Browsing: ರಾಜಕೀಯ

ರಾಜಕೀಯ

ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ಬಿಡುಗಡೆ; ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ,ಅ,16- ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಶಾಲೆಯನ್ನು ಕೊಡುವುದು ಬೇಡ ಎಂದು ಹೇಳಿದ್ದೇನೆ. ಅಲ್ಲದೆ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ ನೀಡಿದ್ದೆ. ಅದರ ವಿಚಾರದಲ್ಲಿ ನಮ್ಮ ತಂಡವೊಂದು ಮಂಡ್ಯದಲ್ಲಿ ಕೆಲಸ ಮಾಡುತ್ತಿದೆ. ಯಾರು ಅದರ ಬಗ್ಗೆ ಲಘುವಾಗಿ…

ನವೆಂಬರ್ ನಲ್ಲಿ ಕೇಂದ್ರದಲ್ಲಿ ಕ್ರಾಂತಿ; ಸಂತೋಷ್ ಲಾಡ್ ಬಾಂಬ್

ಬೀದರ್, ಅ,14-ನವೆಂಬರ್ ನಲ್ಲಿ ಕೇಂದ್ರ ಸರ್ಕಾರದಲ್ಲಿ ಕ್ರಾಂತತಿಯಾಗಲಿದ್ದು,ನಿತನ್ ಗಡ್ಕರಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ನಮಗೂ ಕೇಂದ್ರದ ʻನವಂಬರ್ ಕ್ರಾಂತಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ. ಇನ್ನು ನಿನ್ನೆಯ ಡಿನ್ನರ್‌ ಮೀಟಿಂಗ್‌ ನಲ್ಲಿ ಸಂಪುಟ ಪುನರ್‌ ರಚನೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಲ್ಲಾ ಉಹಾ ಪೋಹಗಳಷ್ಟೆ. ಸಂಪುಟ ಪುನರ್‌ರಚನೆ ಮಾಡುವುದಾದರೆ ಸಿಎಂ ಡಿಸಿಎಂಗೆ ಪೂರ್ಣ…

ಕಲಬುರ್ಗಿ ಗ್ರಂಥಪಾಲಕಿ ಆತ್ಮಹತ್ಯೆ: ಸಿಬಿಐ ತನಿಖೆ ನಡೆಸಲು ಆರ್. ಅಶೋಕ್ ಆಗ್ರಹ

ಬೆಂಗಳೂರು,ಅ,14-ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ; ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಅತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್‍ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ. ಕರೂರಿನಲ್ಲಿ ಸುಮಾರು 50 ಜನ ಸತ್ತಿದ್ದರು. ಅಲ್ಲಿ ಎಸ್.ಐ.ಟಿ. ಮಾಡಿ ಆ…

ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಅ, 13- ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಖ್ಯಮಂತ್ರಿಗಳು ತಮ್ಮ ಸಂಪುಟ ಸದಸ್ಯರಿಗಾಗಿ ಇಂದು ಆಯೋಜಿಸಿರುವ ಭೋಜನಕೂಟದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳು-ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಅ,11- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. ಬೆಂಗಳೂರು…

ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ: ಸಿ.ಎಂ

ಮೈಸೂರು ಸೆ 22- ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ…

ಸೆ.22 ರಿಂದ ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ,12-ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ಸೆಪ್ಟಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿಎಂ ಅಧಿಕೃತ ಕಚೇರಿ ಕೃಷ್ಣದಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು,2015ರಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿದ್ದರು. ಕಾಂತರಾಜ್ ಅವರು ವರದಿಯನ್ನು ಸಲ್ಲಿಸಿ 10ವರ್ಷ ಆದ ಕಾರಣ ಹೊಸ ಸಮೀಕ್ಷೆಗೆ ತೀರ್ಮಾನ ಮಾಡಿ ಆ ಕಾರ್ಯವನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗ…

ದ್ವೇಷ ಭಾಷಣ ಆರೋಪ- ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲು

ಬೆಂಗಳೂರು, ಸೆ,11-ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಮದ್ದೂರಿನಲ್ಲಿ ಈಚೆಗೆ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಗಣೇಶ ವಿಸರ್ಜನೆ ಯಲ್ಲಿ ಪಾಲ್ಗೊಂಡು ಭಾಷಣ ಮಾಡಿದ್ದರು. ಈ ವೇಳೆ ಸಿ.ಟಿ.ರವಿ ಭಾಷಣದಲ್ಲಿ’ ತೊಡೆ ತಟ್ಟುವುದು ಗೊತ್ತು,ತಲೆಕಡಿಯುವುದು ಗೊತ್ತು’ ಎಂದಿದ್ದರು.ಸಹಜವಾಗಿಯೇ ಪ್ರಚೋದನಾಕಾರಿ ಭಾಷಣವಾಗಿದ್ದು ಈ ಹಿನ್ನೆಲೆಯಲ್ಲಿ ಅವರ…

ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕನಕಪುರ, ಸೆ.10-ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ”‌ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ”…

ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ

ವಿಜಯಪುರ,ಸೆ,06-ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ ಮಾಡಿ…

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಬೆಂಗಳೂರು, ಸೆ.05-“ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದರೆ, ಬಿಜೆಪಿ ಏಕೆ ಗಾಬರಿಯಾಗಬೇಕು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯಿಸಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡುವ ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಿದೆ ಎನ್ನುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, “ಇದು ಕರ್ನಾಟಕ ಸರ್ಕಾರದ ತೀರ್ಮಾನ. ಇದರಿಂದ ಬಿಜೆಪಿಗೆ ಆತಂಕವೇಕೆ? ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ…

ಬ್ಯಾಲೆಟ್ ಪೇಪರ್ ಬಳಕೆಗೆ ಮುಂದಾದ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು,ಸೆ.೫- ಬರುವ ಸ್ಥಳೀಯ ಚುನಾವಣೆಗಳಿಗೆ ಇವಿಎಂ ಯಂತ್ರ ಬದಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕಾಂಗ್ರೆಸ್ ಸರ್ಕಾರದ ಸಂಪುಟ ತಗೆದುಕೊಂಡಿರುವ ನಿರ್ಧಾರವನ್ನು ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ್ಲ ಎಕ್ಸ್ನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿರುವ ಅವರು, ಇವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ ೨೦೨೩ರ ಚುನಾವಣೆಯಲ್ಲಿ ಆರಿಸಿ ಬಂದಿರುವ ೧೩೬ ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ…

ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಅವರ ಹೆಸರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು, ಆ. 30-“ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಹೆಸರನ್ನು ಇಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಡಿ. ಕೆ. ಶಿವಕುಮಾರ್ ಅವರು ಮಾತನಾಡಿದರು. “ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ…

ಜಿಎಸ್ ಟಿ ಸರಳೀಕರಣದಿಂದ ರಾಜ್ಯಕ್ಕೆ 2.50 ಲಕ್ಷ ಕೋಟಿ ನಷ್ಟ- ಕೃಷ್ಣ ಭೈರೇಗೌಡ

ನವದೆಹಲಿ, ಆ30- ಕೇಂದ್ರ ಸರ್ಕಾರ ಜಿಎಸ್ ಟಿ ಸರಳೀಕರಣ ಮಾಡಿರು ವ ಕಾರಣ ರಾಜ್ಯಗಳ ತೆರಿಗೆಯಲ್ಲಿ 2.50 ಲಕ್ಷ ಕೋಟಿ ನಷ್ಟವಾಗುತ್ತಿದ್ದುವಿದರವಲಾಭ ಕೆಲವು ಕಂಪನಿಗಳಿಗೆ ಸಿಗುವಂತಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಕಳವಳ ವ್ಯಕ್ತ ಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್‌ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿ ರೂಪಾಯಿಯಿಂದ 2.5 ಲಕ್ಷ ಕೋಟಿ…

ದಾವಣಗೆರೆಯಲ್ಲಿ ಸುಸ್ಥಿರ ಭತ್ತದ ಕೃಷಿ ಯೋಜನೆಗೆ ಪ್ರಾಯೋಗಿಕ ಚಾಲನೆ.

ಬೆಂಗಳೂರು ಆ,21-ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸಹಿ ಹಾಕಿದರು. ಸಚಿವ ಚಲುವರಾಯಸ್ವಾಮಿಯವರು ಕೃಷಿ ಇಲಾಖೆಯ ಅಧಿಕಾರ ವಹಿಸಿಕೊಂಡ ನಂತರ ರೈತರ ಅಭಿವೃದ್ಧಿ ರೈತ ಪರ ಕೆಲಸಕ್ಕೆ ಒತ್ತು ನೀಡಿದ್ದು, ಈಗಾಗಲೇ ರೈತ ಕರೆ ಕೇಂದ್ರಕ್ಕೆ ಆಧುನಿಕ ತಂತ್ರಜ್ಞಾನದ ಸ್ಫರ್ಶ ನೀಡಿರುವ ಸಚಿವರು,…

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಬೆಂಗಳೂರು, ಆ.21-ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025’ ಅನ್ನು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮೇಲ್ಮನೆಯಲ್ಲಿ ಮಂಡಿಸಿದರು. ಅಲ್ಪಚರ್ಚೆ ಬಳಿಕ ಅನುಮೋದನೆ ನೀಡಲಾಯಿತು. ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ…

ಬಿಜೆಪಿಯಿಂದ ಧರ್ಮಯಾತ್ರೆ’ಗೆ ಚಾಲನೆ

ಬೆಂಗಳೂರು,ಆ21-: ಬಿಜೆಪಿ ಬ್ಯಾಟರಾಯನಪುರ ಕ್ಷೇತ್ರದ ವತಿಯಿಂದ ರಾಜ್ಯ ಬಿಜೆಪಿ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ ಅವರ ನೇತೃತ್ವದಲ್ಲಿ ಕೊಡಿಗೇಹಳ್ಳಿಯ ಶ್ರೀ ಗುಂಡಾಂಜನೇಯ ಸ್ವಾಮಿ ದೇವಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ತನಕ ನಡೆಯುವ ‘ಧರ್ಮಯಾತ್ರೆ’ ಅಭಿಯಾನಕ್ಕೆ ಇಂದು ಬೆಳಿಗ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಚಾಲನೆ ನೀಡಿದರು. ವಿಶೇಷ ಪೂಜೆ ನೆರವೇರಿಸಿದ ನಂತರ ನೂರಾರು ವಾಹನಗಳೊಂದಿಗೆ ಅಭಿಯಾನವನ್ನು ಆರಂಭಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಈ ಯಾತ್ರೆ ನಡೆಯುತ್ತಿದೆ. ಇಂದು ಸಂಜೆ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಅಸ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಆ, 20 -ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ‌ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಇಂದು ತಿಳಿಸಿದರು ಒಳಮೀಸಲಾತಿ ಕುರಿತು ವಿಧಾನ‌ ಪರಿಷತ್‌ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು   ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ…

ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ- ಡಿಕೆಶಿ

ಬೆಂಗಳೂರು, ಆ.16-“ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ…

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.14-“ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ ಕಲಾಪದಲ್ಲಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಈ ವಿಚಾರವನ್ನು ಮಾತನಾಡಿದರು. “ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ…

1 2 3 24
error: Content is protected !!