ರಾಜಕೀಯ
ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಸ್ಥಳೀಯ ಮಟ್ಟದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್* by-ಕೆಂಧೂಳಿ ಬೆಂಗಳೂರು, ಫೆ.25-“ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಗೆ ತೆರಳುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಪದಾಧಿಕಾರಿಗಳ ಪಟ್ಟಿಯಲ್ಲಿ ಕೆಲವು ಮಂತ್ರಿಗಳ ಆಪ್ತರನ್ನು ಕೈಬಿಡಲಾಗಿದೆ ಎಂಬ…