ಜಿಲ್ಲೆ
ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ
ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…