Browsing: ಬೆಂಗಳೂರು

ಬೆಂಗಳೂರು

ಚಾಮರಾಜನಗರದಲ್ಲಿ ೨೪ ಮಂದಿ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ

ಬೆಂಗಳೂರು,ಮೇ೧೩: ಚಾಮರಾಜ ನಗರದಲ್ಲಿ ಮೇ ೨ ರ ರಾತ್ರಿ ೨೪ ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ನೀಡಿದೆ. ಮೇ ೨ ರ ಮಧ್ಯೆ ರಾತ್ರಿ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ೨೪ ಮಂದಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದರು ಆದರೆ ಅದು ಆಮ್ಲಜನಕದ ಕೊರತೆಯಿಮದಲ್ಲ ಕೇವಲ ೪ ಮಂದಿ ಮಾತ್ರ ಆಮ್ಲಜನಕ ಕೊರತೆಯಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು. ಇದು ಹಲವಾರು ವಿವಾದಕ್ಕೆ ಕಾರಣವಾಗಿತ್ತು…

ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ

ಪತ್ರಿಕಾ ಪ್ರಕಟಣೆ ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ ಬೆಂಗಳೂರು, 10: ಕೋವಿಡ್-19 2ನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವುದು ಹೆಚ್ಚಾಗುತ್ತಿದ್ದು, ಈ ಸಂಧರ್ಭದಲ್ಲಿ ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ಈ ಕಾರ್ಯ ನಿರ್ವಹಿಸಲು ಆಸಕ್ತ ಸ್ವಯಂ ಸೇವಕರನ್ನು ಅಹ್ವಾನಿಸಲಾಗಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು(Individuals) ನೋಂದಾಯಿಸಿಕೊಳ್ಳಲು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವಂತೆ ನಿರ್ದೇಶಕರು ಕೋರಿದ್ದಾರೆ.

ಟಫ್ ಲಾಕ್ಡೌನ್ : ಹೊರಬಂದವರಿಗೆ ಲಾಠಿ ರುಚಿ, ವಾಹನ ಸೀಜ್ !

ಬೆಂಗಳೂರು, 10: ಇಂದಿನಿಂದ ಮೇ 24ರವರೆಗೆ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಮೊದಲ ದಿನವಾದ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ ಲಾಠಿ ಏಟು ಬೀಸಿದ್ದಾರೆ. ಜತೆಗೆ ವಾಹನಗಳನ್ನು ವಶಪಡಿಸಿಕೊಂಡು ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನಗತ್ಯ ಸಂಚಾರ ನಡೆಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಗದಗ, ಬಾಗಲಕೋಟೆ, ಕೋಲಾರ,…

ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು,10; ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ ಮುಂತಾದ ರೇಷನ್ ಕೊಡಬೇಕು. ಪ್ರತಿ ಬಿಪಿಎಲ್ ಕುಟುಂಬಕ್ಕೆ ಮೊದಲಿಗೆ 10,000 ರೂ., ನಂತರ ತಿಂಗಳಿಗೆ 6 ಸಾವಿರ ರೂಪಾಯಿ ನೀಡಬೇಕು. ಚಾಲಕರಾಗಿ ದುಡಿಯುವ ವರ್ಗಕ್ಕೆ 10 ಸಾವಿರ ರೂಪಾಯಿ ಕೊಡಬೇಕು ಎಂದು ಸಿಎಂಗೆ ಪತ್ರ ಬರೆದು…

ಇಂದಿನಿಂದ 18-44 ವಯೋಮಾನದವರಿಗೆ ಕೋವಿಡ್ ಲಸಿಕೆ

ಬೆಂಗಳೂರು, ಮೇ 10; ಇಂದಿನಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ವಿತರಿಸಲಾಗುವುದು ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಣೆ ಮಾಡಲಾಗುವುದು 18-44 ವರ್ಷ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗಿವುದು. ಕೋವಿನ್ ಅಥವಾ…

1 7 8 9
error: Content is protected !!