Browsing: ರಾಜಕೀಯ

ರಾಜಕೀಯ

ನೈಸ್ ರಸ್ತೆ ಟೋಲ್ ಹೆಚ್ಚಳದ ವಿರುದ್ಧ ದೇವೇಗೌಡ ಗುಡುಗು

ಬೆಂಗಳೂರು,ಏ.3-  ನೈಸ್ ಸಂಸ್ಥೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಟೋಲ್ ಹಣವನ್ನು ಹೆಚ್ಚಿಸಿದೆ. ಸರ್ಕಾರಿ ಭೂಮಿಯನ್ನು ಮೆಟ್ರೋಗೆ ಮಾರಿ ದುಡ್ಡು ಮಾಡಲು ಹೊರಟಿದೆ. ಈ ಬಗ್ಗೆ ಸರ್ಕಾರಕ್ಕೆ ಅನೇಕ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಮಾಜಿ ಪ್ರಧಾನಿ‌ಎಚ್ ಡಿ ದೇವೇಗೌಡ ನೈಸ್ ವಿರುದ್ಧ ಮತ್ತೆ ಗುಡುಗಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಬಾ ಆಸೆಯಿಟ್ಟುಕೊಂಡು ಈ ನೈಸ್ ಪ್ರಾಜೆಕ್ಟ್‌ಗೆ ಒಪ್ಪಿಗೆ ನೀಡಿದ್ದೆ. ಇದು ನನ್ನ ಕನಸಿನ ಪ್ರಾಜೆಕ್ಟ್ ಆಗಿತ್ತು. ಆದರೆ ನೈಸ್…

ಜನರ ವಿಭಜಿಸುವ ಪ್ರಯತ್ನಸರ್ಕಾರದ  ವಿರುದ್ಧ ಸಿದ್ದು ವಾಗ್ದಾಳಿ

ಬೆಂಗಳೂರು, ಏ.೧: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಎಲ್ಲಾ ವರ್ಗದವರು ತೊಂದರೆಯಲ್ಲಿದ್ದು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿದ್ದರೂ ಇದನ್ನು ಬಿಟ್ಟು ಜನರನ್ನು ವಿಭಜಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ನೂತನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಮಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೋಮುವಾದವನ್ನು ಹೆಚ್ಚು ಮಾಡುತ್ತಿಲ್ಲಾರೆ. ಬಿಜೆಪಿ, ಸಂಘ ಪರಿಹಾರ ಸಂವಿಧಾನದ ವಿರುದ್ಧವಾಗಿ ಜನರ ಮನಸ್ಸನ್ನು ಕೋಮುವಾದದ ಆಧಾರದ ಮೇಲೆ…

ಹಿಂದೂ ದೇವಾಲಯಗಳ ಜಾತ್ರೆಗಳಿಗೆ ಮುಸ್ಲಿಂ ವರ್ತಕರಿಗೆ ನಿರ್ಬಂಧ ಕುರಿತು ಸದನದಲ್ಲಿ ವಾಗ್ವಾದ

ಬೆಂಗಳೂರು,ಮಾ,23;ಹಿಂದೂ ದೇವಾಲಯಗಳ ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ನಿರ್ಬಂಧ ಹೇರಿರುವ ಕುರಿತು ವಿಧಾನ ಸಭೆಯಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಶಾಸಕ ಯು.ಟಿ.ಖಾದರ್, ಹಿಂದೂ ದೇವಾಲಯಗಳ ಧಾರ್ಮಿಕ ಕೇಂದ್ರಗಳಲ್ಲಿ ಕೆಲವು ಧರ್ಮದವರು ವ್ಯಾಪಾರ ಮಾಡಬಾರದು ಎಂದು ಬ್ಯಾನರ್ ಹಾಕಿದ್ದಾರೆ. ಈ ರೀತಿಯ ಬ್ಯಾನರ್ ಹಾಕಿರುವರು ಹೇಡಿಗಳು, ಕ್ರೂರಿಗಳು ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ಕೆಲವು ಶಾಸಕರು ಇದಕ್ಕೆ ದನಿಗೂಡಿಸಿದರು. ಈ ವೇಳೆ ಉಡುಪಿ ಹಾಗೂ…

ಮುಂಬರುವ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಸಮಾನ ಹೋರಾಟ; ದೇವೇಗೌಡ

ಬೆಂಗಳೂರು, ಮಾ, 12: “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಸಮಾನ ಹೋರಾಟ ನಡೆಸಲಿದೆ” ಎಂದು ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದರು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು, “ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನ ಆರಂಭಿಸಿದ್ದೇವೆ. ಇದೇ 20ರಂದು ನಗರದ ಅರಮನೆ ಮೈದಾನದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಅಲ್ಲಿ ನಮ್ಮ ಹೋರಾಟದ ತೀರ್ಮಾನವನ್ನು ಪ್ರಕಟಿಸುತ್ತೇವೆ” ಎಂದರು. “ಜಾತ್ಯಾತೀತ ಜನತಾದಳ ಎಲ್ಲ ಕ್ಷೇತ್ರಗಳಲ್ಲೂ…

ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡೆವು; ಸಿದ್ದರಾಮಯ್ಯ

ಬೆಂಗಳೂರು,ಮಾ,10: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಪಂಜಾಬ್ ನಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡವು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಉತ್ತರಾಖಂಡ್ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಯುಪಿಯಲ್ಲಿ ನಾವು ನಿರೀಕ್ಷೆ ಮಾಡಿರಲಿಲ್ಲ. ಪಂಜಾಬ್ ನಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೆ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ…

ಕೇಂದ್ರಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ವಿದ್ಯಾರ್ಥಿ ಸಮೀಹಕ್ಕೆ ಅವಮಸನ; ಡಿಕೆಶಿ ಆಕ್ರೋಶ

ಬೆಂಗಳೂರು,ಮಾ: ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅರ್ಹತಾ ಪರೀಕ್ಷೆಯಲ್ಲಿ ವಿಫಲರಾದರು ಎಂದು ಹೇಳಿಕೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಸಂಸದೀಯ ಸಚಿವರು ವಿದ್ಯಾರ್ಥಿಗಳನ್ನ ಅವಹೇಳನ ಮಾಡಿದ್ದಾರೆ. ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ ಅಲ್ಲಿಗೆ ಹೋದ್ರು ಅಂತಾರೆ. ಪ್ರಧಾನಿಗಳು ಅದನ್ನೇ ಸಮರ್ಥಿಸಿಕೊಳ್ತಾರೆ. ಇದು ವಿದ್ಯಾರ್ಥಿ ಸಮೂಹಕ್ಕೆ ಮಾಡಿದ ಅಪಮಾನ. ಕೂಡಲೇ ಸಚಿವರು ವಿದ್ಯಾರ್ಥಿಗಳ ಕ್ಷಮೆಯಾಚಿಸಬೇಕು. ಇಲ್ಲವಾದರೆ…

ನೀಟ್‌ʼನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು- ಪ್ರಹ್ಲಾದ ಜೋಶಿ ಹೇಳಿಕೆಗೆ ಎಚ್ ಡಿ ಕೆ ಅತೃಪ್ತಿ

ನೀಟ್‌ʼನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು- ಪ್ರಹ್ಲಾದ ಜೋಶಿ ಹೇಳಿಕೆಗೆ ಅತೃಪ್ತಿ* *ಹೆಚ್‌ಡಿಕೆ ಹೇಳಿರುವುದೇನು? ಬೆಂಗಳೂರು,ಮಾ,02: ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮೇರೆ ಮೀರಿದ್ದು, ಅದಕ್ಕೆ ಕೇಂದ್ರ…

ಜವಾಬ್ದಾರಿಯುತ ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ಪಕ್ಷ ವಿಫಲ : ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆ,16 :ಜವಾಬ್ದಾರಿಯುತ ವಿರೋಧಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಸದನದಲ್ಲಿ ರಾಷ್ಟ್ರಧ್ವಜ ಪ್ರದರ್ಶನದ ಮೂಲಕ ರಾಷ್ಟ್ರಧ್ವಜ ಸಂಹಿತೆಯನ್ನು ಉಲ್ಲಂಘನೆ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಷ್ಟ್ರಧ್ವಜವನ್ನು ಹೇಗೆ ಬಳಕೆ ಮಾಡಬೇಕು ಎನ್ನುವ ಬಗ್ಗೆ ಸಂಹಿತೆಯಿದೆ. ರಾಷ್ಟ್ರಧ್ವಜದ ವಿಷಯ ಎಲ್ಲಿಯೂ ದುರುಪಯೋಗ ಆಗಬಾರದು ಎನ್ನುವುದು ಸಂಹಿತೆಯಲ್ಲಿದೆ. ಆದರೆ ವಿರೋಧಪಕ್ಷದವರು ರಾಜಕೀಯ ಪ್ರೇರಿತವಾಗಿ ಸದನದಲ್ಲಿ ಈ ವಿಷಯವನ್ನು ದುರುಪಯೋಗ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಜನರು ಎಲ್ಲ ಬೆಳವಣಿಗೆಗಳನ್ನು…

ಅನುಧಾನ ನೀಡುವಲ್ಲಿ ತಾರತಮ್ಯ; ಸದನದಲ್ಲಿ ಹೋರಾಟಕ್ಕೆ ಕೈ ನಿರ್ಧಾರ

ಬೆಂಗಳೂರು,ಫೆ,14:ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ಕ್ಷೇತ್ರಗಳನ್ನು ಕಡೆಗಣಿಸಿರುವ ಸರ್ಕಾರದ ಧೋರಣೆ ವಿರುದ್ಧ ತೀವ್ರ ಹೋರಾಟ ನಡೆಸಲು ಶಾಸಕಾಂಗ ಸಭೆ ತೀರ್ಮಾನಿಸಿದೆ. ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಅನುದಾನ ಬಿಡುಗಡೆ ವಿಚಾರ ಕುರಿತು ಸುದೀರ್ಘ ಸಮಾಲೋಚನೆ ನಡೆಯಿತು‌. ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸೇರಿದಂತೆ ಸರ್ಕಾರದ ವಿವಿಧ ಹಗರಣಗಳ ಬಗ್ಗೆಯೂ ಸದನದಲ್ಲಿ ಚಾಟಿ ಬೀಸಲು ನಿರ್ಧರಿಸಲಾಗಿದೆ. ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಲಾಗಿದೆ.…

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ;ಎಚ್ ಡಿ ಕೆ

ರಾಮನಗರ,ಜ,28: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ಶಾಸಕರೂ ಆದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ತೀವ್ರ ಟಾಂಗ್ ನೀಡಿದರು. ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಏನನ್ನೂ ಮಾಡದ ಕಾಂಗ್ರೆಸ್ ನಾಯಕರು, ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ ಅವರು; ನಾನು ಅವರನ್ನಾಗಲಿ…

ಯಾರಿಂದ ಯಾರೂ ತಬ್ಬಲಿಯಾಗಲ್ಲ : ಸಿದ್ದರಾಮಯ್ಯ

ಬೆಂಗಳೂರು, ಜ,28; ಜನರ ಆಶೀರ್ವಾದ ಇರುವ ವರೆಗೆ ಯಾರೂ ತಬ್ಬಲಿಯಾಗಲ್ಲ, ಅದು ಇಬ್ರಾಹಿಂ ಆದರೂ ಅಷ್ಟೇ, ನಾನೇ ಆದರೂ ಅಷ್ಟೆ. ಜನರ ಪ್ರೀತಿ ವಿಶ್ವಾಸ ಮಾತ್ರ ಮುಖ್ಯ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಪ್ರಕಾರ ಸಿ.ಎಂ ಇಬ್ರಾಹಿಂ ಅವರು ಪಕ್ಷ ತೊರೆಯಲ್ಲ, ಜೆಡಿಎಸ್ ಗೆ ಹೋಗಲ್ಲ. ಈ ಹಿಂದೆ ಅವರಿಗೆ ರಾಜ್ಯ ಸಭಾ ಸ್ಥಾನವನ್ನು ತಪ್ಪಿಸಿದ್ದೇ ದೇವೇಗೌಡರು ಹಾಗಾಗಿ ಅವರು ಮತ್ತೆ ಜೆಡಿಎಸ್…

ಬಿಜೆಪಿ‌ಯಿಂದ ಮಾತ್ರ ಮೇಕೆದಾಟು ಜಾರಿ ಸಾಧ್ಯ; ಅಶ್ವತ್ಥ ನಾರಾಯಣ

ರಾಮನಗರ,ಜ,11`ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸುತನ ಇರೋದು ಬಿಜೆಪಿಗೆ ಮಾತ್ರ; ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ. ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಪೌರುಷವಿದೆಯಾ? ಈ ವಿಚಾರದಲ್ಲಿ ನಾನು ನೇರವಾಗಿ ಅವರಿಬ್ಬರಿಗೂ ಸವಾಲೆಸೆಯುತ್ತಿದ್ದೇನೆ. ತಾಕತ್ತಿದ್ದರೆ ಅವರು ಉತ್ತರಿಸಲಿ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಂಥಾಹ್ವಾನ ನೀಡಿದ್ದಾರೆ. ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಡಿ.ಕೆ.ಶಿವಕುಮಾರ್ ಜಿಲ್ಲೆಯಿಂದ ಏಳು ಬಾರಿ ಶಾಸಕರಾಗಿ,…

ಕೋವಿಡ್ ಪರಿಸ್ಥಿತಿಯನ್ನು ಸರ್ಕಾರ ಸೂಕ್ತವಾಗಿ ನಿರ್ವಹಿಸುತ್ತಿಲ್ಲ-ಸಿದ್ದು

ರಾಮನಗರ,ಜ,೧೧: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾದರೆ ಅದಕ್ಕೆ ಬಿಜೆಪಿಯೇ ಕಾರಣ ಹೊರತು ಕಾಂಗ್ರೆಸ್ ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕನಕಪುರದಲ್ಲಿ ಮಂಗಳವಾರ ಮೇಕೆದಾಟು ಮೂರನೇ ದಿನದ ಪಾದಯಾತ್ರೆ ಆರಂಭಕ್ಕೆ ಮುನ್ನ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಸೂಕ್ತವಾಗಿ ಸರ್ಕಾರ ನಿರ್ವಹಿಸಲಿಲ್ಲ. ಬಿಜೆಪಿ ನಾಯಕರೇ ಕಾರ್ಯಕ್ರಮಗಳನ್ನು ಮಾಡಿದರು. ಈಗ ಪಾದಯಾತ್ರೆ ಸಲುವಾಗಿ ಲಾಕ್ ಡೌನ್ ನಾಟಕ ಆರಂಭ ಆಗಿದೆ ಎಂದು ದೂರಿದರು.ಪಾದಯಾತ್ರೆ ಮಾಡಿದ್ದಕ್ಕೆ ೩೧ ಜನರ ಮೇಲೆ ಕೇಸು ಹಾಕಿಸಿದ್ದೀರಿ.…

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ

ಬೆಂಗಳೂರು. ಜ, 9:ಜನರನ್ನು ಮರುಳು ಮಾಡಲು ಕಾಂಗ್ರೆಸ್ ಪಕ್ಷ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ನ್ನು ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕಿಶಿಯವರು ನೀರಾವರಿ ಸಚಿವರಾಗಿದ್ದರು, ಆಗಲೂ ಈ…

ಕಾಂಗ್ರೆಸ್ ಪಾದಯಾತ್ರೆಗೆ ಹರಿದುಬಂದ ಜನಸಾಗರ

ರಾಮನಗರ,ಜ.9- ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರಗೆ ಕಾಂಗ್ರೆಸ್ ಹಿರಿಯನಾಯಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ವೀಕ್ ಎಂಡ್ ಕರ್ಫ್ಯೂ ಅಡ್ಡಿಯಾಗಬಹುದು ಎನ್ನುವ ಆತಂಕದ ಮಧ್ಯೆಯೇ ಸಾವಿರಾರು ಜನ ಜಮಾಯಿಸಿದ್ದರು ಆದರೆ ಕರ್ಪ್ಯೂ ಅಡ್ಡಿ ಅಗಲಿಲ್ಲ ಹೀಗಾಗಿ ಮತ್ತಷ್ಟು ಜನಸಾಗರ ಸೇರಿ ಬರುತ್ತಿದೆ. ಪೊಲೀಸರಿಂದ ಅಡೆತಡೆಗಳು ಎದುರಾಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಕಾರ್ಯಕರ್ತರ ಉತ್ಸಾಹ ಇನ್ನಷ್ಟು ಇಮ್ಮಡಿಯಾಗಿತ್ತು. ದ್ವಿಚಕ್ರ ವಾಹನಗಳಲ್ಲಿ, ಖಾಸಗಿ ವಾಹನಗಳಲ್ಲಿ ಪಾದಯಾತ್ರೆ ಆರಂಭದ ಸಂಗಮ ಕ್ಷೇತ್ರಕ್ಕೆ ದಾಂಗುಡಿ ಇಟ್ಟು ಬಂದರು. ಪೆÇಲೀಸರು ಯಾರನ್ನೂ…

ಬಿಜೆಪಿ ಉದ್ದೇಶಪೂರ್ವಕವಾಗಿ ಲಾಕ್ ಡೌನ್ ಮಾಡಿದೆ ಡಿಕೆಶಿ ಆರೋಪ

ಬೆಂಗಳೂರು, ಜ.7: ರಾಜ್ಯದಲ್ಲಿ ಲಾಕ್ ಡೌನ್ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿಲ್ಲ ಆದರೂ ಬಿಜೆಪಿ ಉದ್ದೇಶಪೂರ್ವಕವಾಗಿ ವೀಕ್ ಎಂಡ್ ಲಾಕ್ ಡೌನ್ ಜಾರಿ ಮಾಡುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಕೋವಿಡ್ ಹೆಸರಿನಲ್ಲಿ ಸರ್ಕಾರದ ನಿರ್ಬಂಧದ ವಿಚಾರವಾಗಿ ನಮಗೆ ಸಾವಿರಾರು ಕರೆಗಳು ಬರುತ್ತಿದ್ದು, ವೀಕೆಂಡ್ ಕರ್ಫ್ಯೂ ಬಗ್ಗೆ ತಮ್ಮ ನೋವು ಹೇಳಿಕೊಂಡು, ವಿರೋಧ ಪಕ್ಷವಾಗಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳುತ್ತಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿನ ಪಾಸಿಟಿವಿಟಿ…

ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ದೇವೇಗೌಡರಿಂದ ಚಾಲನೆ

ಬೆಂಗಳೂರು,ಜ,07: ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಹಮ್ಮಿಕೊಂಡಿರುವ’ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಚಾಲನೆ ನೀಡಿದರು ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆಯ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಜನತಾ ಜಲಧಾರೆಯ ಲಾಂಛನ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು,ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ…

ಅರಗಜ್ಞಾನೇಂದ್ರ ಹೇಳಿಕೆಗೆ ಸಿದ್ದು ತಿರುಗೇಟು

ಬೆಂಗಳೂರು,ಜ,06: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೋವಿಡ್ ಹಿನ್ನೆಲೆ ಇದಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು ಈ ಬೆನ್ನಲ್ಲೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ನಿಯಮಬದ್ಧವಾಗೇ ಪಾದಯಾತ್ರೆ ಮಾಡುತ್ತೇವೆ. ಅವರು ಬೇಕಾದ್ರೆ ಕ್ರಮಕೈಗೊಳ್ಳಲಿ. ಲೆಟ್ ದೆಮ್ ಟೇಕ್ ಆಕ್ಷನ್. ಇದಕ್ಕೆ ನಾವು ಹೆದರುವುದಿಲ್ಲ ಎಂದು…

ಕಾಂಗ್ರೆಸ್ ಪಾದಾಯಾತ್ರೆಗೆ ಅನುಮತಿ ಇಲ್ಲ; ಅರಗ ಜ್ಞಾನೇಂದ್ರ

ಬೆಂಗಳೂರು,ಜ,06: ಯಾವದೇ ಕಾರಣಕ್ಕೂ ಕಾಂಗ್ರೆಸ್ ಪಾದಯಾತ್ರಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಒಂದು ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ಧರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಡಿಕೆ ಶಿವಕುಮಾರ್ ಮಂತ್ರಿಯಾಗಿ ಸರ್ಕಾರ ನಡೆಸಿದವರು. ಅವರೇ ಈಗ ಕೋವಿಡ ನಿಯಮ ಉಲ್ಲಂಘಿಸಿದರೆ ಹೇಗೆ. ಅವರೇ ಹೀಗೆ ಮಾತನಾಡಿದರೇ ಹೇಗೆ. ಕಾಂಗ್ರೆಸ್ ವಿವೇಚನೆ ಮಾಡಬೇಕು. ಕಾಂಗ್ರೆಸ್ ಪಕ್ಷದವರಿಗೆ ಒಂದು ನಿಯಮ ಬೇರೆಯವರಿಗೆ ಒಂದು ನಿಯಮ…

ಸಿಎಂ ಸಮ್ಮುಖದಲ್ಲೇ ಸಚಿವ ಸಂಸದರ ಗಲಾಟೆ

ರಾಮನಗರ, ಜನವರಿ 3: ರಾಮನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಸಿಎಂ ಬಸವರಾಜ ಬೊಮ್ಮಯಿ ಸಮ್ಮುಖದಲ್ಲಿ ಸಚಿವ, ಸಂಸದರ ನಡುವೆ ಗಲಾಟೆ ನಡೆದಿದೆ. ರಾಮನಗರದಲ್ಲಿ ಕಾರ್ಯಕ್ರಮ ವೇಳೆ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಸಂಸದ ಡಿ.ಕೆ.ಸುರೇಶ್ ಮಧ್ಯೆ ವಾಕ್ಸಮರ ಉಂಟಾಗಿದ್ದು, ಸಚಿವ ಡಾ.ಅಶ್ವತ್ಥ್ ನಾರಾಯಣ ಭಾಷಣಕ್ಕೆ ಡಿ.ಕೆ. ಸುರೇಶ್ ತೀವ್ರ ವಿರೋಧ ವ್ಯಕ್ತ ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ’ ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ’…

1 4 5 6 7 8 15
error: Content is protected !!