ರಾಜಕೀಯ
ಕನ್ನಡಕ್ಕಾಗಿರುವ ಅನ್ಯಾಯವನ್ನು ತಾಕತ್ತಿದ್ದರೆ ಬಿಜೆಪಿ ಸಂಸದರು ಸರಿಪಡಿಸಲು ಎಚ್ ಡಿಕೆ ಸವಾಲು
ಬೆಂಗಳೂರು, ಜೂ.20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ಬಿಜೆಪಿ ತಾಕತ್ತಿದ್ದರೆ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು…