ಜಿಲ್ಲೆ
ಮೈಸೂರು ದಸರಾ ಉತ್ಸವ; ಗಜ ಪಯಣಕ್ಕೆ ಚಾಲನೆ
ಮೈಸೂರು ಪ್ರತಿನಿಧಿ: ಬಾಲು .ಡಿ. ಮೈಸೂರು, ಸೆ, ೧೩:ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಮೊದಲ ಕಾರ್ಯಕ್ರಮವಾದ ಗಜಪಯಣಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನ ಹೊಸಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಡಿನಿಂದ ನಾಡಿಗೆ ಹೊರಟ ಗಜಪಡೆ ಸಾರಥಿ ಅಭಿಮನ್ಯು ನೇತೃತ್ವದ ಆನೆಗಳಿಗೆ ಪೂಜೆ ಸಲ್ಲಿಸಲಾಯಿತು. ನಾಗರಹೊಳೆ ವ್ಯಾಪ್ತಿಯ ಹುಣಸೂರಿನ ವೀರನಹೊಸಹಳ್ಳಿ ಅರಣ್ಯ ಪ್ರದೇಶದಲ್ಲಿ ದಸರಾ ಆನೆಗಳಿಗೆ ಸ್ವಾಗತ ನೀಡಿದ ಅರಣ್ಯಾಧಿಕಾರಿಗಳು, ದಸರಾಗೆ…