ರಾಜಕೀಯ
ಸೋಲು-ಗೆಲುವು ಸಮವಾಗಿ ಸ್ವೀಕರಿಸುವೇ-ಬೊಮ್ಮಾಯಿ
ಬೆಂಗಳೂರು, ನ, ೦೩: “ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. “ಸಿಂಧಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಮತ ಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…