Browsing: ರಾಜಕೀಯ

ರಾಜಕೀಯ

ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ದೇವೇಗೌಡರಿಂದ ಚಾಲನೆ

ಬೆಂಗಳೂರು,ಜ,07: ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಹಮ್ಮಿಕೊಂಡಿರುವ’ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಚಾಲನೆ ನೀಡಿದರು ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆಯ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಜನತಾ ಜಲಧಾರೆಯ ಲಾಂಛನ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು,ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ…

ಅರಗಜ್ಞಾನೇಂದ್ರ ಹೇಳಿಕೆಗೆ ಸಿದ್ದು ತಿರುಗೇಟು

ಬೆಂಗಳೂರು,ಜ,06: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೋವಿಡ್ ಹಿನ್ನೆಲೆ ಇದಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು ಈ ಬೆನ್ನಲ್ಲೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ನಿಯಮಬದ್ಧವಾಗೇ ಪಾದಯಾತ್ರೆ ಮಾಡುತ್ತೇವೆ. ಅವರು ಬೇಕಾದ್ರೆ ಕ್ರಮಕೈಗೊಳ್ಳಲಿ. ಲೆಟ್ ದೆಮ್ ಟೇಕ್ ಆಕ್ಷನ್. ಇದಕ್ಕೆ ನಾವು ಹೆದರುವುದಿಲ್ಲ ಎಂದು…

ಕಾಂಗ್ರೆಸ್ ಪಾದಾಯಾತ್ರೆಗೆ ಅನುಮತಿ ಇಲ್ಲ; ಅರಗ ಜ್ಞಾನೇಂದ್ರ

ಬೆಂಗಳೂರು,ಜ,06: ಯಾವದೇ ಕಾರಣಕ್ಕೂ ಕಾಂಗ್ರೆಸ್ ಪಾದಯಾತ್ರಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಒಂದು ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ಧರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಡಿಕೆ ಶಿವಕುಮಾರ್ ಮಂತ್ರಿಯಾಗಿ ಸರ್ಕಾರ ನಡೆಸಿದವರು. ಅವರೇ ಈಗ ಕೋವಿಡ ನಿಯಮ ಉಲ್ಲಂಘಿಸಿದರೆ ಹೇಗೆ. ಅವರೇ ಹೀಗೆ ಮಾತನಾಡಿದರೇ ಹೇಗೆ. ಕಾಂಗ್ರೆಸ್ ವಿವೇಚನೆ ಮಾಡಬೇಕು. ಕಾಂಗ್ರೆಸ್ ಪಕ್ಷದವರಿಗೆ ಒಂದು ನಿಯಮ ಬೇರೆಯವರಿಗೆ ಒಂದು ನಿಯಮ…

ಸಿಎಂ ಸಮ್ಮುಖದಲ್ಲೇ ಸಚಿವ ಸಂಸದರ ಗಲಾಟೆ

ರಾಮನಗರ, ಜನವರಿ 3: ರಾಮನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಸಿಎಂ ಬಸವರಾಜ ಬೊಮ್ಮಯಿ ಸಮ್ಮುಖದಲ್ಲಿ ಸಚಿವ, ಸಂಸದರ ನಡುವೆ ಗಲಾಟೆ ನಡೆದಿದೆ. ರಾಮನಗರದಲ್ಲಿ ಕಾರ್ಯಕ್ರಮ ವೇಳೆ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಸಂಸದ ಡಿ.ಕೆ.ಸುರೇಶ್ ಮಧ್ಯೆ ವಾಕ್ಸಮರ ಉಂಟಾಗಿದ್ದು, ಸಚಿವ ಡಾ.ಅಶ್ವತ್ಥ್ ನಾರಾಯಣ ಭಾಷಣಕ್ಕೆ ಡಿ.ಕೆ. ಸುರೇಶ್ ತೀವ್ರ ವಿರೋಧ ವ್ಯಕ್ತ ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ’ ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ’…

ಸಿದ್ದರಾಮಯ್ಯ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ!

ಬೆಂಗಳೂರು,ಜ,03: ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಸೋಮವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಿಸ್ಟರ್ ಸುಳ್ಳಯ್ಯ ಎಂದು ಕರೆದಿದಿದ್ದಾರೆ. ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುತ್ತಿರುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ…

ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ; ಎಚ್ ಡಿಕೆ ಆಕ್ರೋಶ

ಬೆಂಗಳೂರು,ಡಿ,27:ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ, ಪರೀಕ್ಷೆಯನ್ನು ಬಹಿಷ್ಕರಿಸಿದ್ದಲ್ಲದೇ ಪ್ರತಿಭಟನೆ ನಡೆಸಿದ್ದರು. ಈ ಕುರತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ಕಿಡಿಕಾರಿದ್ದಾರೆ. ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ ಕುಮಾರಸ್ವಾಮಿ, ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ.…

ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದು ಸಿದ್ದು ವಿರುದ್ಧ ಕಿಡಿಕಾರಿದ ಎಚ್ ಡಿ.ಕೆ

ಬೆಳಗಾವಿ,ಡಿ,22: ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರತಿಪಕ್ಷ ನಾಯಕರನ್ನು ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ʼಗೆ ಹೋಲಿಕೆ ಮಾಡಿ ಟಾಂಕ್ ನೀಡಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಮೇಲೆ ಪ್ರಹಾರ ನಡೆಸಿರುವ ಅವರು; ಸಿದ್ದರಾಮಯ್ಯ ಅವರನ್ನು ʼಗೊಬೆಲಪ್ಪʼ ಮತ್ತು ʼಬ್ರೋಕರಪ್ಪʼ ಎಂದು ಕರೆದಿದ್ದಾರೆ. ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ…

ಮತಾಂತರ ನಿಷೇಧ ಕಾಯ್ಕೆ ಸಂವಿಧಾನ ಬಾಹಿರ;ಡಿಕೆಶಿ

ಬೆಳಗಾವಿ,ಡಿ,೨೧: ಮತಾಂತರ ನಿಷೇಧ ಕಾಯ್ದೆ ಸಂವಿಧಾನ ಬಾಹಿರವಾಗಿದೆ . ಈ ಕಾಯ್ದೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದು ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಹೇಳಿದರು. ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ ಕಾಯ್ದೆಯನ್ನ ಮಂಡನೆ ಮಾಡಲಿದ್ದು, ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸರ್ಕಾರದವರು ರಾಜ್ಯದಲ್ಲಿ ಅಶಾಂತಿ ಮೂಡಿಸಲು ಮತಾಂತರ ನಿಷೇಧ ಕಾಯ್ದೆ ತರುತ್ತಿದ್ದಾರೆ. ಸಂವಿಧಾನದ ವಿರುದ್ಧವಾಗಿ ಇದನ್ನ ತೆಗೆದುಕೊಳ್ಳಲಾಗಿದೆ. ಸುಮ್ಮನೇ ಮಾನಸಿಕವಾಗಿ…

ಎಂಇಎಸ್ ವಿರುದ್ಧ ಕಠಿಣ ಕ್ರಮಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಳಗಾವಿ,ಡಿ,20: ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆಯನ್ನು ಕನ್ನಡಿಗರು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕನ್ನಡಿಗರ ಉದಾರತೆಯನ್ನು ಪದೇ ಪದೇ ದುರುಪಯೋಗಪಡಿಸಿಕೊಳ್ಳುವ ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸುವ ಕುರಿತು ಕಾನೂನು ರೀತ್ಯ ಕ್ರಮ ಕೈಗೊಳ್ಳುವಂತೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಘಟನೆ ಸಂಬಂಧ ಖಂಡನಾ ನಿರ್ಣಯ ಅಂಗೀಕರಿಸುವಂತೆ ಆಗ್ರಹಿಸಿದ್ದಾರೆ. ಸಂಗೊಳ್ಳಿ ರಾಯಣ್ಣ, ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಹಾಗೂ…

ಸಭಾಪತಿ ಆದೇಶ ಉಲ್ಲಂಘನೆ;೧೪ ಮಂದಿ ಕಾಂಗ್ರಸ್ ಸದಸ್ಯರ ಅಮಾನತು

ಬೆಳಗಾವಿ,ಡಿ,14: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ ಅದೇಶ ಉಲ್ಲಂಘನೆ ಆರೋಪದಡಿಯಲ್ಲಿ ವಿಧಾನ ಪರಿಷತ್ತಿನ 14 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ. ಸದನದ ಬಾವಿಗಿಳಿದು ಧರಣಿ ಮಾಡಿದ್ದ ಸದಸ್ಯರನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಒಂದು ದಿನದ ಮಟ್ಟಿಗೆ ಅಮಾನತು ಮಾಡಿದ್ದಾರೆ. ಸಿಎಂ ಇಬ್ರಾಹಿಂ, ಪಿಆರ್ ರಮೇಶ್, ಪ್ರತಾಪ್ ಚಂದ್ರ ಶೆಟ್ಟಿ, ಎಸ್ ಆರ್ ಪಾಟೀಲ್, ಪಿಆರ್ ರಮೇಶ್, ನಾರಾಯಣ ಸ್ವಾಮಿ, ಬಿಕೆ ಹರಿಪ್ರಸಾದ್, ಯಬಿ ವೆಂಕಟೇಶ್, ವೀಣಾ ಅಚ್ಚಯ್ಯ ಸೇರಿ 14 ಮಂದಿಯನ್ನು ಅಮಾನತು…

ಮತಾಂತರ ನಿಷೇಧ ಕಾಯ್ದೆ ವಿರೋಧಿಸಲು ತೀರ್ಮಾನ

ಬೆಳಗಾವಿ, ಡಿ.15: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೂ ಪೂರ್ವಭಾವಿಯಾಗಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿತು. ಈ ಸಂದರ್ಭದಲ್ಲಿ ವಿಧಾನ ಪರಷತ್ತಿಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಲಾಯಿತು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಿಎಲ್‌ಪಿ ಸಭೆಯಲ್ಲಿ, ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆಯನ್ನು ತೀವ್ರವಾಗಿ ವಿರೋಧಿಸುವ ತೀರ್ಮಾ ಕೈಗೊಳ್ಳಲಾಯಿತು. ಸಭೆಯ ಆರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ‘ಮತಾಂತರ ಕಾಯ್ದೆ ಭಾವನಾತ್ಮಕ ವಿಷಯ.…

ಕಮಲ ಕೈಗೆ ಸಮಬಲ-ಜೆಡಿಎಸ್‌ಗೆ ಮುಖಭಂಗ

ಬೆಂಗಳೂರು,ಡಿ.೧೪- ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಧಿಕಾರರೂಢ ಬಿಜೆಪಿ ಪ್ರಮುಖ ಪ್ರತಿ ಪಕ್ಷವಾದ ಕಾಂಗ್ರೆಸ್ ಸಮಬಲ ಸಾಧಿಸಿದ್ದು, ಜೆಡಿಎಸ್ ತೀವ್ರ ಮುಖಭಂಗ ಅನುಭವಿಸಿದೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ೧೨ ಸ್ಥಾನಗಳಲ್ಲಿ ಜಯಗಳಿಸಿದ್ದು, ಕಾಂಗ್ರೆಸ್ ೧೧, ಜೆಡಿಎಸ್ ೧ ಮತ್ತು ಪಕ್ಷೇತರರು ೧ ಸ್ಥಾನದಲ್ಲಿ ಜಯಗಳಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ೬ ಸ್ಥಾನಗಳಲ್ಲಿ ಮಾತ್ರ ಜಯಗಳಿಸಿದ್ದ ಬಿಜೆಪಿ, ಈ ಚುನಾವಣೆಯಲ್ಲಿ ತನ್ನ ಬಲ ಹೆಚ್ಚಿಸಿಕೊಂಡಿದ್ದು, ಕಳೆದ…

ವಿರೋಧಪಕ್ಷದವರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ದ;ಸಿಎಂ

ಬೆಳಗಾವಿ, ಡಿ, 13 :ವಿರೋಧಪಕ್ಷದವರು ಪ್ರಸ್ತಾಪ ಮಾಡುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಮಾನ ನಿಲ್ದಾಣ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಹಲವಾರು ಕಾನೂನುಗಳನ್ನು ತರುವುದು , ಜನಪರವಾದ ಅಭಿವೃದ್ಧಿಯ ಕುರಿತು ಚರ್ಚೆ ಮಾಡಿ ಅದಕ್ಕೆ ಪರಿಹಾರ ದೊರಕಿಸುವುದು ಸರ್ಕಾರದ ಆದ್ಯತೆ. ಸಮಗ್ರ ಕರ್ನಾಟಕದ ಜೊತೆಗೆ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿಯ ವಿಚಾರ ಹಾಗೂ ಯೋಜನೆಗಳ ಬಗ್ಗೆ ಚರ್ಚೆ…

ವಿನಾಶಕಾಲೇ ವಿಪರೀತ ಸುಳ್ಳು; ಸಿದ್ಧು ವಿರುದ್ದ ಎಚ್ ಡಿಕೆ ಟೀಕಾಪ್ರಹಾರ

ಬೆಂಗಳೂರು,ಡಿ,13: ಮೈತ್ರಿ ಸರಕಾರ ರಚನೆ ಮಾಡಲು ಜೆಡಿಎಸ್‌ʼನವರ ಮನೆ ಬಾಗಿಲಿಗೆ ಹೋಗಿಲ್ಲ. ವರಿಷ್ಠರ ಜತೆ ಮಾತುಕತೆ ಆಗಿದ್ದು ನಿಜ. ನಾನಂತೂ ಅವರ ಮನೆಗೆ ಹೋಗಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ನೀಡಿದ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಳಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು; “ಜೆಡಿಎಸ್‌ ನಾಯಕರು ಮತ್ತು ಪಕ್ಷದ ಬಗ್ಗೆ ಸರಣಿ ಸುಳ್ಳುಗಳನ್ನು ಹೇಳುತ್ತಿರುವ ಅವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ” ಎಂದು ಹೇಳಿದ್ದಾರೆ. ಕಟ್ಟುವುದು ಮನುಷ್ಯತ್ವ,…

ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ-ಆಡಳಿತ;ಪ್ರಕತಿಪಕ್ಷಗಳ ನಡುವೆ ವಾಕ್ಸಮರ

ಬೆಳಗಾವಿ,ಡಿ. ೧೩ : ಇಂದಿನಿಂದ ಆರಂಭವಾಗಲಿರುವ ವಿಧಾನಮಂಡಲ ಉಭಯ ಸನದಗಳ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷ ಹಾಗೂ ಆಡಳಿತರೂಢ ಪಕ್ಷನ ನಡುವೆ ತೀವ್ರ ವಾಕ್ಸಮರ ಆರಂಭವಾಗುವ ಸಾಧ್ಯತೆಗಳಿವೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆರಂಭವಾಗಲಿರುವ ಈ ಅಧಿವೇಶನದಲ್ಲ ಪ್ರಮುಖವಾಗಿ ಬಿಟ್ ಕಾಯಿನ್, ೪೦ ಪರ್ಸೆಂಟ್ ಕಮಿಷನ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಮಳೆಹಾನಿ ಪರಿಹಾರ ಕಲ್ಪಿಸುವಲ್ಲಿನ ವೈಫಲ್ಯದಂತಹ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿದ್ದರೆ ಇದಕ್ಕೆ ಪ್ರತ್ಯುತ್ತರ ನೀಡಲು ಎಂಬಂತೆ ಆಡಳಿತಾರೂಢ ಬಿಜೆಪಿಯು ಮತಾಂತರ ನಿಷೇಧ…

ಸಿದ್ದರಾಮಯ್ಯ ಅವರನ್ನು ಕೇಳಿ ಮೋದಿ ಅವರನ್ನು ಭೇಟಿಯಾಗಬೇಕಿತ್ತಾ ಸಿದ್ದು ವಿರುದ್ಧ ದೇವೇಗೌಡ ಕಿಡಿ

ಚಿಕ್ಕಬಳ್ಳಾಪುರ,ಡಿ,02: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ.ದೇವೇಗೌಡ ಪ್ರಶ್ನಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಏಳೆಂಟು ಬಾರಿ ಭೇಟಿಯಾಗಿದ್ದೇನೆ. ಈ ಹಿಂದೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 10 ಬಾರಿ ಭೇಟಿಯಾಗಿದ್ದೆ. ಮೋದಿ ಅವರನ್ನು ಭೇಟಿಯಾದ ತಕ್ಷಣ ಜೆಡಿಎಸ್​​ ಅವರಿಗೆ ಒಪ್ಪಿಸಿದಂತೆ ಆಗುತ್ತದೆಯೇ? ಎಂಥ…

ಸಿದ್ದು ವಿರುದ್ಧ ಎಚ್ ಡಿಕೆ ವಾಗ್ದಾಳಿ

ಬೆಂಗಳೂರು (ನೆಲಮಂಗಲ): ಮಾಜಿ ಪ್ರಧಾನಿ ದೇವೇಗೌಡರು ಅವಕಾಶವಾದಿ ರಾಜಕಾರಣಿ ಹಾಗೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹಾಗೆ ಹೇಳಿಕೊಳ್ಳುವ ಬದಲು ಒಂದು ಸ್ಲೇಟಿನಲ್ಲಿ ” ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ” ಅಂತ ಬರೆದುಕೊಂಡು ಕಟ್ಟು ಹಾಕಿಸಿ ಕುತ್ತಿಗೆಗೆ ಹಾಕಿಕೊಂಡು ತಿರುಗಾಡಲಿ. ಹಾಗೆಯೇ ಪ್ರಚಾರ ಮಾಡಿಕೊಂಡು ದಿನವೂ ಓಡಾಡಲಿ ಎಂದು ಟೀಕಿಸಿದರು. ನೆಲಮಂಗಲದಲ್ಲಿ ಇಂದು ವಿಧಾನ…

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ನಡೆದ ಟೆಂಡರ್ ಗಳ ಬಗ್ಗೆಯೂ ತನಿಖೆಯಾಗಲಿ ;ಸಿದ್ದು

ಮೈಸೂರು,ನ27:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಯಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿ‌ ಇಂದು ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದರು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಲಿ ಎಂದರು. ವಿಧಾನ ಪರಿಷತ್ತಿನ…

ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೀರು,ನ,25:ರಾಜ್ಯದಲ್ಲಿ ಕಾಮಗಾರಿಯಲ್ಲಿ ಅಂದಾಜು ವೆಚ್ಚದಲ್ಲಿ ಶೇ 40ರಷ್ಟು ಕಮಿಷನ್ ಕೊಡಬೇಕು,ಕಾನೂನು ಸಂಪೂರ್ಣ ಕುಸಿದಿದೆ ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕಾಂಗ್ರೆಸ್  ರಾಜ್ಯಪಾಲರಲ್ಲಿ ಒತ್ತಾಯಿಸಿದೆ. ಇಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಯೋಗ  ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಇತ್ತೀಚಿಗೆ ಮಾಧ್ಯಮಗಳಲ್ಲಿ  ಬಂದ  ವರದಿಯಲ್ಲಿ ಸರ್ಕಾರಿ ಕಾಮಗಾರಿಗಳ ಅಂದಾಜು ವೆಚ್ಚದಲ್ಲಿ ಸುಮಾರು 40% ಅನ್ನು ಸರ್ಕಾರದ ಸಚಿವರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕು ಎಂದು…

ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಯತ್ನ: ಹೆಚ್.ಡಿ.ಕೆ ಆರೋಪ

ಬೆಂಗಳೂರು,ನ,10: ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ‘ಜನತಾ ಪರ್ವ 1.O’ ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ಜನತಾ ಸಂಗಮ’ದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದರು…

1 7 8 9 10 11 17
error: Content is protected !!