Browsing: ಬೆಂಗಳೂರು

ಬೆಂಗಳೂರು

ಆರೋಗ್ಯಕರ ಜಗತ್ತು ನಿರ್ಮಾಣಕ್ಕೆ ಕೈಜೋಡಿಸಿ:ಗೆಹ್ಲೋಟ್

ಬೆಂಗಳೂರು,ಏ,24: ಪ್ರಾಚೀನ ಭಾರತದ ಶಿಕ್ಷಣ ವ್ಯವಸ್ಥೆ, ಜ್ಞಾನ ಮತ್ತು ವಿಜ್ಞಾನ, ಕೃಷಿ, ಆರ್ಥಿಕತೆ ಮತ್ತು ಉದ್ಯಮವು ಬಹಳ ಶ್ರೀಮಂತವಾಗಿತ್ತು. ಭಾರತವು ಎಲ್ಲಾ ರೀತಿಯ ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದರಿಂದ ಭಾರತ ದೇಶವನ್ನು ವಿಶ್ವ ಗುರು ಮತ್ತು ಚಿನ್ನದ ಹಕ್ಕಿ ಎಂದು ಕರೆಯಲಾಗುತ್ತಿತ್ತು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಗ್ಲೋಬಲ್ ಇಂಡಿಯಾ ಬಿಸಿನೆಸ್ ಫೋರಮ್ ವತಿಯಿಂದ ಆಯೋಜಿಸಲಾಗಿದ್ದ ವೃತ್ತಿಪರ ಶ್ರೇಷ್ಠತೆಗಾಗಿ ರಾಷ್ಟ್ರೀಯ ಪ್ರಶಸ್ತಿ 2022 ವಿತರಣಾ ಮತ್ತು “ಗ್ಲೋಬಲ್ ಬಿಸಿನೆಸ್” ಸೆಮಿನಾರ್ ಕಾರ್ಯಕ್ರಮವನ್ನುದ್ದೇಶಿಸಿ…

ಡಾ.ರಾಜ್ ಜನ್ಮದಿನ; ಗೋಕಾಕ್ ಚಳವಳಿ ನೆನೆದ ಅಶ್ವತ್ಥ್ ನಾರಾಯಣ

ಬೆಂಗಳೂರು,ಏ 24: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಕೇಕ್ ಕತ್ತರಿಸಿದ ಸಚಿವರು, ನೆರೆದಿದ್ದ ಅಭಿಮಾನಿಗಳಿಗೆ ಸಿಹಿ ಮತ್ತು ಉಪಾಹಾರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,…

ಸ್ತನಕ್ಯಾನ್ಸರ್‌ನ ನೂತನ ಚಿಕಿತ್ಸೆ ಕುರಿತು ಕಾರ್ಯಾಗಾರ

ಬೆಂಗಳೂರು,ಏ,19: ಆರಂಭದಲ್ಲಿಯೇ ಸ್ತನ ಕ್ಯಾನ್ಸರ್‌ ಪತ್ತೆ ಹಚ್ಚುವುದು ಉತ್ತಮವೇ? ಇದಕ್ಕೆ ನೂತನ ಚಿಕಿತ್ಸಾ ವಿಧಾನ ಈ ಕುರಿತು “ಸರ್ಜಿಕಲ್‌ ಕಾರ್ಯಾಗಾರ”ವನ್ನು ಫೊರ್ಟಿಸ್‌ ಕ್ಯಾನ್ಸರ್‌ ಇನ್‌ಸ್ಟಿಟ್ಯೂಟ್‌ ಆಯೋಜಿಸಿತ್ತು. ಈ ಕಾರ್ಯಾಗಾರವನ್ನು ನಟಿ ರಾಚೆಲ್‌ ಡೇವಿಟ್‌ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಫೊರ್ಟಿಸ್‌ ಆಸ್ಪತ್ರೆಯ ಸರ್ಜಿಕಲ್‌ ಆಂಕಾಲಜಿ ನಿರ್ದೇಶಕ ಡಾ. ಸಂದೀಪ್‌ ನಾಯಕ್‌, ಸ್ತನ ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅನಿವಾರ್ಯ. ಸ್ತನ ಕ್ಯಾನ್ಸರ್‌ಗೆ ಪ್ರಾರಂಭದಲ್ಲಿ ಸರ್ಜಿಕಲ್‌ ಚಿಕಿತ್ಸೆ ನೀಡುವುದು ಅನಿವಾರ್ಯ. ಇಂಟ್ರಾ ಆಪರೇಟಿವ್‌ ರೇಡಿಯೇಶನ್‌ ಥೆರಪಿ (ಐಒಆರ್‌ಟಿ) ಹೊಸ…

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ದಿಂದ ವಿಶೇಷ ಕೊಡುಗೆ ಘೋಷಣೆ!*

ಬೆಂಗಳೂರು,ಏ,18:ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ಹಾಲಿಡೇಸ್‌ ವಿಶೇಷ ರಿಯಾಯಿತಿ ಘೋಷಿಸಿದೆ. ಹೌದು, 2021-22 ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಮೊದಲ ಹಾಗೂ ದ್ವೀತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ನನ್ನು ತೋರಿಸುವ ಮೂಲಕ ಶೇ.35ರಷ್ಟು ರಿಯಾಯಿಯನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಬೇಸಿಗೆ ರಜೆಯನ್ನು ಆನಂದಿಸಲು ಪ್ರಾರಂಭಿಸಿದ್ದಾರೆ. ಅವರ ಬೇಸಿಗೆ ರಜೆಯ ಮನರಂಜನೆಯನ್ನು ಇನ್ನಷ್ಟು ದ್ವಿಗುಣಗೊಳಿಸಲು ಈ ಆಫರ್‌ ನೀಡಲಾಗಿದೆ. ವಂಡರ್‌ಲಾದಲಿ ಸಾಮಾಜಿಕ ಅಂತರದ ನಿಯಮವನ್ನು ಪಾಲಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು…

ಪಠ್ಯ ಪುಸ್ತಕಗಳಲ್ಲಿ ಲಿಂಗ ತಾರತಮ್ಯ ಬದಲಿಸಲು ಡಿ. ರೂಪ ಒತ್ತಾಯ

ಬೆಂಗಳೂರು,ಮಾ,24:ಶಾಲಾ ಪಠ್ಯ ಪುಸ್ತಕದಲ್ಲಿ ಈಗಲೂ ಲಿಂಗ ತಾರತಮ್ಯ ಮಾಡಲಾಗುತ್ತಿದೆ. ಇದನ್ನು ಮೊದಲು ಬದಲಿಸುವ ಕೆಲಸ ಮಾಡಬೇಕು ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಕರೆ ನೀಡಿದರು. ಕರುನಾಡ ವಿಜಯ ಸೇನೆಯು ಭಾನುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹಲವು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಅವರು ಮಾತನಾಡಿದರು. “ಪಠ್ಯ ಪುಸ್ತಕಗಳಲ್ಲಿ ಕೆಲವು ದಶಕಗಳಿಂದ ರಾಮನು/ಅವನು ಮನೆಗೆ ತರಕಾರಿ ತರುತ್ತಾನೆ. ಸೀತೆ/ಅವಳು ಅಡುಗೆ ಮನೆಯಲ್ಲಿ…

ಬೆಳ್ಳಂಬೆಳಗ್ಗೆ ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು, ಮಾ,೨೨: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ. ನಗರದ ೯ ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಇನ್ನೂ ಮಹತ್ವದ ದಾಖಲೆ ಹುಡುಕಾಟದಲ್ಲಿ ತೊಡಗಿದ್ದಾರೆ. ಎಸಿಬಿ ಅಧಿಕಾರಿಗಳು ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ೯ ಮಧ್ಯವರ್ತಿಗಳು,ಏಜೆಂಟರು, ಭ್ರಷ್ಟ,ಅಕ್ರಮ ವಿಧಾನಗಳಿಂದ ಸಾರ್ವಜನಿಕ ಸೇವಕರ ಮೇಲೆ ಪ್ರಭಾವ ಬೀರುವ ತಮ್ಮ ವೈಯಕ್ತಿಕ ಪ್ರಭಾವದ ಮೂಲಕ ಬೆಂಗಳೂರಿನ ಚಟುವಟಿಕೆಗಳಲ್ಲಿ…

ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ `ಅಕ್ವೇರಿಯಂ’ ಉದ್ಘಾಟನೆ

ಬೆಂಗಳೂರು,ಮಾ,14: ಜಲ ಸಂರಕ್ಷಣೆ, ನೈರ್ಮಲ್ಯ, ಜಲಭೂಗರ್ಭ ವಿಜ್ಞಾನ ಮತ್ತು ಡೇಟಾ ವಿಜ್ಞಾನಗಳಲ್ಲಿ 10 ಲಕ್ಷ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಿರುವ ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ ಆದ `ಅಕ್ವೇರಿಯಂ’ ನವೋದ್ಯಮಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು. ಈ ಸಂಬಂಧ ನಗರದ ಖಾಸಗಿ ಹೋಟೆಲೊಂದರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `5 ಟ್ರಿಲಿಯನ್ ಡಾಲರ್ ಆರ್ಥಿಕಶಕ್ತಿಯ ಆತ್ಮನಿರ್ಭರ ಭಾರತವನ್ನು ಕಟ್ಟುವಲ್ಲಿ ಶುದ್ಧನೀರು ಮತ್ತು ಜಲಭದ್ರತೆ ಎರಡೂ ಪ್ರಮುಖ…

ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು, ಮಾ,12:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ…

 ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾ, 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು. ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ,…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ಮಾರ್ಚ್ 7ರಿಂದ ಮೂರು ದಿನ `ಬೆಂಗಳೂರು- ಇಂಡಿಯಾ ನ್ಯಾನೋ ಸಮಾವೇಶ

ಬೆಂಗಳೂರು,ಮಾ,02: `ಸುಸ್ಥಿರ ಅಭಿವೃದ್ಧಿಗಾಗಿ ನ್ಯಾನೋ ತಂತ್ರಜ್ಞಾನ’ ಎನ್ನುವ ಧ್ಯೇಯದೊಂದಿಗೆ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ’ ಸಮಾವೇಶವು ಪ್ರಥಮ ಬಾರಿಗೆ ವರ್ಚುಯಲ್ ಮಾದರಿಯಲ್ಲಿ ಮಾರ್ಚ್ 7ರಿಂದ 9ರವರೆಗೆ ನಡೆಯಲಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು. 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ಕ್ಕೆ…

ಕೋವಿಡ್ ಸಂದರ್ಭದಲ್ಲಿ ಆನ್‌ಲೈನ್ ತರಗತಿಯಿಂದ ಶೇ.67ರಷ್ಟು ಬಾಲಕಿಯರು ವಂಚಿತರಾಗಿದ್ದಾರೆ: ಸೇವ್ ದಿ ಚಿಲ್ಡ್ರನ್ ಸಂಸ್ಥೆ ವರದಿ

ಬೆಂಗಳೂರು,ಮಾ,02: ಕೋವಿಡ್ ಸಂದರ್ಭದಲ್ಲಿ ಕೊಳಗೇರಿ ಪ್ರದೇಶದ ಹೆಣ್ಣು ಮಕ್ಕಳ ಕುರಿತು ಸೇವ್ ದಿ ಚಿಲ್ಡ್ರನ್ ಅಧ್ಯಯನ ನಡೆಸಿದ್ದು, ಆತಂಕಕಾರಿ ವಿಷಯಗಳನ್ನು ವರದಿಯಲ್ಲಿ ಬಹಿರಂಗ ಪಡಿಸಿದೆ. ಹೌದು, ಬುಧವಾರ ವರ್ಚುವಲ್ ಮೂಲಕ “ ದಿ ವರ್ಲ್ಡ್ ಆಫ್ ಇಂಡಿಯನ್ ಗರ್ಲ್ಸ್-ವಿಂಗ್ಸ್ 2022” ಶೀರ್ಷಿಕೆಯಲ್ಲಿ ಸೇವ್ ದಿ ಚಿಲ್ಡ್ರನ್ ಸಂಸ್ಥೆಯು ವರದಿ ಬಿಡುಗಡೆ ಮಾಡಿದೆ. ಕೋವಿಡ್ ಸಾಂಕ್ರಮಿಕದ ಕಾರಣ ಬಾಲಕರಿಗಿಂತ ಬಾಲಕರಿಯರೇ ಹೆಚ್ಚಾಗಿ ಶಾಲೆ ತೊರೆದಿದ್ದಾರೆ. ಕೊಳಚೆ ಪ್ರದೇಶ ಹಾಗೂ ಗ್ರಾಮೀಣ ಭಾಗದಲ್ಲಿ ಶೇ.67ರಷ್ಟು ಬಾಲಕಿಯರು ಆನ್‌ಲೈನ್ ತರಗತಿಯನ್ನು…

ಮಹಿಳಾ ದಿನಾಚರಣೆ ಪ್ರಯುಕ್ತ ಮಾ.8ರಂದು ವಂಡರ್‌ಲಾದಲ್ಲಿ ಮಹಿಳೆಯರಿಗೆ ಮಾತ್ರ ಪ್ರವೇಶ

ಬೆಂಗಳೂರು, ಮಾ,02:ಅಂತರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ವಂಡರ್‌ಲಾದಲ್ಲಿ ಮಾರ್ಚ್‌ 8 ರಂದು ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದ್ದು, ಒಂದು ಟಿಕೆಟ್ ಖರೀದಿಸಿದರೆ ಮತ್ತೊಬ್ಬರಿಗೆ ಉಚಿತ ಪ್ರವೇಶ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ವಂಡರ್‌ಲಾ ಆ ದಿನದಂದು ಕೇವಲ ಮಹಿಳೆಯರು ಹಾಗೂ ಯುವತಿಯರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ. 10 ವರ್ಷ ಒಳಗಿನ ಗಂಡು ಮಕ್ಕಳಿಗೆ ಪ್ರವೇಶವಿದ್ದು, ಉಳಿದಂತೆ ಯಾವ ಪುರುಷರಿಗೂ ಆ ದಿನ ಪ್ರವೇಶವಿರುವುದಿಲ್ಲ. ಇದಷ್ಟೆ ಅಲ್ಲದೆ, ವಂಡರ್‌ಲಾ ರೆಸಾರ್ಟ್‌HBನಲ್ಲಿಯೂ ಸಹ ಮಹಿಳೆಯರಿಗೆ…

ದೇಶದಲ್ಲೇ ವಿನೂತನ ಪು ನೀತ್ಉಪಗ್ರಹ ಅಭಿವೃದ್ಧಿ ಯೋಜನೆಗೆ ಚಾಲನೆ

ಬೆಂಗಳೂರು,ಫೆ,28: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲೆಗಳ ಮಕ್ಕಳೇ ಉಪಗ್ರಹ ಅಭಿವೃದ್ಧಿ ಮಾಡಲಿದ್ದು, ಇದಕ್ಕೆ ದಿವಂಗತ ನಟ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ಹೆಸರನ್ನೇ ಇಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. `ರಾಷ್ಟ್ರೀಯ ವಿಜ್ಞಾನ ದಿನ’ದ ಅಂಗವಾಗಿ ಮಲ್ಲೇಶ್ವರಂನ 18ನೇ ಅಡ್ಡರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಸ್ಟೆಪ್ಸ್) ಮತ್ತು ಭಾರತೀಯ ತಂತ್ರಜ್ಞಾನ…

ಆನ್ ಲೈನ್ ಶಿಕ್ಷಣಕ್ಕೆ ಅನುಮತಿ; ನಿಯಮಾವಳಿ ಸುಧಾರಣೆಗೆ ಸಲಹೆ

ಬೆಂಗಳೂರು,ಫೆ,21: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸೋಮವಾರ ಇಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ‘ಕೋವಿಡ್ ಹಾಗೂ ಎನ್.ಇ.ಪಿ-2020 ಹಿನ್ನೆಲೆಯಲ್ಲಿ ಆನ್ ಲೈನ್ ಡಿಜಿಟಲ್ ಕಲಿಕೆ (ಒ.ಡಿ.ಎಲ್.) ಮತ್ತು ಆನ್ ಲೈನ್ ಕಲಿಕೆ (ಆನ್ ಲೈನ್ ಲರ್ನಿಂಗ್) ಉತ್ತೇಜಿಸಲು ನಿಯಮಾವಳಿಗಳಲ್ಲಿ ಗುಣಾತ್ಮಕ ಸುಧಾರಣೆ’ ಕುರಿತ ವಿಚಾರ ಸಂಕಿರಣವನ್ನು…

ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಸಿಎಂ ಸೂಚನೆ

ಬೆಂಗಳೂರು, ಜ, 29 : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ( impact assessment) ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು ಮಾತನಾಡುತ್ತಿದ್ದರು.ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು. ಆಹಾರ ಕರ್ನಾಟಕ ನಿಯಮಿತ ಫುಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ…

ಅಕಾಶವಾಣಿಯನ್ನು ಕೇಂದ್ರ ಮುಚ್ಚುವ ಕೆಲಸ ಮಾಡುತ್ತಿದೆ; ಕೇಂದ್ರದ ವಿರುದ್ಧ ಎಚ್ ಡಿ ಕೆ ಆಕ್ರೋಶ

ಬೆಂಗಳೂರು, ಜ,28:ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕನ್ನಡದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುತ್ತಿರುವ ಕೇಂದ್ರ ಸರ್ಕಾರ ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ…

ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ

ಬೆಂಗಳೂರು,ಜ,20: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮಹದೇವಪುರದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದ ಅವರು,…

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಬೊಮ್ಮಾಯಿ

ಬೆಂಗಳೂರು,ಜ,೧೧: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯರ ಸಲಹೆ ಮೇರೆಗೆ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಸೋಮವಾರಸಿಎಂಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಬೊಮ್ಮಾಯಿ ಮಗ ಮತ್ತು ಸೊಸೆಗೂ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಸಿಎಂ…

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ಹಂಪ ನಾಗರಾಜಯ್ಯ

ಬೆಂಗಳೂರು ,ಜ,7-ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ…

1 2 3 4 5 9
error: Content is protected !!