Browsing: ಜಿಲ್ಲೆ

ಜಿಲ್ಲೆ

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯ ಲುಅಶೋಕ ಆಗ್ರಹ*

ಬೆಂಗಳೂರು, ಮೇ 28-ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು…

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ

ಬೆಂಗಳೂರು ಮೇ 27- ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು. ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ…

ನನ್ನ ಕೊನೆ ಉಸಿರಿರುವವರೆಗೂ ಬರೆಯುತ್ತೇನೆ; ಡಾ.ಬಿ.ಎಲ್.ವೇಣು

ಚಿತ್ರದುರ್ಗ,ಮೇ,27- ನನ್ನ ಬರಹ ಪ್ರಕಟಗೊಳ್ಳುತ್ತಿಲ್ಲ, ಎಲ್ಲಿಯೂ ಕಾಣುತ್ತಿಲ್ಲವೆಂದರೇ ನನ್ನ ಉಸಿರು ನಿಂತಿದೆ ಎಂದೇ ಜನ ಭಾವಿಸಿಕೊಳ್ಳಬೇಕು ಎಂದು ಸಾಹಿತಿ ಬಿ.ಎಲ್.ವೇಣು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಸೇರಿಕಸಾಪ ವತಿಯಿಂದ ಮಂಗಳವಾರ ಆಯೋಜಿಸಿದ್ದ ತಮ್ಮ 80ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಬರವಣಿಗೆ ನನ್ನ ಜೀವಾಳ, ನಾನು ಬರೆಯುತ್ತಿದ್ದರೆ ನಾನು ಚನ್ನಾಗಿ ಇರುತ್ತೇನೆ, ಇಲ್ಲವಾದರೆ ಅನಾರೋಗ್ಯದಿಂದ ಬಳಲುತ್ತೇನೆ ಎಂದರು. ಜನತೆ ನನ್ನನ್ನು ಬಹಳಷ್ಟು ಪ್ರೀತಿಯಿಂದ ಕಾಣುತ್ತಾರೆ. ಸಾಹಿತ್ಯ ಸಮ್ಮೇಳನದಲ್ಲಿ ನನ್ನನು ಅಧ್ಯಕ್ಷನನ್ನಾಗಿಸಿದ್ದಾರೆ. ಆದರೆ, ನಾನು ಸಾಸಿವೆ ಕಾಳಿನಷ್ಟು…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ.ಪ. ಪಂ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಂದ ಅನರ್ದಿಷ್ಟ ಧರಣಿ ಸತ್ಯಾಗ್ರ

ನಾಯಕನಹಟ್ಟಿ ,ಮೇ,27- ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಅನರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಬಿಲ್ ಕಲೆಕ್ಟರ್ ಸಂದೀಪ್ ಮಾತನಾಡಿ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಓ ಪಿ ಎಸ್ ಜಾರಿಗೊಳಿಸಬೇಕು. ಅರೆ ಸರ್ಕಾರಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು, ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ಕೆ ಜೆ ಡಿ, ವಿಮಾ ಸೌಲಭ್ಯ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳು ನಮಗೆ ದೊರೆಯುವಂತಾಗಬೇಕು.…

ಕನ್ನಡ ಅಂತಃಸತ್ವದ ಅನಾವರಣಕ್ಕೆಗಮಕ ಕಲೆ ಸಹಕಾರಿ

ಚಿತ್ರದುರ್ಗ,ಮೇ, 26–ಚಿತ್ರದುರ್ಗದ ಗಮಕ ಕಲಾಭಿಮಾನಿಗಳ ಸಂಘವು ಎಷ್ಟೇ ಅಡೆ ತಡೆಗಳು ಬಂದರೂ ಕಷ್ಟ ಕಾರ್ಪಣ್ಯಗಳು ಉಂಟಾದರೂ ನಿರಂತರವಾಗಿ ಗಮಕ ಕಲೆಯ ಪ್ರಚಾರ ಹಾಗೂ ಪ್ರಸಾರಕ್ಕಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸ್ಥಳೀಯ ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷಕೆ.ಎಂ. ವೀರೇಶ್ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗಮಕ ಕಲಾಭಿಮಾನಿಗಳ ಸಂಘವು ಜೆ ಸಿ ಆರ್ ಗಣಪತಿ ದೇವಾಲಯದಲ್ಲಿ ಏರ್ಪಡಿಸಿದ್ದ ಸಂಘದ ನಲವತ್ತನೇ ವಾರ್ಷಿಕೋತ್ಸವದ ನೆನಪಿಗಾಗಿ  22ನೇ ಮಾಸಿಕ ಗಮಕ ವಾಚನ ವ್ಯಾಖ್ಯಾನದಲ್ಲಿ…

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಲಕ್ಷ್ಮೀ ಹೆಬ್ಬಾಳಕರ್

* *ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ಚಿಕ್ಕಮಗಳೂರು,ಮೇ,24-ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮಾಜದ ಮಗಳಾಗಿ ಕಾರ್ಯಕ್ರಮಕ್ಕೆ ಬಂದಿರುವೆ. ಬೇರೆ…

ರಾಜಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಮೇ,21-ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ…

ಬೆಂಗಳೂರು ಮಳೆ ಅವಾಂತರ ಪ್ರದೇಶದಲ್ಲಿ ಪರಿಹಾರ ಕಾರ್ಯನಡೆಯುತ್ತಿದೆ- ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ,19-ನಗರದಲ್ಲಿ ಸುರಿದಿರುವ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಬಂಧಿಸಿದಂತೆ ಕಾಳಜಿ ವಹಿಸಿದ್ದು ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು ಮಳೆ ಅವಾಂತರದ ಪ್ರದೇಶದಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಳೆ ಅವಾಂತರವಾಗಿದ್ದರೂ, ಸಾಧನಾ ಸಮಾವೇಶಕ್ಕಾಗಿ ಹೊಸಪೇಟೆಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಸಂಭವಿಸಿರುವ ಅವಾಂತರದ ಬಗ್ಗೆ ಸಂಬಂಧಿತ ಅಧಿಕಾರಗಳ ಜೊತೆ ಸಂಪರ್ಕದಲ್ಲಿದ್ದೇನೆ. ನಿಕಟ ನಿಗಾ ವಹಿಸಿದ್ದೇನೆ…

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು- ಅಶೋಕ್‌ ಟೀಕೆ

ಬೆಂಗಳೂರು,ಮೇ,19-  ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಭಾನುವಾರ ರಾತ್ರಿ ನಗರದಲ್ಲಿ 103 ರಿಂದ 130 ಮಿಲಿ ಮೀಟರ್ ವರೆಗೆ ಮಳೆ ಬಿದ್ದು ಇಡೀ ನಗರದಲ್ಲಿ ಅವಾಂತರ ಸೃಷ್ಟಿಯಾಗಿದ್ದು, ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಂಡು ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು…

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ

ಬೆಂಗಳೂರು,ಮೇ 15- ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. *ಮಳೆ ಅನಾಹುತಕ್ಕೆ…

ಆನೆ ಸೆರೆ, ಪಳಗಿಸುವುದರಲ್ಲಿ ರಾಜ್ಯ ಮಂಚೂಣಿ- ಈಶ್ವರ ಬಿ ಖಂಡ್ರೆ

ಬಿಕ್ಕೋಡು, (ಬೇಲೂರು), ಮೇ 13-ಆನೆ ಸೆರೆ ಹಿಡಿಯುವುದು, ಪಳಗಿಸುವುದರಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮುಂಚೂಣಿಯಲ್ಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತಾತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೇಲೂರು ತಾಲೂಕು ಬಿಕ್ಕೋಡಿನಲ್ಲಿಂದು ಆನೆ ಕಾರ್ಯಪಡೆಯ ಕಚೇರಿ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತಂದಿರುವ ಹಿನ್ನೆಲೆಯಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಆನೆಗಳ ಸಂಖ್ಯೆಯಲ್ಲಿ ರಾಜ್ಯ ನಂ.1 ಆಗಿದ್ದು, 6395 ಆನೆಗಳಿವೆ. ಹೀಗಾಗಿ ಮಾನವ-ವನ್ಯಜೀವಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ…

ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ದಿಗೆ ರೂ 150 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ದ:  ಪ್ರಿಯಾಂಕ್ ಖರ್ಗೆ

ಕಲಬುರಯ,ಮೇ,13-ಚಿತ್ತಾಪುರ ಕ್ಷೇತ್ರದ ಗ್ರಾಮೀಣ ಭಾಗದ ಹಳ್ಳಿಗಳ ಅಭಿವೃದ್ದಿಗಾಗಿ ರೂ 150 ಕೋಟಿ ವೆಚ್ಚದ ಕ್ರಿಯಾಯೋಜನೆ ಈಗಾಗಲೇ ಸಿದ್ದವಾಗಿದೆ. ಇದರ ಅಡಿಯಲ್ಲಿ 87 ಹಳ್ಳಿಗಳಿಗೆ ಅಗತ್ಯ ಅನುದಾನ ಲಭ್ಯವಾಗಲಿದ್ದು ಮುಂದಿನ ಹದಿನೈದು ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ‌ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಅಮೃತ್ ಯೋಜನೆಯಡಿಯಲ್ಲಿ ಚಿತ್ತಾಪುರ ಹಾಗೂ ವಾಡಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಅಡಿಗಲ್ಲು, ಚಿತ್ತಾಪುರ ಪಟ್ಟಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣ…

ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 09-ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಸುಮಾರು 3 ಸಾವಿರ ಕೊಳವೆ…

ಒತ್ತುವರಿ ಜಾಗ ಪರಶೀಲನೆ ಮಾಡಿದ ತಹಶಿಲ್ದಾರ್

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಮೇ,07-  ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಖಾಸಗಿ ಲೇಔಟ್ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಕ್ಕೆ ತಾಲ್ಲೂಕು ದಂಢಾಧಿಕಾರಿ ರೆಹಾನ್ ಪಾಷ ಹಾಗೂ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಕೀಮ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅರಬಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ೪೫ರ ರಸ್ತೆಯ ಮದ್ಯದಿಂದ ೨೮.೫೦ ಮೀಟರ್‌ಗಳಷ್ಟು ಜಾಗವನ್ನು ಬಿಟ್ಟು ಖಾಸಗಿ ಲೇಔಟ್ ನಿರ್ಮಾಣ ಮಾಡಬೇಕು ಎಂಬ ನಿಯಮವಿದ್ದರೂ ಕೂಡ ಕಾನೂನು ಬಾಹಿರವಾಗಿ ಖಾಸಗಿ ಲೇಔಟ್ ನವರು ೧೪ ಮೀಟರ್‌ಗಳಷ್ಟು ಒತ್ತುವರಿ ಮಾಡಿದ್ದಾರೆ…

ಭೋವಿಗಳ ಜಾತಿಗಣತಿ ಕೈಪಿಡಿಯಲ್ಲಿ ಅನ್ಯಾಯ – ಸರ್ಕಾರ ಸ್ಪಂದಿಸದಿದ್ದರೆ ಕೋರ್ಟ್ ಮೊರೆ : ಇಮ್ಮಡಿ ಶ್ರೀ

ಚಿತ್ರದುರ್ಗ,ಮೇ,01- ಭೋವಿ ಸಮುದಾಯ ಶ್ರಮ ಹಾಗೂ ಕುಲಕಸುಬುಗಳನ್ನು ಬದುಕನ್ನಾಗಿಸಿಕೊಂಡಿದೆ. ಆದರೆ, ರಾಜ್ಯದಲ್ಲಿ ಒಳಮೀಸಲಾತಿ ಜಾರಿಗಾಗಿ ಜಾತಿಸಮೀಕ್ಷೆ ಕಾರ್ಯ ವೇಳೆ ಕುಲಕಸುಬು ನೋಂದಣಿಗೆ ಅವಕಾಶ ಇಲ್ಲದ ರೀತಿ ಕೈಪಿಡಿ ಸಿದ್ಧಪಡಿಸಿರುವುದು ಸರಿಯಲ್ಲ ಎಂದು ಭೋವಿ ಮಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದ್ದಾರೆ. ಮಠದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಾತಿಗಣತಿ ಕಾರ್ಯ ಸ್ವಾಗತರ್ಹ. ಒಳಮೀಸಲಾತಿ ಜಾರಿ ಪರ ನಾವಿದ್ದೇವೆ. ಆದರೆ, ನ್ಯಾಯಯುತ, ಪಾರದರ್ಶಕವಾಗಿ ಆಗಬೇಕು. ಆದರೆ, ಯಾವುದೋ ಒಂದು ಸಮುದಾಯದ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಕೈಪಿಡಿ ಸಿದ್ಧಪಡಿಸಿದಂತೆ…

ನಾಯಕನಹಟ್ಟಿ;1,45 ಲಕ್ಷ ರೂ ಕ್ರಿಯಾ ಯೋಜನೆ ಗೆ ಅನುಮೋದನೆ

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ26- :2025-26 ನೇ ಸಾಲಿನ ಸರ್ಕಾರದಿಂದ ಬಿಡುಗಡೆಯಾಗುವ 145:00 ಲಕ್ಷಗಳ ಅನುದಾನದಲ್ಲಿ ವಿವಿಧ ಯೋಜನೆಗಳ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿ ಅನುಮೋದಿಸಲಾಯಿತು. ನಾಯಕನಹಟ್ಟಿ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025-26 ನೇ ಸಾಲಿನ ಎಸ್‌,ಎಫ್‌,ಸಿ, ಮುಕ್ತ ನಿಧಿ ಯೋಜನೆಯಲ್ಲಿ ಬಂಡವಾಳ ಆಸ್ತಿಗಳ ಸೃಜನಗಾಗಿ 6:00 ಲಕ್ಷಗಳು, ಎಸ್, ಸಿ,ಎಫ್, ಸಿ ಯೋಜನೆಗೆ 9:00 ಲಕ್ಷಗಳು ಟಿ ಎಸ್ ಪಿ ಯೋಜನೆಗೆ 4:00…

ಕಣ್ಣಿಗಳ ತೊಂದರೆ ನಿವಾರಣೆಗೆ ಮದರ್ ತೆರಿಸಾ ಸಂಸ್ಥೆ ಸದಾ ಮುಂದು

ವರದಿ :ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ,26- ಮಾನವನ ದೇಹದಲ್ಲಿ ಯಾವುದಾದರೂ ಒಂದು ಅಂಗ ಕಡಿಮೆಯಾದರೂ ಜೀವಿಸಬಹುದು ಆದರೆ ಮನುಷ್ಯನಿಗೆ ಕಣ್ಣುಗಳು ಇಲ್ಲ ಎಂದರೆ ಜೀವಿಸುವುದು ಕಷ್ಟ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರು ಅಭಿಪ್ರಾಯಸಿದರು ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮದರ್ ತೆರೇಸಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ ) ನಾಯಕನಹಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಸೇನೆ, ಸಂಘಟನೆಗಳ ವತಿಯಿಂದ ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ…

ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್

ಬೆಂಗಳೂರು, ಏ, 24- ಸಾರ್ವಜನಿಕರಿಮದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು. ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ…

ನಾಗಮಂಗಲದ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ: ಕ್ರೆಡಿಟ್ ತಗೊಂಡಿದ್ದು ಬೇರೆ ಯಾರೋ: ಸಿಎಂ

ಮಂಡ್ಯ (ನಾಗಮಂಗಲ) ಏ 22-ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ.…

ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ

*ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ* ಚಿತ್ರದುರ್ಗ,ಏ,21-ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆಂದು ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಹೇಳಿದರು. ಮಠದ ಕುರುಬರಹಟ್ಟಿ ಗ್ರಾಮದ ಶ್ರೀ ದುರುಗಮ್ಮ ದೇವಸ್ಥಾನದ ಬಳಿ ವಿಮುಕ್ತಿ ವಿದ್ಯಾ ಸಂಸ್ಥೆ ,ಧಮ್ಮ ಕೇಂದ್ರ ಮತ್ತು ಶಾಂತಿ ಮತ್ತು ಸೌಹಾರ್ದ ವೇದಿಕೆವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಮತ್ತು ಸೌಹಾರ್ದ ಯಾತ್ರೆ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ,ಕಾರ್ಯಕ್ರಮದಲ್ಲಿ…

error: Content is protected !!