ಜಿಲ್ಲೆ
ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯ ಲುಅಶೋಕ ಆಗ್ರಹ*
ಬೆಂಗಳೂರು, ಮೇ 28-ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್ ವಿಧಿಸಿದೆ. ಕೆಂಪೇಗೌಡರು ನಾಡು…