Browsing: ರಾಜ್ಯ

ರಾಜ್ಯ

ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ತ್ವರಿತ ಸಾಲ ಸೌಲಭ್ಯ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು,ನ,19- ರಾಜ್ಯದ ಮಹಿಳೆಯರು ಸಣ್ಣ ಪ್ರಮಾಣದ ಉದ್ಯಮಗಳನ್ನು ಸ್ಥಾಪಿಸಲು ಸರ್ಕಾರವು ಆರ್ಥಿಕವಾಗಿ ಮತ್ತು ಎಲ್ಲ ರೀತಿಯಲ್ಲಿ ಬೆಂಬಲ ನೀಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಭರವಸೆ ನೀಡಿದರು. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ವತಿಯಿಂದ ನಡೆದ ಅಂತಾರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳಾ ಉದ್ಯಮಿಗಳಿಗೆ ಅಥವಾ ಸ್ವಂತ ಉದ್ಯಮ ಆರಂಭಿಸಲು ಬಯಸುವ ಮಹಿಳೆಯರಿಗೆ ಸರ್ಕಾರವು ಶೇಕಡಾ 3ರ ವಾರ್ಷಿಕ ಬಡ್ಡಿದರದಲ್ಲಿ 5…

ವಿವಿಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು- ಬರಗೂರು ರಾಮಚಂದ್ರಪ್ಪ

ಶಿವಮೊಗ್ಗ,ನ,19-ಯಾವುದೇ ವಿಶ್ವವಿದ್ಯಾನಿಲಯಗಳು ಮುಕ್ತ ವಿಚಾರದ ನೆಪದಲ್ಲಿ ಮತೀಯವಾಗಬಾರದು ಎಂದು ಖ್ಯಾತ ಸಾಹಿತಿ, ಸಂಸ್ಕೃತಿ ಚಿಂತಕ ನಾಡೋಜ ಬರಗೂರು ರಾಮಚಂದ್ರಪ್ಪ ಪ್ರತಿಪಾದಿಸಿದರು. ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಯಾವುದೇ ವಿಶ್ವವಿದ್ಯಾನಿಲಯ ಮುಕ್ತವಾಗಿ ಬೇರೆ ಬೇರೆ ವಿಚಾರಗಳನ್ನು ಪ್ರಸ್ತಾಪ ಮಾಡಿದರೂ ವಿನಃ, ಅಂತಿಮವಾಗಿ ಅದು ಮತೀಯವಾಗದೆ ಇರುವಂತಹ ವಾತಾವರಣವನ್ನು ನಿರ‍್ಮಾಣ ಮಾಡುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ ಎಂದು ತಿಳಿದುಕೊಂಡಿದ್ದೇನೆ ಎಂದರು. ವಿಶ್ವವಿದ್ಯಾನಿಲಯಗಳು ಅದು ಕೇಳಬೇಕು ಇದು ಕೇಳಬೇಕು ನಿಜ, ಆದರೆ ಯಾರು ಸುಂದರವಾದ…

*ಹಿಂದುಳಿದವರು-ದಲಿತರು BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು: ಸಿದ್ದರಾಮಯ್ಯ ಅಪಾರ ಬೇಸರ* ಬೆಂಗಳೂರು ನ19: ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಉದ್ಘಾಟಿಸಿ ಮಾತನಾಡಿದರು. ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ BJP-RSS ಸೇರಿ ಇವರೇ ಮೂಲ RSS ನವರಿಗಿಂತ, ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು. ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ ಎನ್ನುವುದನ್ನು ವಿವರಿಸಿದರು. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವತು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದರು. ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು. ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ ಎಂದರು. ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು. ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಧಿಕ್ಷಣ ಪ್ರಮಾಣ ಶೇ68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದರು. ವಿದ್ಯಾವಂತರು ವಿದ್ಯೆ ಪಡೆದಷ್ಟೂ ಮೌಡ್ಯವನ್ನು ಹೆಚ್ಚೆಚ್ಚು ನಂಬುತ್ತಾರೆ. ಬಡತನಕ್ಕೆ ಹಣೆಬರಹ ಕಾರಣ ಎಂದು ನಂಬುವವರು ಇನ್ನೂ ಇದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾವಂತರೂ ಮೌಡ್ಯವನ್ನು ನಂಬುತ್ತಾರೆ ಎಂದರು. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ ಎಂದರು‌. ಅದಕ್ಕೇ ಆರ್ಥಿಕ, ಸಾಮಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದರು. *ಮೀಸಲಾತಿ ಮಿತಿ ಶೇ75ಕ್ಕೆ ಹೆಚ್ಚಿಸಲೂ ಸಿದ್ಧ: ಸಿ.ಎಂ.ಸಿದ್ದರಾಮಯ್ಯ* ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನಗೆ ಕೊನೆಯ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಮತ್ತೆ ಸ್ಪಷ್ಟಪಡಿಸಿದರು. *ಬಾಕ್ಸ್* *ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು* ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ನನಗೆ ಕೇಳಿದರು ಎಂದು ಸಿಎಂ ನುಡಿದರು. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿ‌ಮಾಡಲು ಬದ್ದವಾಗಿದೆ ಎಂದರು. *ಬಾಕ್ಸ್ 2* ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದ ಸಿಎಂ* ತಮ್ಮ ಭಾಷಣದ ನಡುವೆ ಮುಖ್ಯಮಂತ್ರಿಗಳು ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದರು. ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳನ್ನು ಓದಿ, ನೀವೆಲ್ಲಾ ಮನಯಸ್ಮೃತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಬೆಂಗಳೂರು ನ19-ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ BJP-RSS-ABVP ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. BJP-RSS ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರ ಬೇಸರ ವ್ಯಕ್ತಪಡಿಸಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ, “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಉದ್ಘಾಟಿಸಿ ಮಾತನಾಡಿದರು. ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ BJP-RSS ಸೇರಿ ಇವರೇ ಮೂಲ…

ಪ್ರತಿ ವರ್ಷ ಸಾಲು ಮರದ ತಿಮ್ಮಕ್ಕನವರ ಹೆಸರಿನಲ್ಲಿ ಐದು ಪರಿಸರವಾದಿಗಳಿಗೆ ಪ್ರಶಸ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ, 19- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಒಂದು ಕೋಟಿ ದತ್ತಿ ನಿಧಿಯನ್ನು ಸ್ಥಾಪಿಸಿ ಠೇವಣಿ ಇರುವ ಹಣದ ಬಡ್ಡಿಯಲ್ಲಿ ಪ್ರತಿ ವರ್ಷವೂ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಹಾಗೂ ಕನಿಷ್ಠ ಐದು ಪರಿಸರವಾದಿಗಳಿಗೆ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿಯನ್ನು ಪ್ರತಿ ವರ್ಷ ಕೊಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರುಇಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ -2025 ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ವರ್ಷಗಳ ಸುವರ್ಣ ಮಹೋತ್ಸವವನ್ನು…

ಮೈಸೂರಿನ ಜಿಐ ಪೋರ್ಟ್‌ಫೋಲಿಯೊ 25 ಕ್ಕೆ ತಲುಪಿದೆ: ಸಂಸದ ಯದುವೀರ್ ಒಡೆಯರ್

ಬೆಂಗಳೂರು, ನ,14-ಮೈಸೂರು ಈಗ 25 ಭೌಗೋಳಿಕ ಸೂಚಕ (GI) ಟ್ಯಾಗ್‌ಗಳನ್ನು ಹೊಂದಿದ್ದು, ಇದು ದೇಶದಲ್ಲಿ ಅತಿ ಹೆಚ್ಚು ಪ್ರಾದೇಶಿಕ ಸಂರಕ್ಷಿತ ಉತ್ಪನ್ನಗಳ ಸಾಂದ್ರತೆಗಳಲ್ಲಿ ಒಂದಾಗಿದೆ ಎಂದು ಮೈಸೂರು-ಮಡಿಕೇರಿ ಕ್ಷೇತ್ರದ ಸಂಸತ್ ಸದಸ್ಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟ (FKCCI) ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಒಡೆಯರ್ ಅವರು, ವಿಸ್ತರಿಸುತ್ತಿರುವ ಜಿಐ ನೋಂದಣಿ ಈ ಪ್ರದೇಶದ ಆಳವಾದ ಕುಶಲಕರ್ಮಿ ಪರಂಪರೆ ಮತ್ತು ಅದರ ವಿಶಿಷ್ಟ…

870 ಕೋಟಿ ವೆಚ್ಚದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಿದ ಸಿ.ಎಂ

ಕೂಡ್ಲಿಗಿ ನ9-1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಪಾರವಾಗಿ ಶ್ಲಾಘಿಸಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು.…

ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಿಸಿ ಅಧಿಕೃತ ಆದೇಶ

ಬೆಂಗಳೂರು, ನ,08-ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಕ್ವಿಟಾಲ್ ಗೆ 3550 ರೂ ನಿಗಧಿಗೊಳಿಸಿ  ಸರ್ಕಾರ ಅದಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಕ್ಕರೆ ಹಂಗಾಮಿನಲ್ಲಿ ದೇಶದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ನ್ಯಾಯಯುತ ಮತ್ತು ಲಾಭದಾಯಕ ಬೆಲೆಯ (Fair and Remunerative Price) ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರದ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ…

ಕೃಷಿಕ ಸಮಾಜ ರೈತರ ಸಮಸ್ಯೆ ಬಿಂಬಿಸುವ ಸಂಪರ್ಕ ಕೊಂಡಿ: ಎನ್.ಚಲುವರಾಯಸ್ವಾಮಿ

ಬಳ್ಳಾರಿ, ನ, 08-ರೈತರ ಸಮಸ್ಯೆಗಳನ್ನು ಕೃಷಿ ಇಲಾಖೆಯ ಮೂಲಕ ಸರ್ಕಾರದ ಗಮನ ಸೆಳೆಯುವ ಸಂಪರ್ಕ ಕೊಂಡಿಯಾಗಿ ಕೃಷಿಕ ಸಮಾಜವು ಕೆಲಸ ನಿರ್ವಹಿಸುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾ ಕೃಷಿ ಇಲಾಖೆ ಮತ್ತು ಕೃಷಿಕ ಸಮಾಜ ಇವರ ಸಹಯೋಗದಲ್ಲಿ ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿಂದು ಏರ್ಪಡಿಸಿದ್ದ ಬಳ್ಳಾರಿ ಘಟಕ ಕೃಷಿಕ ಸಮಾಜದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸ್ವತಂತ್ರ ಪೂರ್ವದಲ್ಲೇ ಪ್ರಾರಂಭವಾದ ಕೃಷಿಕ ಸಮಾಜವು ತನ್ನದೇ ಆದ ಇತಿಹಾಸ ಹೊಂದಿದೆ.…

ಕಾಂಗ್ರೆಸ್ ಗೆ ಮತ ಆಕುವವರನ್ನು ಗುರುತಿಸಿ ಬಣೆರೆಡೆಗೆ ಶೀಪ್ಟ್ ಮಾಡಿದ್ದಾರೆ- ಕಾಂಗ್ರೆಸ್ ಆರೋಪ

ಬೆಂಗಳೂರು, ನ,08-ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವವರನ್ನು ಗುರುತಿಸಿ ಅಂತವರನ್ನು ಬೇರೆಡೆಗೆ ಶಿಪ್ಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಮತಗಳ್ಳತನದ ವಿರುದ್ಧ ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ಕೆಪಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಕಲ್ಬುರ್ಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳ ತನ ನಡೆದಿದೆ. ಆಳಂದದಲ್ಲಿ ಮಹಿಳೆಯೊಬ್ಬರ ಸಹೋದರನ ಮತ ಡಿಲೀಟ್ ಆಗಿದೆ. ಈ ಸಂಬಂಧ ದೂರು ಕೊಡುತ್ತಾರೆ ತನಿಖೆಯು ಸಹ ಆರಂಭವಾಗುತ್ತದೆ. ಅಧಿಕಾರಿಗಳು ಕೂಡ ಸಸ್ಪೆಂಡ್…

ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ: ಒಂದು ಪರಂಪರೆ: ಕೆ.ವಿ.ಪ್ರಭಾಕರ್

ಕೋಲಾರ ನ8-ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ…

ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು:ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ 08- ಕನಕದಾಸರು ಕೇವಲ ಭಕ್ತರಾಗಿರದೇ ಒಬ್ಬ ದಾರ್ಶನಿಕ ವ್ಯಕ್ತಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಂತ ಕನಕದಾಸರ ಜಯಂತಿಯನ್ನು ಸರ್ಕಾರ ಶ್ರದ್ಧಾಭಕ್ತಿಗಳಿಂದ ರಾಜ್ಯಾದ್ಯಂತ ಆಚರಿಸುತ್ತಿದೆ. ಕನಕದಾಸರ ಸಂದೇಶಗಳನ್ನು ಈ ನಾಡಿನ ಜನತೆಗೆ ತಿಳಿಸುವಂತಹ ಪ್ರಯತ್ನವನ್ನು ಮಾಡುತ್ತಿದೆ ಎಂದರು. *ಕನಕದಾಸರು ವಿಶ್ವಮಾನವರು* ಕನಕದಾಸರು ಸಮಾಜದಲ್ಲಿ ಬದಲಾವಣೆಯನ್ನು ತರಲು ಬಯಸಿದ್ದರು.…

ಕಬ್ಬು ಬೆಳಗಾರರ ಸಮಸ್ಯೆಯಾಗಿರುವುದು ಕೇಂದ್ರದಿಂದ,ಆದರೂ ರಾಜ್ಯಸರ್ಕಾರ ಸಮಸ್ಯೆಗೆ ಸ್ಪಂದಿಸಲಿದೆ- ಸಿದ್ದರಾಮಯ್ಯ

ಬೆಂಗಳೂರು, ನ,07-ಕಬ್ಬು ಬೆಳೆಗಾರರಿಗೆ ನೆರವಾಗುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜವಾಬ್ದಾರಿಯಾಗಿದೆ. ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎಫ್ಆರ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರದ ಕಾರ್ಯ. ಕೇಂದ್ರ ಸರ್ಕಾರ ದಿನಾಂಕ 6-05-2025ರಲ್ಲಿ ಎಫ್ಆರ್ಪಿ ನಿಗದಿಪಡಿಸಿದೆ. ಈ ಎಫ್ಆರ್ಪಿಯಲ್ಲಿ ಸಾಗಾಟ ಮತ್ತು ಕಟಾವು ವೆಚ್ಚ ಸಹ ಸೇರಿದೆ. ಸಕ್ಕರೆಯ ಎಂಎಸ್ಪಿ ಹೆಚ್ಚಳ ಮಾಡುವಂತೆ ಈ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಸಲ್ಲಿಸಿದ್ದೇವೆ. ಇದೀಗ ಕೇಂದ್ರ ಸರ್ಕಾರ ಸಮಸ್ಯೆ ಹುಟ್ಟು ಹಾಕಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ   ಹೇಳಿದರು. ಕಬ್ಬು ಬೆಳೆಗಾರರ ಸಮಸ್ಯೆ…

ಕೃಷಿ ಸುಧಾರಣೆಗೆ, ಪೂರಕ ಸಂಶೋಧನೆಗೆ ಎನ್.ಚಲುವರಾಯಸ್ವಾಮಿ ಕರೆ

ಶಿವಮೊಗ್ಗ, ನ, 07-ರೈತರ ಉತ್ಪಾದನೆ ಹಾಗೂ ಜೀವನ ಮಟ್ಟ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಹಾಗೂ ತೋಟಗಾರಿಕೆ ಕೃಷಿ ವಿಶ್ವ ವಿದ್ಯಾಲಯದ ವತಿಯಿಂದ ನವಿಲೆ ಕೃಷಿ ವಿವಿ ಅವರಣದಲ್ಲಿ ಏರ್ಪಡಿಸಿರುವ ‘ ಕೃಷಿ ಮೇಳ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೃಷಿ ಸಚಿವರು, ರೈತರು ನಿರಂತರ ಪ್ರಾಕೃತಿಕ‌ ಸವಾಲು ಎದುರಿಸಿ,ಪರಿಶ್ರಮ ಪಟ್ಟು ಕೃಷಿ ನಡೆಸುತ್ತಿದ್ದು…

ಆನೇಕಲ್ ಭಾಗ ಭವಿಷ್ಯದಲ್ಲಿ ಜಿಬಿಎ ವ್ಯಾಪ್ತಿಗೆ ಸೇರ್ಪಡೆ: ಡಿಸಿಎಂ ಡಿ.ಕೆ.ಶಿವಕುಮಾರ್

ಆನೇಕಲ್, ಅ. 23-“ಆನೇಕಲ್ ಭಾಗ ಭವಿಷ್ಯದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಸೇರಲಿದೆ. ಈಗಾಗಲೇ ಕಾವೇರಿ ಕುಡಿಯುವ ನೀರನ್ನು ನೀಡಲಾಗುತ್ತಿದೆ. ಭವಿಷ್ಯದಲ್ಲಿ ನೀಡಬೇಕಾದ ಸವಲತ್ತುಗಳ ಬಗ್ಗೆ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು. ನಗರ ಪ್ರದಕ್ಷಿಣೆ ಅಂಗವಾಗಿ ಗುರುವಾರ ಆನೇಕಲ್ ನ ಮುತ್ತನಲ್ಲೂರಿಗೆ ಭೇಟಿ ನೀಡಿದ್ದ ಡಿಸಿಎಂ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ‌ನೀಡಿದರು. “ಈ ಭಾಗದಲ್ಲಿ ಈಗಿನಿಂದಲೇ ಸಂಚಾರ ದಟ್ಟಣೆ ನಿಯಂತ್ರಣ ಯೋಜನೆ ರೂಪಿಸಬೇಕು. ಏಕೆಂದರೆ ನಗರ ಬೆಳವಣಿಗೆ ಆದ ನಂತರ ಯೋಜನೆ ರೂಪಿಸಲು…

ಮೈಶುಗರ್ ಶಾಲೆ ಅಭಿವೃದ್ಧಿಗೆ 10 ಕೋಟಿ ರೂ. ಶೀಘ್ರ ಬಿಡುಗಡೆ; ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ,ಅ,16- ಜಿಲ್ಲೆಯ ಹೆಗ್ಗುರುತುಗಳಲ್ಲಿ ಒಂದಾಗಿರುವ ಮೈಶುಗರ್ ಶಾಲೆಯನ್ನು ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶೀಘ್ರವೇ 10 ಕೋಟಿ ರೂ. ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಈ ಶಾಲೆಯನ್ನು ಕೊಡುವುದು ಬೇಡ ಎಂದು ಹೇಳಿದ್ದೇನೆ. ಅಲ್ಲದೆ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ ನೀಡಿದ್ದೆ. ಅದರ ವಿಚಾರದಲ್ಲಿ ನಮ್ಮ ತಂಡವೊಂದು ಮಂಡ್ಯದಲ್ಲಿ ಕೆಲಸ ಮಾಡುತ್ತಿದೆ. ಯಾರು ಅದರ ಬಗ್ಗೆ ಲಘುವಾಗಿ…

ಕನ್ನಡವೇ ಜಾತಿ ಎಂದು ನಂಬಿದವರು ಪಾಲನೇತೃ- ಸಿದ್ಧಗಂಗಾ ಶ್ರೀ ಅಭಿಮತ

ಬೆಂಗಳೂರು,ಅ,16-ಪಾಲನೇತೃ ಅವರು ಜಾತಿ ಮತ್ತು ರಾಜಕಾರಣದಿಂದ ದೂರವಿರುವಿದ್ದು ಕನ್ನಡವೇ ಜಾತಿ ಎಂದು ಬದುಕುತ್ತಿರುವವರು ಎಂದು ಸಿದ್ದಗಂಗಾ ಮಠದ ಶ್ರೀ ಶ್ರೀ ಶ್ರೀ ಸಿದ್ದಲಿಂಗಾ ಸ್ವಾಮಿಗಳು ಅಭಿಪ್ರಾಯಪಟ್ಟರು. ಕನ್ನಡಪರ ಚಿಂತಕ, ಹೋರಾಟಗಾರ ಪಾಲನೇತ್ರರವರಿಗೆ ಅಭಿನಂದನಾ ಸಮಾರಂಭ ಮತ್ತು ಕನ್ನಡ ಜಂಗಮ ಪುಸ್ತಕ ಲೋಕರ್ಪಣೆ, ಕನ್ನಡ ಪರ ಹೋರಾಟಗಾರರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ. ಉದ್ಟಾಟಿಸಿ ಮಾತನಾಡಿದರು. ಅಭಿಮಾನಿಗಳು ಗಟ್ಟಿಯಾಗಿ ನಿಲ್ಲುತ್ತಾರೆ. ಕುಗ್ರಾಮದಲ್ಲಿ ಹುಟ್ಚಿದ ಪಾಲನೇತ್ರರವರು ಬೆಂಗಳೂರಿಗೆ ಬಂದು ಕನ್ನಡ ಚಳುವಳಿಯಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿದ್ದಾರೆ. ಕುಮಾರವ್ಯಾಸ ಹೇಳುತ್ತಾರೆ ಮದುವೆ ಎಂಬುದು…

ನವೆಂಬರ್ 1 ರಿಂದ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಅ.15-ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ…

ನವೆಂಬರ್ ನಲ್ಲಿ ಕೇಂದ್ರದಲ್ಲಿ ಕ್ರಾಂತಿ; ಸಂತೋಷ್ ಲಾಡ್ ಬಾಂಬ್

ಬೀದರ್, ಅ,14-ನವೆಂಬರ್ ನಲ್ಲಿ ಕೇಂದ್ರ ಸರ್ಕಾರದಲ್ಲಿ ಕ್ರಾಂತತಿಯಾಗಲಿದ್ದು,ನಿತನ್ ಗಡ್ಕರಿ ಪ್ರಧಾನಮಂತ್ರಿಯಾಗಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ನಮಗೂ ಕೇಂದ್ರದ ʻನವಂಬರ್ ಕ್ರಾಂತಿʼ ಬಗ್ಗೆ ಕುತೂಹಲವಿದೆ. ನಿತಿನ್ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ. ಇನ್ನು ನಿನ್ನೆಯ ಡಿನ್ನರ್‌ ಮೀಟಿಂಗ್‌ ನಲ್ಲಿ ಸಂಪುಟ ಪುನರ್‌ ರಚನೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ ಎಲ್ಲಾ ಉಹಾ ಪೋಹಗಳಷ್ಟೆ. ಸಂಪುಟ ಪುನರ್‌ರಚನೆ ಮಾಡುವುದಾದರೆ ಸಿಎಂ ಡಿಸಿಎಂಗೆ ಪೂರ್ಣ…

ಕಲಬುರ್ಗಿ ಗ್ರಂಥಪಾಲಕಿ ಆತ್ಮಹತ್ಯೆ: ಸಿಬಿಐ ತನಿಖೆ ನಡೆಸಲು ಆರ್. ಅಶೋಕ್ ಆಗ್ರಹ

ಬೆಂಗಳೂರು,ಅ,14-ಕಲಬುರ್ಗಿಯ ಗ್ರಂಥಾಲಯದ ನೌಕರಿಯಲ್ಲಿದ್ದ ಮಹಿಳೆಯದು ಆತ್ಮಹತ್ಯೆಯಲ್ಲ; ಅದು ಸರಕಾರಿ ಪ್ರಾಯೋಜಿತ ಕೊಲೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಈ ಅತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಆಗ್ರಹಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯಲ್ಲಿ ನೌಕರರು ನ್ಯಾಯಕ್ಕಾಗಿ ಮುಷ್ಕರ ನಡೆಸುತ್ತಿದ್ದಾರೆ. ಘಟನೆಯನ್ನು ಮುಚ್ಚಿ ಹಾಕುವ ಎಸ್‍ಐಟಿ, ಆಯೋಗ ರಚಿಸುವ ಸಾಧ್ಯತೆ ಇದೆ. ಕರೂರಿನಲ್ಲಿ ಸುಮಾರು 50 ಜನ ಸತ್ತಿದ್ದರು. ಅಲ್ಲಿ ಎಸ್.ಐ.ಟಿ. ಮಾಡಿ ಆ…

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿ.ಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಅ 14-ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ.…

1 2 3 53
error: Content is protected !!