ರಾಜಕೀಯ
ಪ್ರತಿಭಟನಾ ನಿರತ ರೈತರಮೇಲೆ ಕಾರುಹರಿಸಿ ಹತ್ಯೆ; ಯೋಗಿ ಆದಿತ್ಯನಾಥ ರಾಜೀನಾಮೆಗೆ ಆಗ್ರಹ
ಬೆಂಗಳೂರು,ಅ,04:ದೇಶದಲ್ಲಿ ನೀಚ ರಾವಣ ಸರ್ಕಾರ ಅಧಿಕಾರ ನಡೆಸುತ್ತಿದ್ದು, ಅನ್ನದಾತರು ಹಾಗೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರತಿಭಟನೆನಿರತ ರೈತರ ಮೇಲೆ ಕಾರು ಹರಿಸಿ ಹತ್ಯೆ ಮಾಡಿರುವ ಘಟನೆಗೆ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮೃತ ರೈತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ.…