ಕ್ರೀಡೆ
ಪಂಜಾಬ್ ತಂಡವನ್ನು ಬಗ್ಗು ಬಡೆದ ರಾಯಲ್ ಚಾಲೆಂಜರ್ಸ್ ತಂಡ
ಮುಲ್ಲಾನ್‌ಪುರ,ಏ,೨೦- ತವರಿನ ಅಂಗಳ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಪಂಜಾಪ್ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ ಐದನೇ ಗೆಲುವು ಪಡೆದಿದ್ದಾರೆ. ತವರಿನಲ್ಲಿ ಅನುಭವಿಸಿದ್ದ ಸೋಲಿಗೆ ಬೆಂಗಳೂರು ಬಾಯ್ಸ್, ಪಂಜಾಬ್‌ಗೆ ನುಗ್ಗಿ ಅಯ್ಯರ್ ಪಡೆಯನ್ನು ಬಗ್ಗುಬಡಿದಿದೆ. ಈ ಮೂಲಕ ಸೋಲಿನ ಲೆಕ್ಕಾಚಾರ ಚುಕ್ತ ಮಾಡುವಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯಶಸ್ವಿಯಾಗಿದೆ. ೧೫೮ ರನ್‌ಗಳ ಗುರಿಯನ್ನು ೭ ವಿಕೆಟ್ ಅಂತರದಲ್ಲಿ ಆರ್‌ಸಿಬಿ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಆರ್‌ಸಿಬಿ…