ರಾಜ್ಯ
ಕೊರೊನಾ ತಡೆಗೆ ರಾಜ್ಯದ ಜನರಲ್ಲಿ ಸಿಎಂ ಮನವಿ
ಬೆಂಗಳೂರು,10: ಕೊರೋನ ತಡೆಗಾಗಿ ರಾಜ್ಯದಲ್ಲಿ ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಅನುಸರಿಸಿ, ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ರಾಜ್ಯದ ಜನರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ.…