ರಾಜಕೀಯ
ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ
ರಾಮನಗರ,ಜೂ,26-ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದು ನಮ್ಮ ಸ್ವ ಕ್ಷೇತ್ರ, ನೀವು ಬೆಳೆಸಿದ ಮನೆ ಮಕ್ಕಳು ನಾವು. ನಮ್ಮನ್ನ ಪ್ರೀತಿಯಿಂದ ಅರಸಿದ್ದೀರಿ, ಬೆಳೆಸಿದ್ದೀರಿ. ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ. ಸೋಲು ಗೆಲುವು ಸರ್ವೇ ಸಾಮಾನ್ಯ ನನ್ನ ಮೂರು ಸೋಲುಗಳು ನನಗೆ ರಾಜಕೀಯವಾಗಿ ಪರಿಪಕ್ವತೆಯನ್ನು ಕಲಿಸಿವೆ. ಈ ಸೋಲುಗಳಿಂದ ಕುಗ್ಗದೆ ಮತ್ತೆ ಅವಕಾಶ ಸಿಕ್ಕರೆ ರಾಮನಗರದಿಂದಲೇ ಸ್ವರ್ಧೆ…

















