ಜಿಲ್ಲೆ
ಮಂಡ್ಯ ದಲ್ಲಿ ಕೋವಿಡ್ ಸೋಂಕಿತರ ಜೊತೆ ಸಂವಾದ ನಡೆಸಿದ ಡಿಸಿಎಂ
ಮಂಡ್ಯಮೇ,20: ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಗುರುವಾರ ಮಂಡ್ಯ ಜಿಲ್ಲೆಯಲ್ಲಿ ಬೆಳಗಿನಿಂದ ಮಧ್ಯಾಹ್ನದವರೆಗೆ ಕೋವಿಡ್ ವ್ಯವಸ್ಥೆ ವೀಕ್ಷಿಸಲು ಬಿರುಸಿನ ಪ್ರವಾಸ ನಡೆಸಿದರಲ್ಲದೆ ಮದ್ದೂರು, ಬೂದನೂರು ಹಾಗೂ ಮಂಡ್ಯ ಆಸ್ಪತ್ರೆಗಳಿಗೆ ಭೇಟಿ ವ್ಯಾಪಕ ಪರಿಶೀಲನೆ ನಡೆಸಿದರು. ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರ ವಾರ್ಡ್ಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದರಲ್ಲದೆ, ಸೋಂಕಿತರ ಯೋಗ ಕ್ಷೇಮ ವಿಚಾರಿಸಿ ಅವರಿಗೆ ಸಿಗುತ್ತಿರುವ ಚಿಕಿತ್ಸೆ-ಆರೈಕೆಯ ಮಾಹಿತಿ ಪಡೆದುಕೊಂಡರು. ವಾರ್ಡ್ನಲ್ಲಿ ಆಮ್ಲಜನಕದ ವ್ಯವಸ್ಥೆ,…



















