Browsing: ರಾಜಕೀಯ

ರಾಜಕೀಯ

ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹ: ಡಿ.ಕೆ. ಶಿವಕುಮಾರ್ ವಾಗ್ದಾಳಿ

*ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚ ಬೆಂಗಳೂರು, ಆ.13-ಅಶ್ವತ್ ನಾರಾಯಣ ನೀನು, ನಿನ್ನ ಪಕ್ಷ ಭ್ರಷ್ಟಾಚಾರದ ಪಿತಾಮಹರು. ರಾಮನಗರದಲ್ಲಿ ಒಂದೂ ಕ್ಷೇತ್ರ ಗೆಲ್ಲಲಾಗದವ, ಅಲ್ಪಸಂಖ್ಯಾತ ನಾಯಕನನ್ನು ಅಸಮರ್ಥ ಎನ್ನುತ್ತೀಯಾ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹರಿಹಾಯ್ದರು. ವಿಧಾನಸಭೆ ಕಲಾಪದಲ್ಲಿ ರಸಗೊಬ್ಬರ ಕೊರತೆ ವಿಚಾರವಾಗಿ ನಡೆದ ಚರ್ಚೆ ವೇಳೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಬುಧವಾರ ಬಿರುಸಿನ ಮಾತಿನ ಚಕಮಕಿ ನಡೆಯಿತು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಅವರು ಚರ್ಚೆ ವೇಳೆ ಮಾತನಾಡುವಾಗ ತಪ್ಪು…

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,13- ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಜೀ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ತ್ರಿವರ್ಣ ಧ್ವಜ ರಾರಾಜಿಸುವ ಮೂಲಕ ಪ್ರತಿಯೊಬ್ಬ ಭಾರತೀಯರಲ್ಲೂ ದೇಶದ ಬಗ್ಗೆ ಸದ್ಭಕ್ತಿ, ಶ್ರದ್ಧೆ ಬರಬೇಕೆಂಬ ಸದುದ್ದೇಶದಿಂದ ಬಿಜೆಪಿ, ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ…

ಕಾಟಾಚಾರಕ್ಕೆ ಅಧಿವೇಶನ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,10-ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ…

ಮೆಟ್ರೋ ಯೋಜನೆಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡುತ್ತಿದೆ- ಸಿದ್ಧರಾಮಯ್ಯ

ಬೆಂಗಳೂರು ಆ10-ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ.ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.ಕೇಂದ್ರ ಸರ್ಕಾರದ ಸಹಭಾಗಿತ್ವವೂ ಸಹ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು…

15,611 ಕೋಟಿ ವೆಚ್ಚದ ಮೆಟ್ರೋ ಹಂತ-3 ರ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಬೆಂಗಳೂರು,ಆ,10-ಬೆಂಗಳೂರಿನ ಜನರ ಕೌಶಲ್ಯ ಶ್ಲಾಘನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.ಇಂದು 15,611 ಕೋಟಿ ರೂ ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬೆಂಗಳೂರು ಯೆಲ್ಲೋ ಲೈನಿನ ಉದ್ಘಾಟನೆ ಮಾಡಲಾಗಿದೆ. ಇಂದು 3 ಹೊಸ ವಂದೇ ಭಾರತ್ ರೈಲು ಸೇವೆಯನ್ನೂ ಆರಂಭಿಸಿದ್ದೇವೆ ಎಂದು ತಿಳಿಸಿದರು. ಆಪರೇಷನ್ ಸಿಂದೂರದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಈ ಕಾರ್ಯಾಚರಣೆಯಲ್ಲಿ ಸೇನೆಯ ಸಫಲತೆ ಶ್ಲಾಘನೀಯ ಎಂದು ತಿಳಿಸಿದರು. ಉಗ್ರರ ವಿರುದ್ಧ ಕೈಗೊಂಡ…

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.06-“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ…

ನವರಂಗಿ ಆಟ ಆಡಬೇಡಿ ಅಶೋಕ್ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು, ಆ,05-ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!ಅಧಿಕಾರ ಇದ್ದಾಗ ಹಗಲುವೇಷ,ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!ಸನ್ಮಾನ್ಯ ಆರ್ ಅಶೋಕ್ ಅವರೇ,ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ…

KRS ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ: ಆರ್.ಅಶೋಕ್

ಮಂಡ್ಯ, ಆ, 4-ಕೆ ಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜ ಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು…

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು ಜು 31- ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ…

ರಾಹುಲ್ ಗಾಂಧಿ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ: @ ಆರ್‌.ಅಶೋಕ ಪ್ರಶ್ನೆ

ಬೆಂಗಳೂರು, ಜು, 30-ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್‌ಸೆನ್ಸ್‌ ರಾಹುಲ್‌ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಆದೇಶ ಇರುವಾಗ ಅನುಮತಿ…

ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ .ಎನ್ ಚಲುವರಾಯಸ್ವಾಮಿ

ಬೆಂಗಳೂರು, ಜು 30-ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸ್ಫಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಸಚಿವರು ರಾಜ್ಯದಲ್ಲಿ ಕಳೆದ 2ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈ ವರಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು…

ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಲು ವಿಜಯೇಂದ್ರ ಸವಾಲು

ಬೆಂಗಳೂರು,ಜು,30 ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಾಗದೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಅಕ್ರಮದ ಹೊಸ ಕಪಟ ನಾಟಕ ಮಾಡುತ್ತಿದೆ. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಆಗಸ್ಟ್ 4 ಅಥವಾ 5ರಂದು ಬೆಂಗಳೂರಿಗೆ ಬಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ; ಪಾದಯಾತ್ರೆ ಅಥವಾ…

ಅಭಿವೃದ್ಧಿ ಕೆಲಸದಲ್ಲಿ ಶಾಸಕ ಶಿವಲಿಂಗೇಗೌಡರು ದಾಖಲೆ ನಿರ್ಮಿಸಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಅರಸೀಕೆರೆ ಜು 27-ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ…

ಆರ್‌ಸಿಬಿ.ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು,ಜು,೨೪-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ, ಈ ಮೂಲಕ ಆಯೋಗದ ಶಿಫಾರಸಿನಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮೈಕೆಲ್ ಡಿ ಕುನ್ಹಾ ಆಯೋಗದ ವರದಿಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ದುರಂತಕ್ಕೆ ಕಾರಣವಾದ ಅಂಶಗಳು ಮತ್ತು ಅದಕ್ಕೆ…

17.50 ಲಕ್ಷ ಜನರ ಆರೋಗ್ಯ ಖಾತ್ರಿಪಡಿಸುವ ಶುದ್ಧ ಕುಡಿಯುವ ನೀರಿನ ಯೋಜನೆ ಉದ್ಘಾಟಿಸಿದ ಸಿಎಂ

ತುಮಕೂರು(ಪಾವಗಡ)ಜು, 21-ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಶುದ್ಧ ಕುಡಿಯುವ ನೀರಿನ ಯೋಜನೆಯು ಸುಮಾರು 17.50 ಲಕ್ಷ ಜನರ ಆರೋಗ್ಯವನ್ನು ಕಾಪಾಡುವ ಉತ್ತಮ ಯೋಜನೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತುಮಕೂರಿನ ಪಾವಗಡದಲ್ಲಿ ತುಂಗಭದ್ರಾ ಜಲಾಶಯದ ಹಿನ್ನರಿನಿಂದ ಪಾವಗಡ ತಾಲ್ಲೋಕು ಮತ್ತು ಪಟ್ಟಣ ವ್ಯಾಪ್ತಿಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಯ ಉದ್ಘಾಟನೆ ಮತ್ತು 2250 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್ ನಿರ್ಮಾಣ ದ ಘೋಷಣೆ ಹಾಗೂ ಪಾವಗಡ ವಿಧಾನಸಭಾ…

ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು, ಜುಲೈ 21-ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ…

ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸಲು ಪ್ರಯತ್ನಿಸುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜು.21- “ಸಣ್ಣ ವ್ಯಾಪಾರಿಗಳಿಗೆ ಜಿಎಸ್ ಟಿ ನೋಟೀಸ್ ಜಾರಿ ಮಾಡುವ ಮೂಲಕ ಬಿಜೆಪಿಯವರು ತಾವು ಬಾಳೆಹಣ್ಣು ತಿಂದು ನಮ್ಮ ಮೂತಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕೇಂದ್ರ ಬಿಜೆಪಿ ಸರ್ಕಾರ 2019ರಲ್ಲೇ ವಾರ್ಷಿಕ 40 ಲಕ್ಷಕ್ಕೂ ವಹಿವಾಟು ಮಿತಿ ನಿಗದಿಗೊಳಿಸಿ ಎಲ್ಲಾ ರಾಜ್ಯ ಸರ್ಕಾರಗಳಿಗೂ ಇದನ್ನು ಪಾಲಿಸುವಂತೆ ಆದೇಶ ನೀಡಿದ್ದಾರೆ. ಬಡವರಿಗೆ ಕಿರುಕುಳ…

ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ- ವಿಜಯೇಂದ್ರ ಸವಾಲು

ಕೊಪ್ಪಳ,ಜು,20- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತ ಪಕ್ಷದ ಶಾಸಕರ ಪ್ರಶ್ನೆಗೆ ಮೊದಲು ಉತ್ತರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಶಾಸಕರ ಪ್ರಶ್ನೆಗೆ ಉತ್ತರಿಸಿ ನಂತರ ವಿರೋಧ ಪಕ್ಷದವರ ವಿರುದ್ಧ ಸವಾಲು ಹಾಕಲಿ. ಇಡೀ ರಾಜ್ಯದ ಜನ ಮೈಸೂರಿನ ಸಮಾವೇಶದಲ್ಲಿ ಏನು ನಡೆದಿದೆ ಎನ್ನುವುದನ್ನು ನೋಡಿದ್ದಾರೆ ಎಂದು ವ್ಯಂಗ್ಯವಾಗಿ ನುಡಿದರು. ಎಲ್ಲಾ ಕ್ಷೇತ್ರಗಳಲ್ಲಿ ಅನುದಾನವಿಲ್ಲದೆ ಶಾಸಕರು…

ಅಣೆಕಟ್ಟುಗಳ ಸುರಕ್ಷತೆ ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕಬಿನಿ, ಜು.20-“ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ…

ಸುಳ್ಳು ಹೇಳುವ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ-ಸಿಎಂ ಸಿದ್ದರಾಮಯ್ಯ

ಮೈಸೂರು, ಜು,20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್…

error: Content is protected !!