಯಾಗಿದೆ. ಇದರ ಬೆನ್ನಲ್ಲೇ ಒಲಂಪಿಕ್ಸ್ ನಲ್ಲಿ ಪಿವಿ ಸಿಂಧು ಪದಕ ಗೆಲವು, ಭಾರತ ಮಹಿಳಾ ಹಾಕಿ ತಂಡದ ಐತಿಹಾಸಿಕ…

ಅಸ್ಸಾಂ,ಮಿಜೋರಾಂ ನಡುವೆ ಮತ್ತೆ ಬುಗಿಲೆದ್ದ ಗಡಿ ಸಂಘರ್ಷ

ಗುವಾಹಟಿ,ಜು,೨೭: ಅಸ್ಸಾಂ ಮತ್ತು ಮಿಜೋರಾಂ ನಡುವೆ ಮತ್ತೇ ಗಡಿ ಸಂಘರ್ಷ ಆರಂಭವಾಗಿದೆ.ಈ ಸಂಘರ್ಷಕ್ಕೆ ಐವರು ಪೊಲೀಸರು ಮೃತಪಟ್ಟಿದ್ದು ಐವತ್ತಕ್ಕೂ ಹೆಚ್ಚು ಜನರ ಗಾಯಗೊಂಡಿದ್ದಾರೆ. ಅಸ್ಸಾಂನ ವೈರೆಂಟ್ಗೆ ಪಟ್ಟಣದಲ್ಲಿ ಸೋಮವಾರ ಹಿಂಸಾಚಾರ ತಲೆದೋರಿದೆ. ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಗೃಹ ಸಚಿವ ಅಮಿತ್ ಶಾ ಅವರು ಸಭೆ ನಡೆಸಿದ ಎರಡೇ ದಿನಕ್ಕೆ ಈ ಸಂಘರ್ಷ ನಡೆದಿದೆ. ಲೈಲಾಪುರದಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಮತ್ತು ಸೇನಾ ಶಿಬಿರವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಮಿಜೋರಾಂ ವಿರುದ್ಧ ಅಸ್ಸಾಂ…

 ಪ್ರಶಾಂತ್ ಕಿಶೋರ್, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಸಂಚಲನ

ನವದೆಹಲಿ,ಜು,೧೩:ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮಂಗಳವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್ ಕಿಶೋರ್ ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು. ಜೂನ್ ೨೧ರಂದು ಪ್ರಶಾಂತ್ ಕಿಶೋರ್ ಹಾಗೂ ಶರದ್ ಪವಾರ್ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. ೨…

ಜುಲೈ ೪ ರಿಂದಲೇ ಆರಂಭವಾಗಿದೆಯಂತೆ ಕೋವಿಡ್ ಮೂರನೇ ಅಲೆ!

ಹೈದರಾಬಾದ್,ಜು,೧೩: ಕೋವಿಡ್-೧೯ ಮೂರನೇ ಅಲೆ ಬರುತ್ತದೆ ಎನ್ನುವ ದಾವಂತದಲ್ಲಿರುವಾಗಲೇ ಹೈದರಾಬಾದ್‌ನಲ್ಲಿ ವಿಜ್ಞಾನಿಯೊಬ್ಬರು ಕಳೆದ ಜುಲೈ ೪ ರಿಂದಲೇ ಆರಂಭವಾಗಿದೆ ಎಂಬ ಅಘತಾಕಾರಿ ಮಾಹಿತಿಯನ್ನು ನೀಡಿದ್ದಾರೆ ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಸೇವೆ ಸಲ್ಲಿಸಿದ ಹಿರಿಯ ಭೌತವಿಜ್ಞಾನಿ ಡಾ.ವಿಪಿನ್ ಶ್ರೀವಾಸ್ತವ ಅವರು, ಭಾರತದಲ್ಲಿ ಕೋವಿಡ್-೧೯ ಸೋಂಕಿನ ಹರಡುವಿಕೆಯನ್ನು ವಿವರವಾಗಿ ವಿಶ್ಲೇಷಿಸಿದ್ದು, ಜುಲೈ ೪ ರಿಂದಲೇ ಮೂರನೇ ಅಲೆ ಪ್ರಾರಂಭವಾಗಿರಬಹುದು ಎಂದು ಹೇಳಿದ್ದಾರೆ. ಕಳೆದ ೪೬೩ ದಿನಗಳಲ್ಲಿ ದೇಶದಲ್ಲಿ ಸೋಂಕು ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯನ್ನು ಅಧ್ಯಯನ ಮಾಡಲು ವಿಶೇಷ ವಿಧಾನವನ್ನು…

ಜುಲೈ 19 ರಿಂದ ಸಂಸತ್ ಅಧಿವೇಶನ

ನವದೆಹಲಿ,ಜು,12: ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 19ರಿಂದ ಆರಂಭವಾಗಲಿದೆ ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಸೋಮವಾರ ಮಾಹಿತಿ ನೀಡಿದ್ದಾರೆ. 19 ದಿನಗಳ ಕಾಲ ನಡೆಯಲಿರುವ ಸಂಸತ್ತಿನ ಮುಂಗಾರು ಅಧಿವೇಶನವು ಆಗಸ್ಟ್‌ 13ಕ್ಕೆ ಅಂತ್ಯಗೊಳ್ಳಲಿದೆ ಎಂದು ಬಿರ್ಲಾ ತಿಳಿಸಿದ್ದಾರೆ. ಸಾಮಾನ್ಯವಾಗಿ ಮುಂಗಾರು ಅಧಿವೇಶನವು ಜುಲೈ ಮೂರನೇ ವಾರದಲ್ಲಿ ಆರಂಭವಾಗಿ, ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಕೊನೆಗೊಳ್ಳುವುದು ವಾಡಿಕೆ. ಆದರೆ, ಈ ಬಾರಿ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯ ಶಿಫಾರಸಿನ ಮೇಲೆ ಅಧಿವೇಶನದ ಅವಧಿಯನ್ನು ನಿಗದಿಪಡಿಸಲಾಗಿದೆ. ಅಧಿವೇಶನದ ಅವಧಿಯಲ್ಲಿ ಕೋವಿಡ್‌…

ರಾಜಸ್ಥಾನದಲ್ಲಿ ಸಿಡಿಲು ಬಡೆದು 11 ಮಂದಿ ಸಾವು

ಜೈಪುರ,ಜು:ನಿನ್ನೆ ರಾತ್ರಿ ಸಿಡಿಲು ಬಡೆದು 11ಮಂದಿ ಸಾವನ್ನಪ್ಪಿದ್ದು ಕೆಲವರು ಗಾಯಗೊಂಡ ಘಟನೆ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್‌ನಲ್ಲಿ ಜರುಗಿದೆ. ಅಮೆರ್‌ ಪ್ಯಾಲೆಸ್‌ನ ವಾಚ್‌ ಟವರ್‌ ಮೇಲೆ ಜನರು ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಕೆಲವರು ಸಿಡಿಲಿನ ಭಯಕ್ಕೆ ವಾಚ್‌ ಟವರ್‌ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ. ಸಿಡಿಲು ಬಡಿದಾಗ ವಾಚ್‌ ಟವರ್‌ ಮೇಲೆ 27 ಜನರು ಇದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ…

3ನೇ ಅಲೆಗೆ ಆಮ್ಲಜನಕ ಸೇರಿದಂತೆ ಎಲ್ಲಾ ವೈದ್ಯಕೀಯ ಸೌಂಕರ್ಯಗಳ ಸಿದ್ದತೆ ಮಾಡಿಕೊಂಡ ಕೇಂದ್ರ

ನವದೆಹಲಿ,ಜು10: ಕೋವಿಡ್‌–19ರ ಎರಡನೇ ಅಲೆ ಸಂದರ್ಭದಲ್ಲಿ ಆದ ಕೆಲ ವೈದ್ಯಕೀಯ ಸೌಕರ್ಯಗಳ ತೊಂದರೆಯಿಂದ ಪಾಠ ಕಲೆತ ಕೇಂದ್ರ ಈಗ ಮೂರನೇ ಅಲೆ ಮುಂಜಾಗೃತೆ ವಹಿಸಿ ಬೇಕಾದ ಎಲ್ಲಾ ಸೌಕರ್ಯಗಳಿಗೆ ಮುಂದಾಗಿದೆ. ದೇಶದಾದ್ಯಂತ ವೈದ್ಯಕೀಯ ಆಮ್ಲಜನಕ ಪೂರೈಕೆ ಹೆಚ್ಚಳದ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ್ದಾರೆ. 1500ಕ್ಕೂ ಹೆಚ್ಚು ಪಿಎಸ್‌ಎ ಮಾದರಿಯ ಆಮ್ಲಜನಕ ಉತ್ಪಾದನೆ ಘಟಕಗಳು ಶೀಘ್ರವೇ ಕಾರ್ಯಾರಂಭ ಮಾಡಲಿವೆ ಎಂಬ ಮಾಹಿತಿಯನ್ನು ಪ್ರಧಾನಿಗೆ ಅಧಿಕಾರಿಗಳು ನೀಡಿದ್ದಾರೆ. ಈ ಘಟಕಗಳ ಮೂಲಕ, ನಾಲ್ಕು…

ಮೋದಿ ಸಂಪುಟಕ್ಕೆ 45 ನೂತನ ಸಚಿವರು

ನವದೆಹಲಿ,ಜು,07: ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರ ಅವಧಿಯಲ್ಲಿ ಮೊದಲ ಬಾರಿಗೆ ಸಚಿವ ಸಂಪುಟದಲ್ಲಿ ಮಹತ್ತರ ಬದಲಾವಣೆ ಮಾಡಿದ್ದು, 43 ನೂತನ ಸಚಿವರು ಪದಗ್ರಹಣ ಮಾಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಇಂದು ಸಂಜೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಎ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್, ಭಗವಂತ್ ಖೂಬಾ ಪ್ರಮಾಣ ವಚನ ಸ್ವೀಕರಿಸಿದರು. ಕಳೆದ ವರ್ಷ ಕಾಂಗ್ರೆಸ್ ನಿಂದ ಬಿಜೆಪಿ ಸೇರ್ಪಡೆಗೊಂಡು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದಕ್ಕೆ ಕಾರಣರಾಗಿದ್ದ ಸಂಸದ ಜ್ಯೋತಿರಾದಿತ್ಯ ಸಿಂಧಿಯಾಗೂ ಸಚಿವ ಸ್ಥಾನ ದೊರೆತಿದ್ದು…

ಸದಾನಂದಗೌಡ ಸೇರಿ ಐವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

ಬೆಂಗಳೂರು, ಜು,07:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎರಡನೇ ಅವಧಿಯಲ್ಲಿ ಮೊದಲ ಬೃಹತ್ ಸಂಪುಟ ಪುನಾರಚನೆಗೆ ಮುಂಚಿತವಾಗಿ ಸಚಿವರಾದ ಡಿವಿ ಸದಾನಂದಗೌಡ, ಸಂತೋಷ್ ಗಂಗ್ವಾರ್, ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಮತ್ತು ದೇಬಶ್ರೀ ಚೌಧರಿ ಅವರು ಇಂದು ರಾಜೀನಾಮೆ ನೀಡಿದರು. ಜ್ಯೋತಿರಾದಿತ್ಯ ಸಿಂಧಿಯಾ, ಸರ್ಬಾನಂದ ಸೋನೊವಾಲ್, ನಾರಾಯಣ್ ರಾಣೆ ಮತ್ತು ಪಶುಪತಿ ನಾಥ್ ಪರಾಸ್ ಅವರಂತಹ ಹೆಸರುಗಳು ಹೊಸ ಸಂಪುಟ ಸೇರ್ಪಡೆಯಾಗಲಿದೆ ಎಂಬುದಾಗಿ ಕೇಳಿ ಬರುತ್ತಿದೆ. ಕೇಂದ್ರ ಸಚಿವ ಸಂಪುಟ ಪುನರಚನೆಯ ಸಮಯ ಸಮೀಪಿಸುತ್ತಿರುವಾಗಲೇ, ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ…

ರಾಜ್ಯದ ನೂತನ ರಾಜ್ಯಪಾಲರಾಗಿ ಥಾಮರ್ ಚಂದ್ ನೇಮಕ

ಬೆಂಗಳೂರು,ಜು,೦೬: ಕರ್ನಾಟಕ ರಾಜ್ಯಪಾಲ ವಾಜುಭಾಯ್ ವಾಲಾ ಅವರ ಅವಧಿ ಮುಗಿದ ಕಾರಣ ನೂತನ ರಾಜ್ಯಪಾಲರನ್ನಾಗಿ ಥಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಿಸಲಾಗಿದೆ. ಕರ್ನಾಟಕ ಸೇರಿದಂತೆ ೮ ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚರನೆ ಬೆನ್ನಲ್ಲೇ ನೇಮಕಾತಿಯಾಗಿದೆ. ಈ ಮೂಲಕ ಕರ್ನಾಟಕದ ೧೯ನೇ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್ ನೇಮಕವಾಗುವ ಜತೆಗೆ ಒಟ್ಟು ೮ ರಾಜ್ಯಗಳಿಗೆ…

ಮೇಕೆದಾಟು ಯೋಜನೆ ಮಾಡಬೇಡಿ ತಮಿಳುನಾಡು ಸಿಎಂ ಪತ್ರ

ಚೆನ್ನೈ,ಜು,04: ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಮುಂದುವರೆಸಬೇಡಿ ಎಂದು ತಮಿಳುನಾಡು ಸಿ.ಎಂ.ಸ್ಟಾಲಿನ್ ಕರ್ನಾಟಕ ಸಿಎಂಗೆ ಪತ್ರ ಬರೆದಿದ್ದಾರೆ. ಮೇಕೆ ದಾಟು ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗಲಿದೆ ನಮ್ಮ ಲ್ಲೂ ನೀರಿಗೆ ಅಭಾವವಿದೆ. ನಾವು ಪ್ರತಿನಿತ್ಯ ಪರದಾಡುತ್ತಿದ್ದೇವೆ. ನಿಮ್ಮ ಯೋಜನೆಯಿಂದ ತಮಿಳುನಾಡಿಗೆ ತೊಂದರೆಯಾಗುವುದಿಲ್ಲ ಎಂಬುದು ಸಮಂಜಸವಲ್ಲ ಎಂದಿದ್ದಾರೆ. ಆ ಪತ್ರದಲ್ಲಿ ಎರಡೂ ರಾಜ್ಯಗಳ ಮಧ್ಯೆ ಸೌಹಾರ್ದ ಸಂಬಂಧ ಬೆಳೆಯಬೇಕು. ಹೀಗಾಗಿ, ಮೇಕೆದಾಟು ಯೋಜನೆಗೆ ಯಾವುದೇ ವಿರೋಧ ವ್ಯಕ್ತಪಡಿಸಬಾರದು. ಎರಡು ರಾಜ್ಯಗಳ ಅಧಿಕಾರಿಗಳು ಜತೆಗೂಡಿ ದ್ವಿಪಕ್ಷೀಯ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು.…

ಒಂದು ರಾಷ್ಟ್ರ ಒಂದು ಪಡಿತರ ಕಾರ್ಡ್ ಯೋಜನೆ ಜಾರಿಗೆ ಸುಪ್ರೀಂ ಗಡವು

ನವದೆಹಲಿ,ಜೂ,೨೯: ಮುಂದಿನ ಜುಲೈ ೩೧ ರೊಳಗೆ ’ಒಂದು ರಾಷ್ಟ್ರ, ಒಂದು ಪಡಿತರ ಕಾರ್ಡ್’ಯೋಜನೆಯನ್ನು ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್, ಮಂಗಳವಾರ ಗಡುವು ನೀಡಿದೆ. ಸಾಂಕ್ರಾಮಿಕ ರೋಗ ಮುಂದುವರಿಯುವವರೆಗೆ ಪಡಿತರವನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದು, ಇದರ ಜೊತೆಗೆ ವಲಸೆ ಕಾರ್ಮಿಕರನ್ನು ನೋಂದಾಯಿಸಲು ಪೋರ್ಟಲ್ ಸ್ಥಾಪಿಸುವಂತೆಯೂ ಕೇಂದ್ರಕ್ಕೆ ಸೂಚನೆ ಕೊಟ್ಟಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೋವಿಡ್-೧೯ ರಿಂದ ಬಾಧಿತರಾದ ವಲಸೆ ಕಾರ್ಮಿಕರ…

ಕೊರೊನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

ನವದೆಹಲಿ,ಜೂ,28:ಕೊರೋನ ಸೋಂಕಿತರ ಸಂಖ್ಯ ಇಳಿಮುಖವಾಗುತ್ತಿದ್ದು ಕೊರೊನಾ ಬಾಧಿತ ವಲಯಗಳಿಗೆ ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುದ್ದಿಗೋಷ್ಡಿ ನಡೆಸಿ ವಿವಿರ ನೀಡಿದರು. ಕೊರೋನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ, ವೈದ್ಯಕೀಯ ಮೂಲಸೌಕರ್ಯಕ್ಕೆ 50 ಸಾವಿರ ಕೋಟಿ ರೂ. ಉಳಿದ ವಲಯಗಳಿಗೆ 60 ಸಾವಿರ ಕೋಟಿ ಅನುದಾನ ನೀಡಲಾಗುತ್ತದೆ ಎಂದು ತಿಳಿಸಿದರು. 1.5 ಲಕ್ಷ ಕೋಟಿ ರೂ. ತುರ್ತು ಕ್ರೆಡಿಟ್…

ಜಮ್ಮು ಕೇಂದ್ರಿತ ಸ್ಥಳಗಳ ಮೇಲೆ ಇದೆ ಮೊದಲಬಾರಿ ಡ್ರೋನ್ ಬಳಕೆ

ಜಮ್ಮು,ಜೂ28: ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನಕೇಂದ್ರಿತ ಉಗ್ರರು ಇದೇ ಮೊದಲ ಬಾರಿಗೆ ಡ್ರೋನ್‌ಗಳನ್ನು ಬಳಸಿದ್ದಾರೆ. ಜಮ್ಮು ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ಪಡೆ ಕೇಂದ್ರವೊಂದರ ಮೇಲೆ ಭಾನುವಾರ ಬೆಳಿಗ್ಗಿನ ಜಾವ 1.40ರ ಹೊತ್ತಿಗೆ ಎರಡು ಬಾಂಬ್‌ ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್‌ ದಾಳಿಗಳು ನಡೆದಿವೆ. ಇಬ್ಬರು ಯೋಧರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಭಾರಿ ಭದ್ರತೆಯ ತಾಂತ್ರಿಕ ಪ್ರದೇಶದ ಒಂದಸ್ತಿನ ಕಟ್ಟಡದ ಚಾವಣಿಯನ್ನು ಸೀಳಿ ಮೊದಲ ಬಾಂಬ್‌…

ಹಳ್ಳಿಹುಡುಗ ರಾಷ್ಟ್ರಪತಿ ಹುದ್ದೆಗೇರಿದ್ದೇನೆ ಎಂದರೆ ಅದಕ್ಕೆ ಪ್ರಜಾಪ್ರಭುತ್ವ ಕಾರಣ: ಕೋವಿಂದ್

ಕಾನ್ಪುರ,ಜೂ,27:ಇಂಥ ಚಿಕ್ಕ ಹಳ್ಳಿಯಲ್ಲಿ ‌ಜನಸಿದ‌ನಾನು ಈ ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನದಲ್ಲಿ ಕೂರುತ್ತೇನೆ  ಎಂದು ಕನಸಲ್ಲೂ ಕಂಡಿರಲಿಲ್ಲ ಇದಕ್ಕೆ ಈ ದೇಶದ ಪ್ರಜಾಪ್ರಭುತ್ವ ವೇ ಕಾರಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಅವರು ಭಾನುವಾರ ಅವರ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಪರಾಂಖ್ ಗ್ರಾಮದಲ್ಲಿ ಅಭಿನಂದನೆ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ತಮ್ಮ ಬಾಲ್ಯದ ದಿನಗಳು, ಕನಸು ಕಂಡಿದ್ದು, ಮುಂದೆ ಬೆಳೆದ ರೀತಿಯನ್ನು ಬಣ್ಣಿಸಿದರು. ನನ್ನಂತಹ ಸಾಮಾನ್ಯ ಹಳ್ಳಿಯಲ್ಲಿ…

ದೇಶದಲ್ಲಿ ಹೆಚ್ಚುತ್ತಿರುವ ಡೆಲ್ಟಾ ಪ್ಲೆಸ್ ಕೊರೊನಾ ಸಂಖ್ಯೆ

ನವದೆಹಲಿ,ಜೀ,25: ಕೊರೊನಾ ಮೂರನೇ ಅಲೆ ಆರಂಭದ ಮುನ್ನವೇ ಡೆಲ್ಟಾ ಪ್ಲೆಸ್ ಕೋವಿಡ್ ಸಂಖ್ಯೆ ಜಾಸ್ತಿಯಾಗುತ್ತಿದೆ. 45,000 ಮಾದರಿಗಳ ಪೈಕಿ 48 ‘ಡೆಲ್ಟಾ ಪ್ಲಸ್’ ಕೋವಿಡ್ ರೂಪಾಂತರ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಅಂದರೆ 20 ಪ್ರಕರಣಗಳು ಎಂದು ವರದಿಯಾಗಿದೆ ಎಂದು ಕೇಂದ್ರ ತಿಳಿಸಿದೆ. ತಮಿಳುನಾಡಿನಲ್ಲಿ ಒಂಬತ್ತು, ಮಧ್ಯಪ್ರದೇಶದಲ್ಲಿ ಏಳು, ಕೇರಳದಲ್ಲಿ ಮೂರು, ಪಂಜಾಬ್ ಮತ್ತು ಗುಜರಾತ್‌ನಲ್ಲಿ ತಲಾ ಎರಡು ಪ್ರಕರಣಗಳು ಪತ್ತೆಯಾಗಿವೆ. ಇನ್ನು ಆಂಧ್ರಪ್ರದೇಶ, ಒಡಿಶಾ, ರಾಜಸ್ಥಾನ, ಜಮ್ಮು ಮತ್ತು ಕರ್ನಾಟಕದಲ್ಲಿ ತಲಾ ಒಂದು…

1 3 4 5 6 7 9
error: Content is protected !!