Browsing: ರಾಜಕೀಯ

ರಾಜಕೀಯ

ಪ್ರಿಯಾಂಕ್ ಗಾಂಧಿ ಬಂಧನ ಖಂಡಿಸಿ ಕಾಂಗ್ರೆಸ್ ಪಂಜಿನ ಮೆರವಣಿಗೆ

ಬೆಂಗಳೂರು,ಅ,04: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ರೈತರು ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಎಂಟು ಮಂದಿ ಮೃತಪಟ್ಟ ಲಖಿಂಪುರ–ಖೇರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿ ಸಾಂತ್ವಾನ ಹೇಳಲು ಅವಕಾಶ ನೀಡದೇ ಬಂಧಿಸಿರುವ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಪ್ರದೇಶ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ನಿಂದ ನಗರದಲ್ಲಿಂದು ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಬಿಜೆಪಿ ಸರ್ಕಾರದ ವಿರುದ್ಧ ಯುವ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್…

ಇದೇ 16ರಿಂದ ಜೆಡಿಎಸ್ ಜನತಾ ಸಂಗಮ

ಬೆಂಗಳೂರು,ಅ,04: ಜೆಡಿಎಸ್ ಪಕ್ಷದ ಜನತಾ ಪರ್ವ 1.O ಕಾರ್ಯಾಗಾರದ ಎರಡನೇ ಹಂತವಾಗಿ ಜನತಾ ಸಂಗಮ ಇದೇ 16ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಬಿಡದಿ ತೋಟದಲ್ಲಿ ನಡೆಯುತ್ತಿರುವ ಕಾರ್ಯಗಾರದ ನಡುವೆ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದು ಪ್ರತಿ ತಾಲೂಕಿನಲ್ಲಿ ಎಲ್ಲರ ಜೊತೆಗೂಡಿ ನಡೆಯುವ  ಕಾರ್ಯಕ್ರಮ. ಕಾರ್ಯಕರ್ತರನ್ನು ನೇರವಾಗಿ ಭೇಟಿಯಾಗುವ ಹಾಗೂ ತಳಹದಿಯಲ್ಲಿ ಪಕ್ಷವನ್ನು ಬಲಪಡಿಸುವ ಉದ್ದೇಶ ಇದಕ್ಕಿದೆ ಎಂದರು. ಜನತಾ ಸಂಗಮದ ಮೂಲಕ ಪ್ರತಿ ಹಳ್ಳಿಗಳಿಗೆ ಭೇಟಿ ನೀಡುವ ತೀರ್ಮಾನ ಮಾಡಲಾಗಿದೆ. ಜತೆಗೆ, ಕಾರ್ಯಾಗಾರಕ್ಕೆ ಹಾಜರಾಗಿರುವ ಪ್ರತಿಯೊಬ್ಬರ ಮಾಹಿತಿಯನ್ನೂ…

ಪ್ರತಿಭಟನಾ ನಿರತ ರೈತರಮೇಲೆ ಕಾರುಹರಿಸಿ ಹತ್ಯೆ; ಯೋಗಿ ಆದಿತ್ಯನಾಥ ರಾಜೀನಾಮೆಗೆ ಆಗ್ರಹ

ಬೆಂಗಳೂರು,ಅ,04:ದೇಶದಲ್ಲಿ ನೀಚ ರಾವಣ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆಗೆ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ.…

ಆರ್ ಎಸ್ ಎಸ್ ನ ತಾಲಿಬಾನಿಗೆ ಹೋಲಿಸಿದ ಸಿದ್ದುಗೆ ತಿರುಗೇಟು ನೀಡಿದ ಸಿ.ಟಿ ರವಿ

ಬೆಂಗಳೂರು,ಸೆ,29: ಆರ್ ಎಸ್ ಎಸ್ ನವರದ್ಧು ತಾಲಿಬಾನ್ ಸಂಸ್ಕೃತಿ ಎಂದಿದ್ದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವ ಸಿ.ಟಿ ರವಿ, ‘ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.…

ಬಿಜೆಪಿ ಸರಕಾರ ಅನೈತಿಕ, ಕಾರಜೋಳ ಪಾಪದ ಮಂತ್ರಿ- ಎಂ. ಬಿ. ಪಾಟೀಲ ವಾಗ್ದಾಳಿ

ವಿಜಯಪುರ, ಸೆ,29: ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಮಾಜಿ ಜಲಸಂಫನ್ಮೂಲ ಸಚಿವ ಎಂ. ಬಿ. ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಪಿ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಆದರೆ, ಬಿಜೆಪಿ ಸರಕಾರ ಪಾಪದ ಕೂಸು. ಅನೈತಿಕ ಸರಕಾರದಲ್ಲಿ ಗೋವಿಂದ ಕಾರಜೋಳ ಪಾಪದ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಎಂ. ಬಿ. ಪಾಟೀಲ ಹರಿಹಾಯ್ದರು. ಕಾರಜೋಳ ಅವರಿಗೆ ಈ ವಯಸ್ಸಿನಲ್ಲಿ ಈ ರೀತಿ ಹೇಳಿಕೆ ನೀಡುವುದು…

ಹಾನಗಲ್, ಸಿಂಧಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ: ಹೆಚ್.ಡಿ.ಕುಮಾರಸ್ವಾಮಿ 

ಬೆಂಗಳೂರು,ಸೆ,28: ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಿಸಿದರು. ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮಾಧ್ಯಮಗಳ ಜತೆ ಮಾತನಾಡಿದರು. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.…

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವವರಿಗೆ ಮುಂದಿನ ಚುನಾವಣೆಯಲ್ಲಿ ಉತ್ತರ; ಎಚ್ ಡಿಕೆ

ರಾಮನಗರ,ಸೆ,27: ಕೆಲವರು ಜೆಡಿಎಸ್ ಪಕ್ಷವನ್ನು 30 ಸೀಟುಗಳ ಪಕ್ಷ ಎಂದು ಲಘುವಾಗಿ ಮಾತನಾಡುತ್ತಿದ್ದಾರೆ. ಅಂಥವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಬಿಡದಿಯ ತೋಟದ ಮನೆಯಲ್ಲಿ ಆಯೋಜಿಸಲಾಗಿದ್ದ ‘ಜನತಾ ಪರ್ವ 1.O’ ಹಾಗೂ, ‘ಮಿಷನ್ -123’ ಕಾರ್ಯಗಾರದಲ್ಲಿ ಪ್ರಚಲಿತ ರಾಜಕೀಯ ಸನ್ನಿವೇಶದ ಕುರಿತು ಮಾತನಾಡಿದರು ಅವರು. ಜೆಡಿಎಸ್ ಪಕ್ಷದಿಂದ ರಾಜಕೀಯವಾಗಿ ಬೆಳೆದವರು ಕೊನೆಗೆ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ಮುಗಿಸಲು…

ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ-ಎಚ್‌ಡಿಡಿ

ರಾಮನಗರ,ಸೆ,೨೭: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ. ೨೦೨೩ಕ್ಕೆ ಜಾತ್ಯತೀತ ಜನತಾದಳದ ಹಾಗೂ ಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾಗಿರುವ ೪ ದಿನಗಳ ’ಜನತಾ ಪರ್ವ ೧.ಔ’ಕಾರ್ಯಗಾರವನ್ನು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಉದ್ಘಾಟಿಸಿದರು. ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ.…

ಪಕ್ಷ ಸಂಘಟನೆಗೆ ಜೆಡಿಎಸ್ ಶಾಸಕರ ಕಾರ್ಯಾಗಾರ

ರಾಮನಗರ,ಸೆ,೨೭: ಜೆಡಿಎಸ್ ಪಕ್ಷದ ಸಂಗಟನೆ ದೃಷ್ಟಿಯಿಂದ ಇಂದಿನಿಂದ ನಾಲ್ಕು ದಿನಗಳ ಕಾಲ ಶಾಸಕರಿಗೆ ಕಾರ್ಯಾಗಾ? ಏರ್ಪಡಿಸಲಾಗಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿ ಇರುವ ತೋಟದಲ್ಲಿ ಕಾರ್ಯಾಗಾರ ನಡೆಯಲಿದ್ದು ಈ ಕಾರ್ಯಕ್ರಮವನ್ನು ಜೆಡಿಎಸ್ ವರಿಷ್ಠ ದೇವೇಗೌಡ ಚಾಲನೆ ನೀಡಲಿದ್ದಾರೆ ಮೊದಲ ಎರಡು ದಿನ ಶಾಸಕ ಸ್ಥಾನದ ಆಕಾಂಕ್ಷಿಗಳು ಮತ್ತು ಶಾಸಕರಿಗೆ ಕಾರ್ಯಾಗಾರ ನಡೆಯಲಿದ್ದು ಮೂರನೇ ದಿನ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ. ಬೂತ್ ಮಟ್ಟದಲ್ಲಿ ಮಹಿಳಾ ಸಂಘಟನೆ ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತದೆ ಈ ವೇಳೆ ದೇವೇಗೌಡರು ತಮ್ಮ…

ಸಿದ್ದರಾಮಯ್ಯ ರ ‘ಅಕ್ಕಿ ರಾಜಕೀಯ’ಕ್ಕೆ ತಿರುಗೇಟು ಕೊಟ್ಟ ಕುಮಾರಸ್ವಾಮಿ

ಬೆಂಗಳೂರು,ಸೆ,26: ಬಡವರಿಗೆ ನೀಡಲಾಗುತ್ತಿದ್ದ ಅಕ್ಕಿಯ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಕಡಿತ ಮಾಡಿದ್ದ ಬಗ್ಗೆ ತಮ್ಮ ವಿರುದ್ಧ ಸುಳ್ಳಿನ ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಅವರು; “ಸಿದ್ದರಾಮಯ್ಯ ಅವರು ಸತ್ಯವನ್ನು ಮರೆಮಾಚಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಅವರು ಸಿದ್ದರಾಮಯ್ಯ ಅವರಿಗೆ ನೀಡಿರುವ…

ಬಿಜೆಪಿ ಸುಳ್ಳಿನ ಕಾರ್ಖಾನೆ;ಸಿದ್ದರಾಮಯ್ಯ ಲೇವಡಿ

ಬೆಂಗಳೂರು,ಸೆ,26: ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ. ಸುಳ್ಳಿನ ಕಂತೆಗಳನ್ನು ಅಲ್ಲಿ ತಯಾರು ಮಾಡಿ ಮಾರ್ಕೆಂಟಿಂಗ್ ಮಾಡುವವರು ಆ ಪಕ್ಷದ ನಾಯಕರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ದಿವಂಗತ ಅರ್. ಗುಂಡೂರಾವ್ ಅವರ ಜನ್ಮದಿನದ ಅಂಗವಾಗಿ ಗಾಂಧಿನಗರ ವಿಧಾನಸಭೆ ಕ್ಷೇತ್ರದ ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬಡವರ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂಬ ಕಾರಣಕ್ಕೆ…

ಬಿಎಸ್ ವೈ ಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರು,ಸೆ,24: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು. ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು. ರಾಜ್ಯ ವಿಧಾನಸಭೆಯಲ್ಲಿ ಅತ್ಯುನ್ನತ ಗೌರವಕ್ಕೆ ಭಾಜನರಾದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಜನಸೇವೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡ ನಾಯಕರಾದ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ…

ಜನಪರ ಕೆಲಸಗಳಿಗೆ ಸ್ಪಂದಿಸಲು; ಶಾಸಕರಿಗೆ ಕರೆ

ಬೆಂಗಳೂರು,ಸೆ,24: ಜನಪರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ಜನಪ್ರತಿನಿಧಿಗಳಿಗೆ ಗೌರವ ದೊರಕುತ್ತದೆ. ಇಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭೆ ಸ್ಪೀಕರ್ ಓಂಬಿರ್ಲಾ ಅವರು ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರಿಗೆ ಕಿವಿಮಾತು ಹೇಳಿದರು. ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಲೋಕಸಭೆ ಸ್ಪೀಕರ್​​ ಓಂ ಬಿರ್ಲಾ ಅವರು, ವಿಧಾನಸೌಧ ನಿರ್ಮಿಸಿದ ಕೆಂಗಲ್ ಹನುಮಂತಯ್ಯರಿಗೆ ಧನ್ಯವಾದ ಹೇಳುತ್ತೇನೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನ ಸ್ಮರಿಸುತ್ತೇನೆ. ಜತೆಗೆ ಯಡಿಯೂರಪ್ಪರನ್ನ ಗೌರವಿಸಿದ್ದು ಹೆಮ್ಮೆಯ ವಿಷಯ. ವಿಧಾನಸಭೆ,…

ಸಭಾಧ್ಯಕ್ಷರು ಒಂದು ಪಕ್ಷದ ಪರ ವರ್ತಿಸಿದ್ದು ಸರಿ ಅಲ್ಲ;ಸಿದ್ದು

ಬೆಂಗಳೂರು,ಸೆ,24 : ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.…

ಚಾಣಕ್ಯ ವಿ.ವಿ.ಸ್ಥಾಪನೆಗೆ ನೀಡಿರುವ ಭೂಮಿ ವಾಪಾಸ್ ಪಡೆಯಲು ಸಿದ್ದು ಆಗ್ರಹ

ಬೆಂಗಳೂರು,ಸೆ,22 : ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಡರ್ ಫಾರ್ ಎಜ್ಯುಕೇಷನ್ ಅಂಡ್ ಸೋಷಿಯಲ್ ಸ್ಟಡೀಸ್ ಸಂಸ್ಥೆಗೆ (ಸೆಸ್) ಕಡಿಮೆ ದರದಲ್ಲಿ ನೂರಾರು ಎಕರೆ ಭೂಮಿ ನೀಡುವ ತೀರ್ಮಾನವನ್ನು ಕೈ ಬಿಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೂರಾರು ಕೋಟಿ ರೂ. ಮೌಲ್ಯದ ಭೂಮಿಯನ್ನು ಕಡಿಮೆ ಬೆಲೆಗೆ ಪರಭಾರೆ ಮಾಡುವ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಇದರ ವಿರುದ್ಧ…

ಸ್ಥಗಿತಗೊಂಡ ಯೋಜನೆಗಳು ಶೀಘ್ರ ಪುನರಾರಂಭ-ಬೊಮ್ಮಾಯಿ

ಬೆಂಗಳೂರು,ಸೆ,೨೨: ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿರುವ ಅನುಮೋದನೆ ಪಡೆದ ಯೋಜನೆಗಳನ್ನು ಆರಂಭಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿಯಮ ೬೯ ರಡಿ ಜೆಡಿಎಸ್‌ನ ಎಚ್.ಡಿ.ರೇವಣ್ಣ ಮತ್ತು ಇತರ ಸದಸ್ಯರ ಪ್ರಸ್ತಾವಕ್ಕೆ ಉತ್ತರ ನೀಡಿದ ಅವರು, ಯಾವುದೇ ಕಾಮಗಾರಿಗಳನ್ನು ತಡೆ ಹಿಡಿದಿಲ್ಲ. ಪ್ರವಾಹ, ಕೋವಿಡ್ ಸಂಕಷ್ಟದಿಂದಾಗಿ ಕಾಮಗಾರಿಗಳು ಕುಂಠಿತ ಆಗಿದೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಹಣಕಾಸು ನಿರ್ವಹಣೆ ಅತಿ ಮುಖ್ಯ ಎಂದು ಹೇಳಿದರು. ಈಗಾಗಲೇ ಆಡಳಿತಾತ್ಮಕ ಒಪ್ಪಿಗೆ ಪಡೆದು…

ಯಡಿಯೂರಪ್ಪನಂತ ನೂರು ಜನ ಬಂದರು ಬಿಜೆಪಿ ಗೆಲ್ಲುವಿದಿಲ್ಲ; ಸಿದ್ದರಾಮಯ್ಯ

ಬೆಂಗಳೂರು ,ಸೆ,21: ಬೆಲೆ ಏರಿಕೆಯಿಂದ ಜನರ ಆಕ್ರೋಶ ಒಳಗೊಳಗೆ ಕುದಿಯುತ್ತಿದೆ. ಈ ಸರ್ಕಾರ ತೊಲಗಿದರೆ ಸಾಕು, ಮತ್ತೆ ಚುನಾವಣೆ ಬಂದರೆ ಸಾಕು ಎಂದು ಕಾಯುತ್ತಿದ್ದಾರೆ. ಒಬ್ಬ ಯಡಿಯೂರಪ್ಪ ಅಲ್ಲ, ಯಡಿಯೂರಪ್ಪ ಅವರಂತಹ ನೂರು ಜನ ಬಂದರೂ ಬಿಜೆಪಿಯನ್ನು ಉಳಿಸಲಿಕ್ಕೆ ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸರ್ಕಾರ ಕೇಸ್ ಹಾಕುತ್ತದೆ ಎಂಬ ಕಾರಣಕ್ಕೆ ಇದನ್ನೆಲ್ಲ ಸಹಿಸಿಕೊಂಡು ಜನ ಸುಮ್ಮನಿದ್ದಾರೆ. ನರೇಂದ್ರ ಮೋದಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಯಾರಿಂದಲೂ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು…

ಬೆಲೆ ಏರಿಕೆ ಟೀಕೆಗೆ ಎದುರೇಟು ನೀಡಿದ ಸಿಎಂ

ಬೆಂಗಳೂರುಸೆ,20: ಬೆಲೆ ಏರಿಕೆ ಎಂಬುದು ನಿರಂತರ ಪ್ರಕ್ರಿಯೆ. ಇದಕ್ಕೆ ಯಾವುದೇ ಸರ್ಕಾರವನ್ನು ನಿರ್ದಿಷ್ಠವಾಗಿ ಬೊಟ್ಟು ಮಾಡಿ ತೋರಿಸಿ ದೂಷಣೆ ಮಾಡುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿಂದು ನಿಯಮ 69ರ ಅಡಿ ನಡೆದ ಸುದೀರ್ಘ ಚರ್ಚೆಗೆ ಉತ್ತರಿಸಿದ ಅವರು, ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಕಾರಣ ಎಂಬ ವಿರೋಧ ಪಕ್ಷಗಳ ಟೀಕೆಯನ್ನು ಸಾರಾಸಗಟಾಗಿ ಅಂಕಿ-ಅಂಶಗಳ ಸಮೇತ ಸದನದ ಮುಂದಿಟ್ಟರು. ಈ ಹಂತದಲ್ಲಿ ಆಡಳಿತರೂಢ ಬಿಜೆಪಿ ಪ್ರತಿಪಕ್ಷವಾದ ಕಾಂಗ್ರೆಸ್ ಸದಸ್ಯರ ನಡುವೆ ಬಿಜೆಪಿ…

ಡಿಕೆಶಿ ವಿರುದ್ಧ ಬಿಎಸ್ ವೈ ಹೊಸ ಬಾಂಬ್‌

ದಾವಣಗೆರೆ,ಸೆ,೧೯: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ಶಾಸಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವವ ಯತ್ನ ನಡೆಸುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್‌ವೈ ತಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ನಿರಂತವಾಗಿ ನಡೆಯುತತಿದೆ ಆದರೆ ಯಾರು ಅವರ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮುಂದಿನ ಬಾರಿ ಹೇಗಾದರೂ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ತವಕದಲ್ಲಿರುವ ಡಿಕೆಶಿ ಇತರೆ ಪಕ್ಷದ ಶಾಸಕರನ್ನು ಸೆಳೆಯುವ ಯತ್ನ ನಡೆಸುತ್ತಿದದಾರೆ. ಆದರೆ…

ಮುಂಬರುವ ಚುನಾವಣೆ ಬೊಮ್ಮಾಯಿ ಅಥವಾ ಕಟೀಲ್‌ ನಾಯಕತ್ವದಲ್ಲಿ ಎದುರಿಸುತ್ತೇವೆ-ಈಶ್ವರಪ್ಪ

ದಾವಣಗೆರೆ,ಸೆ,೧೯:ಪಕ್ಷವನ್ನು ಮತ್ತಷ್ಟು ಶಕ್ತಿಗೊಳಿಸುವುದಲ್ಲದೆ ಮುಂಬರುವ ಎಲ್ಲಾ ಚುನಾವಣೆಗಳನ್ನು ಯಾವ ರೀತಿ ಎದುರಿಸಬೇಕು ಮತ್ತು ರೂಪರೇಷಗಳನ್ನು ಕುರಿತು ಕಾರ್ಯಕಾರಣಿಯಲ್ಲಿ ಚರ್ಚಿಸಲಾಗುತ್ತಿದೆ ಎಂದು ಹೇಳಿರುವ ಸಚಿವ ಕೆ.ಎಸ್‌.ಈಶ್ವರಪ್ಪ ಮುಂಬರುವ ಚುನಾವಣೆಗಳನ್ನು ಮುಖ್ಯಮಂತ್ರಿ ಬೊಮ್ಮಾಯಿ ಅಥವಾ ಪಕ್ಷದ ಅಧ್ಯಕ್ಷ ಕಟೀಲ್‌ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದಿದ್ದಾರೆ. ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,೨೦೨೩ನೇ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಘಟನೆ ಶಕ್ತಿಯಿಂದ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಘಟನೆ ಮಾಡುವುದು ಪಕ್ಷದ ಗುರಿಯಾಗಿದೆ ಎಂದು ಅವವರು  ಹೇಳಿದ್ದಾರೆ. ಕಾರ್ಯಕಾರಿಣಿ ಸಭೆ ಇಡೀ…

1 9 10 11 12 13 17
error: Content is protected !!