ರಾಜಕೀಯ
ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಆರ್.ಅಶೋಕ
ಬೆಂಗಳೂರು, ಏ, 28-ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಬಿಜೆಪಿಯ…