ಜಿಲ್ಲೆ
ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಚಿವ ರಾಮಲಿಂಗಾರೆಡ್ಡಿ ಸಲಹೆ
ಬೆಂಗಳೂರು,ಜು,20-ಆರೋಗ್ಯವಂತ ಸಮಾಜವಿದ್ದಾಗ, ಸಮಾಜದ ಅಭವೃದ್ದಿ ಸಾಧ್ಯ ಈನಿಟ್ಟಿನಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬಡವರಿಗೆ ಹೈಟೆಕ್ ವೈದ್ಯಕೀಯ ಸೌಲಭ್ಯಗಳು ಕಾಂಗ್ರೆಸ್ ಪಕ್ಷದ ಸರ್ಕಾರ ನೀಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು ಮಹಾಲಕ್ಷ್ಮಿಲೇಔಟ್ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕುರುಬರಹಳ್ಳಿ ಬಯಲು ರಂಗ ಮಂದಿರದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಕಣ್ಣಿನ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರು ದೇಹದಲ್ಲಿ ಸಮಸ್ಯೆ ಇರಲಿ ಅಥವಾ ಇಲ್ಲದಿರಲಿ ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಳ್ಳಿ…