ಕ್ರೀಡೆ
ಚಿನ್ನದ ಹುಡುಗನಿಗೆ ಶುಭಾಶಯಗಳ ಮಹಾಪೂರ: ಭರ್ಜರಿ ಗಿಫ್ಟ್ ಘೋಷಿಸಿದ ಆನಂದ್ ಮಹೀಂದ್ರಾ
Reported by: H.D.Savita ಟೋಕಿಯೋ: ಜಾವಲಿನ್ ಥ್ರೋ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ತಂದು ಕೊಟ್ಟ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿವೆ. ಹರಿಯಾಣ ಸರ್ಕಾರವು 6ಕೋಟಿ ರೂ. ಬಹುಮಾನ ಘೋಷಿಸಿದೆ. ಅದರ ಜೊತೆಗೆ ಎ ದರ್ಜೆಯ ಸರ್ಕಾರಿ ಉದ್ಯೋಗವನ್ನು ನೀಡಿದೆ. ಅಲ್ದೇ ಬಿಸಿಸಿಐ ಕೂಡಾ 1ಕೋಟಿ ರೂ. ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಮಹೀಂದ್ರಾ ಕಂಪನಿಯ ಮಾಲೀಕ ಆನಂದ್ ಮಹೀಂದ್ರಾ ಭರ್ಜರಿ ಉಡುಗೊರೆ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ದೇಶದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ.…













