ಸಿನೆಮಾ
ಖ್ಯಾತ ನಿರ್ಮಾಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ
ಬೆಂಗಳೂರು,ಜೂ,14: ಕನ್ನಡ ಚಿತ್ರರಂಗದ ಖ್ಯಾತ ನಿರ್ಮಪಕ ಕೆ.ಸಿ.ಎನ್.ಚಂದ್ರಶೇಖರ್ ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಭಾನುವಾರ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ಕುಮಾರ್ ನಟನೆಯ ಶಂಕರ್ ಗುರು ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಪ್ರಾರಂಭ ಮಾಡಿದ್ದರು. ಈ ಸಿನಿಮಾ…