ರಾಜಕೀಯ
ಪೆಟ್ರೋಲ್ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ; ಡಿಕೆಶಿ
ರಾಮನಗರ,ಜೂ,05:ಜನವರಿಯಿಂದ ಪೆಟ್ರೋಲ್ ದರ 43 ಬಾರಿ ಏರಿಕೆಯಾಗಿದೆ. ಇದು ದೇಶದ ಆರ್ಥಿಕ ಮತ್ತು ಆಡಳಿತಾತ್ಮಕ ರಂಗಗಳಲ್ಲಿ ಸರ್ಕಾರದ ಅಸಮರ್ಥತೆಯನ್ನು ಸ್ಪಷ್ಟವಾಗಿ ಎತ್ತಿ ತೋರಿಸುತ್ತದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಿಡಿಕಾರಿದರು. ರಾಮನಗರ ಜಿಲ್ಲೆಯ ಕೂಟಗಲ್ ಹೋಬಳಿಯ ಜಾಲಮಂಗಲ ಗ್ರಾಮದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಡವರಿಗೆ ಆಹಾರ ಮತ್ತು ತರಕಾರಿ ಕಿಟ್ಗಳನ್ನು ವಿತರಿಸಿ ಮಾತನಾಡಿದ ಅವರು, ಇಂದು ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ₹100, ಅಡುಗೆ ಎಣ್ಣೆ ಬೆಲೆ ಲೀಟರ್ ₹220 ತಲುಪಿದೆ.…