ಸಾಹಿತ್ಯ
ಕುವೆಂಪು ಅವರ ವೈಚಾರಿಕತೆ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ: ಸಿ.ಎಂ.ಸಿದ್ದರಾಮಯ್ಯ
ಬೆಂಗಳೂರು ಜು 5-ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಹೆಚ್ಚಾಗುತ್ತಿದೆ…