ರಾಜ್ಯ
ಕನ್ನಡಪರ ಸಂಘಟನೆ ಗಳೊಂದಿಗೆ ಮುಖ್ಯಮಂತ್ರಿ ಚರ್ಚೆ: ಬಂದ್ ಕರೆ ವಾಪಸ್ ಪಡೆದ ಸಂಘಟನೆಗಳು
ಬೆಂಗಳೂರು, ಡಿ, 30:ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಅವರೊಂದಿಗೆ ಚರ್ಚಿಸಲಾಗಿದ್ದು, ಕನ್ನಡಪರ ಸಂಘಟನೆಗಳು ಬಂದ್ ಕರೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರರಾದ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, ಸಾ.ರಾ.ಗೋವಿಂದು, ಕೆ.ಆರ್. ಕುಮಾರ್. ಶಿವರಾಮೇಗೌಡ್ರು ಅವರುಗಳ ನೇತೃತ್ವದ…