ರಾಷ್ಟ್ರೀಯ
ಗುಜರಾತ್ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ
ಅಹಮದಾಬಾದ್,ಸೆ,೧೩: ಗುಜರಾತ್ನ ೧೭ನೇ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾದ ಭೂಪೇಂದ್ರ ಪಟೇಲ್ (೫೯) ಇಂದು ಪ್ರಮಾಣ ವಚನ ಸ್ವೀಕರಿಸಿದರು. ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಅಹಮದಾಬಾದ್ನ ರಾಜಭವನದಲ್ಲಿ ಆಯೋಜಿಸಲಾಗಿತ್ತು. ರಾಜ್ಯಪಾಲ ಆಚಾರ್ಯ ದೇವವೃತ ಪ್ರತಿಜ್ಞಾ ವಿಧಿ ಬೋಧಿಸಿದರು. ಗೃಹ ಸಚಿವ ಅಮಿತ್ ಶಾ ಸೇರಿ ಹಲವು ಕೇಂದ್ರ ಸಚಿವರು, ಉಪಮುಖ್ಯಮಂತ್ರಿ ನಿತಿನ್ ಪಟೇಲ್, ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟg, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಗೋವಾ ಸಿಎಂ ಪ್ರಮೋದ್ ಸಾವಂತ್ ಮತ್ತಿತರ ಗಣ್ಯರು ಸಮಾರಂಭದಲ್ಲಿ…


















