Browsing: ರಾಜಕೀಯ

ರಾಜಕೀಯ

ಸರಕಾರದ ನಿರ್ಧಾರದಿಂದ ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ – ಪ್ರಲ್ಹಾದ್ ಜೋಶಿ

ಬೆಂಗಳೂರು,ಜೂ,19-ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ಮುಂದಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾಮಾನ್ಯ ಜನರು, ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ ಆಗಲಿದೆ; ಇದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಸತಿ ಯೋಜನೆಗಳಡಿ ಮುಸ್ಲಿಮರಿಗೆ ಶೇ 15 ಮೀಸಲಾತಿ ನೀಡಿದೆ. ಯಾವುದೇ ಮಾದರಿಯ…

ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್.ಅಶೋಕ

ಬೆಂಗಳೂರು, ಜೂ, 19-ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ…

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ 15 ರಷ್ಡು ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು, ಜೂ,19-ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 15 ರಷ್ಟು ಮೀಸಲಾತಿ ಹೆಚ್ಚಳ ಕರಿತು ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಸಚಿವ ಎಚ್.ಕೆ.ಪಾಟೀಲ್ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು…

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬೆಂಗಳೂರು, ಜೂ.19-ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಸುರೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.…

ನಗರ ಪ್ರದೇಶ ವಸತಿ ಹಂಚಿಕೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.19-“ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ…

ಅಭಿವೃದ್ಧಿ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ-ನಿಖಿಲ್

ತುಮಕೂರು,ಜೂ,18- ಜೆಡಿಎಸ್ ಭವಿಷ್ಯದ ಬಗ್ಗೆ ಯಾರು ತಲೆ ಕೆಡಿಸಕೊಳ್ಳಬೇಕಾಗಿಲ್ಲ ಭದ್ರವಾಗಿದೆ ಸುಭದ್ರವಾಗಿದೆ ಅದು ಕಾರ್ಯಕರ್ತರ ಕೈಯಲ್ಲಿದೆ ಎಂದು ನಿಖಿಲ್ ಕುಮಾರಸ್ವಾಮಿ ವಿರೋಧಿಗಳಿಗೆ ಟಾಂಗ್ ನೀಡಿದರು. ತುಮಕೂರಿನ ಚಿಕ್ಕನಾಯಕನಹಳ್ಳಿಯ ಬುಕ್ಕಾ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಎರಡನೇ ದಿನದ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳ ಜತೆ ಅವರು ಮಾತನಾಡಿದರು. ನಮ್ಮ ಪಕ್ಷದಲ್ಲಿ ನಾಯಕರನ್ನ ಬೆಳಸುವಂತಹ ಕಾರ್ಯಕರ್ತರಿದ್ದಾರೆ. ಎಷ್ಟೋ ಜನ ದೊಡ್ಡ ದೊಡ್ಡ ನಾಯಕರು ನಮ್ಮ ಪಕ್ಷದಿಂದ ಬೆಳೆದು ಬೇರೆ ಪಕ್ಷಕ್ಕೆ ಹೋಗಿರುವ ಇತಿಹಾಸ ಇದೆ.…

ನಂದಿನಿ ಬ್ರ್ಯಾಂಡ್ ಅನ್ನು ಕಾಂಗ್ರೆಸ್ ಸರ್ವನಾಶಮಾಡಲು ಹೊರಟಿದೆ- ಅಶೋಕ್ ವ್ಯಂಗ್ಯ

ಬೆಂಗಳೂರು, ಜೂ,18-ನಂದಿನಿ ಬ್ರ್ಯಾಂಡ್ ಹೆಸರನ್ನ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಮೇಲೆ ನಂದಿನಿ ಬ್ರ್ಯಾಂಡ್ ಅನ್ನು ಸರ್ವನಾಶ ಮಾಡಲು ಹೊರಟಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ ಮಾಡಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ಅವರು ಒಂದು ಕಡೆ ಹಾಲು ಉತ್ಪಾದಕರಿಗೆ ನೂರಾರು ಕೋಟಿ ಬಾಕಿ ಉಳಿಸಿಕೊಂಡಿದೆ. ಮತ್ತೊಂದು ಕಡೆ ಅತ್ಯಂತ ಬೇಡಿಕೆ ಇರುವ ರೆಡಿ ಮೇಡ್ ಇಡ್ಲಿ, ದೋಸೆ ಹಿಟ್ಟು, ವೇ ಪ್ರೋಟೀನ್ ಸೇರಿದಂತೆ ಅನೇಕ ಹೊಸ ಉತ್ಪನ್ನಗಳ ಮೂಲಕ…

ಜಿಲ್ಲಾ ಘಟಕದ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ

ಬೆಂಗಳೂರು,ಜೂ,18-ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಸಮಾರಂಭ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಜಿಲ್ಲಾ ಅಧ್ಯಕ್ಷರನ್ನು ಅಭಿನಂದಿಸಿದರಲ್ಲದೆ, ವಿಶೇಷ ಸಭೆಯಲ್ಲಿ ಪಾಲ್ಗೊಂಡರು. ಮಾಜಿ ಸಚಿವ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ. ರಾಜೀವ್, ನಂದೀಶ್ ರೆಡ್ಡಿ, ಪ್ರೀತಮ್ ಗೌಡ, ಪಕ್ಷದ ಚುನಾವಣಾ ಸಂಚಾಲಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪದಾಧಿಕಾರಿಗಳು ಮತ್ತು ಎಲ್ಲ ನೂತನ…

ಜನರೊಂದಿಗೆ ಜನತಾದಳ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ ಜೆಡಿಎಸ್

ಬೆಂಗಳೂರು, ಜೂ,15-: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರೊಂದಿಗೆ ಜನತಾದಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಗವಾಗಿಯೇ ರಾಜ್ಯ ಪಕ್ಷ ಸಂಘಟನಾ ರಾಜ್ಯ ಪ್ರವಾಸ ಮತ್ತು ಮಿಸ್ ಕಾಲ್ ಅಭಿಯಾನ…

ಸಿ.ಎಂ., ಡಿ.ಸಿ.ಎಂ. ರಾಜೀನಾಮೆಗೆ ಒತ್ತಾಯಿಸಿ 17 ರಂದು ಬೃಹತ್ ಪ್ರತಿಭಟನೆ: ಗೋಪಾಲಯ್ಯ

15 ಬೆಂಗಳೂರು,ಜೂ,15- ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ  ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ವತಿಯಿಂದ ಜೂನ್ 17 ರಂದು ಬೆಳಿಗ್ಗೆ 10.30 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಕೆ. ಗೋಪಾಲಯ್ಯ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಈ ಪತ್ರಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಮಾರು…

ಕುಮಾರಸ್ವಾಮಿ ವಿರುದ್ಧ ಅಪಪ್ರಚಾರದಿಂದ ಯಾರೂ ಗೆದ್ದಿಲ್ಲ; ದೇವೇಗೌಡ

ಬೆಂಗಳೂರು,ಜೂ,15- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. *ಜನರೊಂದಿಗೆ ಜನತಾದಳ* ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಗಾಗಿ ಹಮ್ಮಿಕೊಳ್ಳಲಾಗಿರುವ ರಾಜ್ಯ ಪ್ರವಾಸ ಹಾಗೂ ʼಮಿಸ್ ಕಾಲ್ʼ ಸದಸ್ಯತ್ವದ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮ…

ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿಯವರ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

ಯಾದಗಿರಿ,ಜೂ,14- ಕಲ್ಯಾಣ ಕರ್ನಾಟಕದ ಅಭಿವೃದ್ಧಿಯಲ್ಲಿ ಆಸ್ಪತ್ರೆಗಳನ್ನ ಮೇಲ್ದರ್ಜೆಗೇರಿಸುವ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಒಂದು ಮಹತ್ವದ ಹೆಜ್ಜೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಯಾದಗಿರಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಹಾಗೂ ಆರೋಗ್ಯ ಇಲಾಖೆ ಆಯೋಜಿಸಿದ್ದ “ಆರೋಗ್ಯ ಆವಿಷ್ಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಚಾಲನೆ ನೀಡಿದ್ದಾರೆ. ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿಯ ಆರೋಗ್ಯ…

ಸಮರ್ಥ ಆಡಳಿತದಿಂದ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಪರಿವರ್ತನೆ: ಬಿ.ವೈ.ವಿಜಯೇಂದ್ರ

ಕಲಬುರ್ಗಿ,ಜೂ,14-ಯುಪಿಎ ಸರಕಾರದ ಅವಧಿಯಲ್ಲಿ ಭಾರಿ ಹಗರಣಗಳು ನಡೆದಿದ್ದವು. ಬಳಿಕ ಎನ್.ಡಿ.ಎ. ಅವಧಿಯಲ್ಲಿ ಈ ದೇಶಕ್ಕೆ ಉಜ್ವಲ ಭವಿಷ್ಯವಿದೆ; ಭಾರತದಲ್ಲಿ ಭ್ರಷ್ಟಾಚಾರರಹಿತ ಆಡಳಿತ ನೀಡಲು ಸಾಧ್ಯವಿದೆ ಎಂಬುದನ್ನು ನರೇಂದ್ರ ಮೋದಿಜೀ ಅವರ ಸರಕಾರ ಸಾಬೀತುಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವು ಇತರ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತಲುಪಬಹುದು ಎಂಬ ವಿಶ್ವಾಸವನ್ನು ನರೇಂದ್ರ ಮೋದಿಜೀ ಅವರ ಸರಕಾರ ನೀಡಿದೆ ಎಂದು ತಿಳಿಸಿದರು. 11…

371ಜೆ ಜಾರಿ ಹಿಂದೆ ಖರ್ಗೆ,ದರ್ಮಸಿಂಗ್ ಹೋರಾಟದ ಶ್ರಮ ಇದೆ; ಸಿ.ಎಂ

ಯಾದಗಿರಿ ಜೂ 14-ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ “ಆರೋಗ್ಯ ಆವಿಷ್ಕಾರ” ಯೋಜನೆಯ ಅಡಿಯಲ್ಲಿ 440.63 ಕೋಟಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ವರ್ಷಕ್ಕೆ 5000 ಕೋಟಿ KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13000 ಕೋಟಿ ರೂಪಾಯಿ…

ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ಅಸ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಜೂ, 12: ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 (2) ರಂತೆ ಮರುಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಹಿಂದುಳಿದ ಜಾತಿಗಳ ಶಾಶ್ವತ ಆಯೋಗ ಸಲ್ಲಿಸಿರುವ ವರದಿಯ ಮೇಲೆ…

ಅಧ್ಯಕ್ಷರನ್ನು ಬದಲಿಸಲ್ಲ, ಸಂಪುಟ ವಿಸ್ತರಣೆ ಮಾಡಲ್ಲ: ಖರ್ಗೆ

ಕಲಬುರಗಿ,ಜೂ,11- ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ, ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದಾಗ, ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ…

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?- ಶ್ರೀರಾಮುಲು

ಬೆಂಗಳೂರು,ಜೂ,11-ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಮಕ್ಕಳ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದೇ ಹಣದಲ್ಲಿ ಇವತ್ತು ಸಂಸದರು ಮತ್ತು ವಿಧಾನಸಭಾ ಸದಸ್ಯರಾಗಿರಬಹುದು. ಆದರೆ ಈ ನಾಡಿನ ಜನ ಎಲ್ಲವನ್ನು ನೋಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ ಸಂಸದ…

ಆರ್ ಸಿ.ಬಿ‌ ಸಂಭ್ರಮಾಚರಣೆ ದುರಂತ ಮರೆಮಾಚಲು ಮರು ಜಾತಿ ಸಮೀಕ್ಷೆ ನಾಟಕ- ಅಶೋಕ್ ಆರೋಪ

ಬೆಂಗಳೂರು, ಜೂ,11-ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯನ್ನು ಮರೆ ಮಾಚಲು ಜಾತಿ ಗಣತಿ ಮರು ಸಮೀಕ್ಷೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಿಮಗೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಿ. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿ. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು…

ಕಾಲ್ತುಳಿತ ದುರ್ಘಟನೆ- 13ರಂದು ಸರಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ:l

ಶಿವಮೊಗ್ಗ,ಜೂ,10- ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಪ್ರಕಟಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು…

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ- ಸಿ.ಎಂ‌ ಸಿದ್ದರಾಮಯ್ಯ

ನವದೆಹಲಿ, ಜೂ,10-ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು…

1 2 3 4 5 22
error: Content is protected !!