ಜಿಲ್ಲೆ
ಬಂಡವಾಳ ಆಕರ್ಷಿಸಲು ಬೆಂಗಳೂರಿನಲ್ಲಿ ಮೊರಾಕ್ಕೊ ರೋಡ್-ಶೋ
ಬೆಂಗಳೂರು,ನ,25: ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವರು ಮಾತನಾಡಿದರು. `ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ…



















