ಬೆಂಗಳೂರು
ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್
ಬೆಂಗಳೂರು, ಏ, 24- ಸಾರ್ವಜನಿಕರಿಮದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು. ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ…