Browsing: ರಾಜಕೀಯ

ರಾಜಕೀಯ

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಎಂಎಲ್ಸಿ ರವಿ ಕುಮಾರ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ

ಬೆಂಗಳೂರು,ಜು,03- ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಸಚಿವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು…

ಸಿದ್ದರಾಮಯ್ಯರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧತೆಗೆ ಸುರ್ಜೇವಾಲಾ ಭೇಟಿ: ಬಿ.ವೈ.ವಿಜಯೇಂದ್ರ ವ್ಯಂಗ್ಯ

ಬೆಂಗಳೂರು,ಜು,02- ಸಿದ್ದರಾಮಯ್ಯನವರ ರಾಜೀನಾಮೆ ತೆಗೆದುಕೊಳ್ಳಲು ಒಂದು ಭೂಮಿಕೆ ಸಿದ್ಧಪಡಿಸಲು ಕಾಂಗ್ರೆಸ್ಸಿನ ಹಿರಿಯ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಅವರು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಬೀಡುಬಿಟ್ಟಿದ್ದಾರೆ. ರಾಜ್ಯದ ಭ್ರಷ್ಟ ಸರಕಾರ ನೆಲಕಚ್ಚಿದ ಬಗ್ಗೆ ಅವರು ತಲೆ ಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದರು. ಸುರ್ಜೇವಾಲಾ ಅವರು ಶಾಸಕರ ಅಭಿಪ್ರಾಯ ಪಡೆದುಕೊಂಡಿದ್ದಾರೆ.…

ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನೂ ಉತ್ತರ ಜಿಲ್ಲೆ;ಸಚಿವಸಂಪುಟದ ನಿರ್ಣಯ

ಬೆಂಗಳೂರು, ಜು,02-ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ “ಬೆಂಗಳೂರು ಉತ್ತರ ತಾಲ್ಲೂಕು” ಎಂದು ಬಾಗೇಪಲ್ಲಿಗೆ “ಭಾಗ್ಯನಗರ” ಎಂದು ಹೆಸರಿಡಲು ಇಂದು ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಈ ಕುರಿತು ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ವಿವರ ನೀಡಿದರು. ಆಡಳಿತವನ್ನು ಬೆಂಗಳೂರು ಕೇಂದ್ರಿತ ಎಂಬುದನ್ನು ತಪ್ಪಿಸಿ ವಿಕೇಂದ್ರೀಕರಣ ಮಾಡುವುದಕ್ಕಾಗಿಯೆ ಆಯಾ ಭಾಗದ ಸಮಸ್ಯೆಗಳ ಮೇಲೆ ಗಮನ ಹರಿಸಿ ಅವುಗಳಿಗೆ ಚಿಕಿತ್ಸಕ ಪರಿಹಾರ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆಗಳನ್ನು ರಾಜ್ಯದ ಬೇರೆ…

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು, ಜು,02-ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸುತ್ತೇನೆ. ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ…

ಕಾಂಗ್ರೆಸ್ ಅಧಿಕಾರ-ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ?: ಸಿ.ಟಿ.ರವಿ

ಬೆಂಗಳೂರು,ಜು,01-ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಭೀಭತ್ಸ ಕೃತ್ಯ ನಡೆದು ತಣ್ಣಗಾಗಿತ್ತು. ಆಗ ಕೃತ್ಯ ಎಸಗಿದಾತ ಮಾನಸಿಕ ಅಸ್ವಸ್ಥ ಎಂದಿದ್ದರು. ಅದರ ನಂತರ ಭಟ್ಕಳದಲ್ಲಿ ಪ್ರಕರಣ ಆಗಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು, ಹೊಸನಗರ,…

ನಮ್ಮ ಕೊನೆ ಉಸಿರಿರುವರೆಗೂ ಮಂಡ್ಯ ಜನರ ಸೇವೆ ಮಾಡುತ್ತೇವೆ- ನಿಖಿಲ್ ಕುಮಾರಸ್ವಾಮಿ

ಮದ್ದೂರು,ಜೂ,30- ಪೆನ್ನು ಪೇಪರ್ ನಾಯಕರೇ ನಿಮ್ದು ಏನೇ ರಾಜಕಾರಣ ಇದ್ದರು ನಿಮ್ಮ ಚೌಕಟ್ಟಿಗೆ ಮಾತ್ರ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಮದ್ದೂರು ವಿಧಾನಸಭಾ ಕ್ಷೇತ್ರದ ಶಾಂತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು ಅವರು. ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆವರೆಗೂ ಗೃಹಲಕ್ಷ್ಮಿ ಹಣ ಹಾಕಲ್ಲ. ಯಾವುದಾದರು ಉಪಚುನಾವಣೆ, ಸಂಸತ್ ಚುನಾವಣೆ ಹಾಗೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ…

ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ: ಸಿ.ಎಂ ವ್ಯಂಗ್ಯ

ಕೆಆರ್ ಎಸ್ .(ಮಂಡ್ಯ) 30-ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿಗಳು ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಸೋತ ಗಿರಾಕಿಗಳು ಸರ್ಕಾರ…

ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ*: *ಸಿಎಂ ಸಿದ್ದರಾಮಯ್ಯ

ಮೈಸೂರು, ಜೂ, 30-:ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಕೇಳುವುದಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು. ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು ಬಿಜೆಪಿಯವರು…

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಗೆ ಜವಾಬ್ದಾರಿ ಇಲ್ವಾ.? ನಿಖಿಲ್ ಕುಮಾರಸ್ವಾಮಿ ಕಿಡಿ

ಮಂಡ್ಯ,ಜೂ,29- ಮೇಕೆದಾಟು ಯೋಜನೆ ವಿಚಾರದಲ್ಲಿ ನಿಮಗೆ ಜವಾಬ್ದಾರಿ ಇಲ್ವ, 136 ಸೀಟು ಕೊಟ್ಟು ಜನರು ಆಶೀರ್ವಾದ ಮಾಡಿಲ್ವಾ? ಪೆನ್ನು ಪೇಪರ್ ಕೊಟ್ಟಿದ್ದು ನಿಮಗೆ ಯಾಕೆ? ಲೂಟಿ, ಭ್ರಷ್ಟಚಾರ, ಕೊಳ್ಳೆ ಹೊಡೆಯೋಕೆ ಪೆನ್ನು ಪೇಪರ್ ಕೊಟ್ರಾ ನಿಮಗೆ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು. ಮಂಡ್ಯದ ಮದ್ದೂರಲ್ಲಿ ಮಾತನಾಡಿದ ಅವರು, ನಮ್ಮ ನೀರು ನಮ್ಮ ಹಕ್ಕು ಅಂತಾ ಹೊರಟಿದ್ರು. ಪೆನ್ನು ಪೇಪರ್ ಕೇಳಿದ್ರು, ಅಂತ ಜನ ಕೊಟ್ಟಿದ್ದಾರೆ. ಹೋಗಿ ತಮಿಳುನಾಡು ಸಿಎಂ ಜತೆ ಮಾತನಾಡಲಿ ನಾವು ನಿಮ್ಮ ಜತೆ ಬರುತ್ತೇವೆ…

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.29-“ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಉತ್ತರಿಸಿದರು.ಕಾವೇರಿ ಆರತಿ ಹಿನ್ನೆಲೆಯಲ್ಲಿ ಹೈಕೋರ್ಟ್ ನೋಟೀಸ್ ಕೊಟ್ಟಿರುವ ಬಗ್ಗೆ ಕೇಳಿದಾಗ, “ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ ಆತಂಕ ಇದೆ. ಆದನ್ನು ಸರ್ಕಾರ ನಿವಾರಣೆ ಮಾಡಲಿದೆ. ಆರತಿ ಮಾಡಲು ಯಾರೂ ಅನುಮತಿ ಕೇಳುತ್ತಿಲ್ಲ. ಅಲ್ಲಿ ಪ್ರತಿನಿತ್ಯ ಆರತಿ ನಡೆಯುತ್ತಿದೆ”…

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂ, 28- ಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ…

ಫವರ್ ಶೆರಿಂಗ್ ಚರ್ಚೆ-ಡಿಕೆಶಿ ಪರಮೇಶ್ ಬೇಟಿ

ಬೆಂಗಳೂರು, ಜೂ, ೨೮- ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಫವರ್ ಶೇರಿಂಗ್ ವಚಾರದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿದ್ದು ಕಳೆದ ರಾತ್ರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭೇಟಿ ನೀಡಿ ಚರ್ಚೆ ನಡೆಸಿದ್ದು ಈ ಇಬ್ಬರ ಭೇಟಿ ವೇಳೆ ಫವರ್ ಶೇರಿಂಗ್ ಕುರಿತಂತೆ ಗಂಭೀರ ಚರ್ಚೆಗಳು ನಡೆದಿವೆ ಎನ್ನುವ ಮಾತುಗಳಿವೆ, ಮುಂದಿನ ನವೆಂಬರ್‌ನಲ್ಲಿ ನಡೆಯಬಹುದಾದ ರಾಜಕೀಯ ಬೆಳವಣಿಗೆ ಕುರಿತು ಈ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ ಈ ಭೇಟಿಯ ಹಿನ್ನೆಲಯಲ್ಲಿ ಮಾಧ್ಯಮಗಳ ಜೊತೆ…

ಅತಿ ಶೀಘ್ರವೇ ಕರ್ನಾಟಕ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಘೋಷಣೆ: ವಿಜಯೇಂದ್ರ

26- ಬೆಂಗಳೂರು,ಜೂ,26-ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನಮ್ಮದು ರಾಷ್ಟ್ರೀಯ ಪಕ್ಷ. ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ನಾನು ಕಳೆದ ಒಂದೂವರೆ ವರ್ಷದಲ್ಲಿ ಬಹಳ ಯಶಸ್ವಿಯಾಗಿ ಕೆಲಸ- ಸಂಘಟನಾ ಕಾರ್ಯ ಮಾಡಿದ್ದೇನೆ ಎಂಬ ವಿಶ್ವಾಸ ನನ್ನಲ್ಲಿದೆ. ನಮ್ಮ ಕಾರ್ಯಕರ್ತರಲ್ಲೂ ಇದೆ. ನಮ್ಮ ಮುಖಂಡರಲ್ಲೂ ಇದೆ. ಹಾಗಾಗಿ ಒಳ್ಳೆಯದಾಗಲಿದೆ; ನಿಮಗೂ…

ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ರೈತರ ಬಂಧನ ಅಮಾನವೀಯ ಮುಖ್ಯಮಂತ್ರಿ ಚಂದ್ರು ಖಂಡನೆ

ಬೆಂಗಳೂರು, ಜೂ, 26-ನಿನ್ನೆ ದೇವನಹಳ್ಳಿ ಚಲೋ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರೈತರು ಗಳನ್ನು ಏಕಾಏಕಿ ಬಂಧಿಸಿರುವ ಪೊಲೀಸರ ಕ್ರಮ ನಿಜಕ್ಕೂ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಅಮಾನವೀಯ ನಡೆ. ಇದನ್ನು ನಾಡಿನ ಎಲ್ಲ ಜನತೆ ಖಂಡಿಸಬೇಕಾಗುತ್ತದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲಿ ನೆರೆದಿದ್ದ ಸಾವಿರಾರು ರೈತರುಗಳು ತಮ್ಮ ವಂಶಾನುಗತ ಕೃಷಿ ಭೂಮಿಯ ಹಕ್ಕಿಗಾಗಿ ಕಳೆದ ಸಾವಿರ ದಿವಸಗಳಿಂದ ಹೋರಾಟ ನಡೆಸುತ್ತಿದ್ದಾರೆ. ಮಹಿಳೆಯರು ವೃದ್ಧರು ಎಂಬುದನ್ನು ಸಹ…

ಸೆಪ್ಟಂಬರ್ ತಿಂಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಬಾರೀ ಬದಲಾವಣೆ- ರಾಜಣ್ಣ

ಬೆಂಗಳೂರು, ಜೂ,26-ಬರುವ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಬಾರೀ ಬದಲಾವಣೆಗಳಾಗಲಿವೆ ಎಂದು ಸಹಕಾರ ಸಚಿವ ರಾಜಣ್ಣ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ರಾಜ್ಯ ರಾಜಕಾರಣದಲ್ಲಿ ಆಶ್ಚರ್ಯಕರ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಬದಲಾವಣೆಯ ಗಾಳಿ ತಣ್ಣಗೆ ಬೀಸುತ್ತಿದೆ ಎಂದರು. ಶಾಸಕರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎನ್ ರಾಜಣ್ಣ, ಏನು ಮಾಡುವುದು ಪವರ್ ಸೆಂಟರ್ ಗಳು ಜಾಸ್ತಿ ಆಗಿವೆ. 2013ರಿಂದ 2018ರವರೆಗೆ ಒಂದೇ ಪವರ್ ಸೆಂಟರ್ ಇತ್ತು. ಈಗ ಒಂದು ಎರಡು…

ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ

ರಾಮನಗರ,ಜೂ,26-ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ…

ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಬದಲಾವಣೆ ಸಾಧ್ಯತೆ

ಬೆಂಗಳೂರು,ಜೂ,26-ರಾಜ್ಯ ಬಿಜೆಪಿಯಲ್ಲಿ ಉಂಟಾಗಿದ್ದ ಆಂತರಿಕ ಭಿನ್ನಾಭಿಪ್ರಾಯಗಳು ಈಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬದಲಾವಣೆ ಆಗುವ ಸಾಧ್ಯತೆಗಳು ಹೆಚ್ಚಿವೆ. ಪ್ರತಿಪಕ್ಷದ ನಾಯಕ ಆಶೋಕ್ ಹಾಗೂ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ದಿಡೀರ್ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡು ರಾಜ್ಯದ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸುತ್ತಿಲ್ಲ ಎನ್ನುವ ಕಾರಣಕ್ಕೆ ಈ ಇಬ್ಬರು ನಾಯಕರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ಲಾಸ್ ತಗೆದುಕೊಂಡಿದ್ದಾರೆ ಎನ್ನಲಾಗಿದೆ. ಕಳೆದವಾರ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ…

ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.25_“ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ತಪ್ಪು ಗ್ರಹಿಕೆಯಿಂದ ಕೆಲವರು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಮ್ಮೆ ಎಲ್ಲರ ಜತೆ ಸಭೆ ಮಾಡುತ್ತೇನೆ. ಈ ಕಾರ್ಯಕ್ರಮ ನಡೆಯಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸೌಧದಲ್ಲಿ ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮ ಸಂಬಂಧ ಮಂಡ್ಯ ಜಿಲ್ಲೆ ರೈತ ಹಾಗೂ ಇತರೆ ಸಂಘಟನೆ ಮುಖಂಡರು ಹಾಗೂ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾಧ್ಯಮಗೋಷ್ಠಿ…

ರಾಜ್ಯ ಸರ್ಕಾರದ ವಿರುದ್ದ ಜನಾಂದೋಲನಕ್ಕೆ ಬಿಜೆಪಿ ತೀರ್ಮಾನ : ಬಸವರಾಜ ಬೊಮ್ಮಾಯಿ

ಹಾವೇರಿ,ಜೂ,23-ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ…

ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ

ರಾಯಚೂರು ಜೂ 23- ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ…

1 2 3 21
error: Content is protected !!