ರಾಜ್ಯ
ಮೇಕೆದಾಟು ಯೋಜನಾ ವರದಿ ಕೇಂದ್ರಕ್ಕೆ ಸಲ್ಲಿಕೆ:ಕಾರಜೋಳ
ಬೆಳಗಾವಿ,ಡಿ,15: ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ, 67.16 ಟಿ.ಎಂ.ಸಿ ನೀರನ್ನು ಶೇಖರಿಸಲು ರೂ.9000.00 ಕೋಟಿ ಮೊತ್ತದ ಡಿ.ಪಿ.ಆರ್ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅದು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಇಂದು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಸದಸ್ಯರಾದ ಡಾ|| ತೇಜಸ್ವಿನಿಗೌಡ ಪ್ರಶ್ನೆಗೆ…