ಕ್ರೀಡೆ
ಟೋಕಿಯೋ ಒಲಿಂಪಿಕ್ಸ್: ಬಂಗಾರ ಗೆದ್ದು ಇತಿಹಾಸ ಬರೆದ ನೀರಜ್ ಚೋಪ್ರಾ!
ಟೋಕಿಯೋ,ಆ,07: ಒಲಿಂಪಿಕ್ಸ್ನಲ್ಲಿ ಭಾರತದ ಅಥ್ಲೀಟ್ ನೀರಜ್ ಚೋಪ್ರಾ ದೇಶಕ್ಕೆ ಚೊಚ್ಚಲ ಬಂಗಾರ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಜಾವೆಲಿನ್ ಥ್ರೋನಲ್ಲಿ ನೀರಜ್ ಬಂಗಾರದ ಪದಕ ಜಯಿಸಿದ್ದಾರೆ. ಇದು ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಲಭಿಸುತ್ತಿರುವ 7ನೇ ಪದಕ ಮತ್ತು ಚೊಚ್ಚಲ ಬಂಗಾರ. ಮೊದಲ ಬಾರಿಗೆ ಒಲಿಂಪಿಕ್ಸ್ನಲ್ಲಿ ಪಾಲ್ಗೊಂಡಿದ್ದ ನೀರಜ್ ಆರಂಭಿಕ ಕ್ರೀಡಾಕೂಟದಲ್ಲೇ ಭಾರತಕ್ಕೆ ಬಂಗಾರದ ಮೆರಗು ತಂದಿದ್ದಾರೆ. ಶನಿವಾರ ಪುರುಷರ ಜಾವೆಲಿನ್ ಥ್ರೋ ಫೈನಲ್ನಲ್ಲಿ ಪಾಲ್ಗೊಂಡಿದ್ದ ನೀರಜ್ ಚೋಪ್ರಾ 87.58 ಮೀಟರ್ ಸಾಧನೆಯೊಂದಿಗೆ ಚಿನ್ನಕ್ಕೆ ಮುತ್ತಿಕ್ಕಿದ್ದಾರೆ. ಮೂರು ಪ್ರಯತ್ನಗಳಲ್ಲಿ…