ರಾಜಕೀಯ
ಬಿಎಸ್‌ವೈ ಸ್ಥಾನಕ್ಕೆ ಬಿಜೆಪಿಯಲ್ಲಿ ಮತ್ತೊಬ್ಬ ಸಮರ್ಥನಾಯಕರೇ ಇಲ್ಲ-ಸಿದ್ದು
ಹುಬ್ಬಳ್ಳಿ,ಮೇ,೨೬: ರಾಜ್ಯದಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸಂಪೂರ್ಣವಿಫಲರಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ಪ್ರಯತ್ನಪಡುತ್ತಿದೆ ಆದರೆ ಅವರ ಸ್ಥಾನಕ್ಕೆ ಮತ್ತೊಬ್ಬ ಸಮರ್ಥನಾಯಕ ಆ ಪಕ್ಷದಲ್ಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಬೀದಿ ಕಾಳಗ ನಡೆಯುತ್ತಿದೆ. ಅವರ ಪಕ್ಷದ ಶಾಸಕರೇ ಯಡಿಯೂರಪ್ಪ ವಿರುದ್ಧವಾಗಿ ಮಾತನಾಡಿದ್ದಾರೆ.ನಾಯಕತ್ವ ಬದಲಾವಣೆಯಾದ ತಕ್ಷಣ ಸರ್ಕಾರ ಹೋಗುತ್ತದೆ ಎಂದು ಅಂದುಕೊಳ್ಳುವುದಿಲ್ಲ, ಅಲ್ಲಿ ಸಮರ್ಥ ಬದಲಿ…