Browsing: ರಾಜ್ಯ

ರಾಜ್ಯ

ಉನ್ನತ ಶಿಕ್ಷಣಕ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ

ಬೆಂಗಳೂರು,ನ,25: ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕುರಿತು ಉಚಿತವಾಗಿ ಮಾರ್ಗದರ್ಶನ ಹಾಗೂ ಉನ್ನತ ಮಟ್ಟದ ಕಾಲೇಜುಗಳಿಗೆ ದಾಖಲಾತಿಗೆ ಕೌನ್ಸಲಿಂಗ್ ನೀಡಲು ಅಮೆರಿಕಾ ಮೂಲದ ನೆಸ್ಟ್‌ಲಿಂಗ್ ಸಂಸ್ಥೆ ತನ್ನ ಮೊದಲ ಕೌನ್ಸಿಲಿಂಗ್ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ.ಇದಲ್ಲದೆ ಈ ಕೇಂದ್ರಲ್ಲಿ ಕೌನ್ಸಲಿಂಗ್ ಪಡೆದು ವಿದೇಶಕ್ಕೆಉನ್ನತ ಶಿಕ್ಷಣಕ್ಕೆ ಕೌನ್ಸಲಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ* ಓದಲು ತೆರಳುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ಸ್ಕಾಲರ್‌ಶಿಪ್‌ ನೀಡುವುದಾಗಿಯೂ ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ…

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ‌ಘೋಷಣೆ

ಬೆಂಗಳೂರು,ನ,16:  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ  ಇಂದು ನಡದ ಪನೀತ್ ನಮನ ಕಾರ್ಯಕ್ರರಮದಲ್ಲಿ ಘೋಷಿಸಿದರು ಮುಂದುವರೆದು ಮಾತನಾಡಿದ ಬೊಮ್ಮಾಯಿ   ಹಾಗೆಯೇ ಡಾ.ರಾಜ್ ಕುಮಾರ್ ಸ್ಮಾರಕದಂತೆಯೇ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು. ನಾನು ಬಾಲ್ಯದಿಂದ ಪುನೀತ್ ರಾಜ್ ಕುಮಾರ್  ನೋಡಿದ್ದೇನೆ. ಅವರು ನಮಗೆ ಬಹಳ ಆತ್ಮೀಯರಾಗಿದ್ದರು.  ಬಾಲ ನಟನಿದ್ದಾಗಲೇ ರಾಷ್ಟ್ರಪ್ರಶಸ್ತಿ ಪಡೆದಿದ್ದರು.  ಇಂತಹ ಕಾರ್ಯಕ್ರಮ ಮಾಡುತ್ತೇವೆ ಎಂದುಕೊಂಡಿರಲಿಲ್ಲ.…

ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರಗಳ ಮಂಜೂರು

ಬೆಂಗಳೂರು,ನ,15: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ. ಲೋಕಾಪೂರದಲ್ಲಿ 400 ಕಿ.ವ್ಯಾ ಸಾಮಾರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣವಾಗಲಿದ್ದು, ಹೆಬ್ಬಾಳ, ಮುಗಳಖೋಡ, ಮಾಚಕನೂರು, ಮಲ್ಲಾಪೂರ ಮತ್ತು ಮಂಟೂರು ಕ್ರಾಸ್ಗಳಲ್ಲಿ 110 ಕಿ.ವ್ಯಾ ಸಾಮಾರ್ಥ್ಯದ 5 ವಿದ್ಯುತ್ ವಿತರಣಾ ಕೇಂದ್ರಗಳು ಒಟ್ಟು 60.25 ಕೋಟಿ ರೂ.…

ನದಿಗಳ ಜೋಡಣೆ: ರಾಜ್ಯಗಳಿಗೆ ನೀರು ಹಂಚಿಕೆ ನಂತರ ಡಿಪಿಆರ್- ರಾಜ್ಯದ ಮನವಿ ಪರಿಗಣಿಸಲು ಅಮಿತ್ ಷಾ ಸೂಚನೆ

ಬೆಂಗಳೂರು, ನ,15:ಗೋದಾವರಿ, ಕೃಷ್ಣಾ, ಕಾವೇರಿ ಮತ್ತು ಪಾಲಾರ್ ನದಿ ಜೋಡಣೆ ಡಿಪಿಆರ್ ಸಿದ್ಧ ಪಡಿಸುವ ಮುನ್ನ ರಾಜ್ಯಗಳ ನೀರಿನ ಹಂಚಿಕೆ ಆಗಬೇಕೆಂದು ರಾಜ್ಯ ಸಲ್ಲಿಸಿರುವ ಅಹವಾಲು ಪರಿಗಣಿಸಿ, ಮುಂದುವರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ 14ರಂದು ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಭಾಗವಹಿಸಿ, ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಈ ಮಾಹಿತಿ ನೀಡಿದರು.…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಬೆಂಗಳೂರು,ನ,೦೯: ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ನಿಮಗಳ ಅನುಸಾರ ಕವಿತೆಗಳನ್ನು ಕಳುಹಿಸಬಹುದು. ಹಸ್ತಪ್ರತಿ ಕಳಿಸಲು ನಿಯಮಗಳು ಈ ಕೆಳಗಿನಂತಿವೆ. ೧. ಮೂವತ್ತಕ್ಕಿಂತಲೂ ಹೆಚ್ಚಿನ ಸ್ವರಚಿತ ಕನ್ನಡ ಕವಿತೆಗಳನ್ನು ಹಸ್ತಪ್ರತಿಯು ಒಳಗೊಂಡಿರಬೇಕು. ೨. ಅನುವಾದಿತ, ಹನಿಗವನ ಮತ್ತು ಚುಟುಕು ಕವಿತೆಗಳ ಹಸ್ತಪ್ರತಿಗಳು ಬೇಡ. ೩. ಪ್ರವೇಶವನ್ನು ಕಳಿಸುವ ಯುವಕವಿಗಳು ನಲವತ್ತೈದು ವರ್ಷದೊಳಗಿನವರಾಗಿರಬೇಕು. ೪ ಈ ಪ್ರಶಸ್ತಿಯು ೫,೦೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ೫.…

ರಾಜ್ಯದ ೨೫ ವಿಧಾನರಪಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು,ನ,೦೯:ಕರ್ನಾಟಕ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ ೨೫ ಸ್ಥಾನಗಳಿಗೆ ಡಿಸೆಂಬರ್ ೧೦ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ ೧೪ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ ೧೬ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ ೨೩ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ ೨೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ ೨೬ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ ೧೦ ಶುಕ್ರವಾರ ಬೆಳಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ. ಬೆಂಗಳೂರು ನಗರ,…

ಅಪ್ಪು ಅನ್ನ ಸಂತರ್ಪಣೆಗೆ ಹರಿದು ಬಂದ ಜನಸಾಗರ

ಬೆಂಗಳೂರು,ನ,೦9: ನಾಡಿನಾದ್ಯಂತ ಮತ್ತೆ ಹರಿದು ಬಂದು ಒಂದೆಡೆ ಸೇರಿದ ಅಭಿಮಾನದ ಹೊಳೆ. ಮೇರೆ ಮೀರಿದ ಜಯಘೋಷ, ಅಭಿಮಾನದ ಹರಿವಿಗೆ ಸಾವಿರಾರು ನದಿಗಳು… ಎಂಬ ಹೊಸ ಭಾವನಾತ್ಮಕ ರೂಪಕಕ್ಕೆ ಪುನೀತ್ ಪುಣ್ಯಸ್ಮರಣೆಯ ೧೨ನೇ ದಿನ ಸಾಕ್ಷಿಯಾಯಿತು ಪುಣ್ಯಸ್ಮರಣೆಯ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಗರದ ಅರಮನೆ ಮೈದಾನದ ‘ತ್ರಿಪುರವಾಸಿನಿ’ ಅಂಗಣದಲ್ಲಿ ನಡೆಯಿತು. .ಪುನೀತ್ ಪತ್ನಿ ಅಶ್ವಿನಿ, ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದರು. ಬಳಿಕ ಶಿವರಾಜ್‌ಕುಮಾರ್ ರಕ್ತದಾನ ಮಾಡಿದರು. ಅನ್ನಸಂತರ್ಪಣೆಗೆ ಚಾಲನೆ ನೀಡಿದ ಬಳಿಕ ಭಾವುಕರಾದ…

ಪತ್ರಕರ್ತರ ರಾಜ್ಯ ಸಮ್ಮೇಳನ: ಸಿಎಂರಿಂದ ಲಾಂಚನ ಬಿಡುಗಡೆ

ಬೆಂಗಳೂರು, ನ,08: ಇದೇ ನ. 27 ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಬಿಡುಗಡೆಗೊಳಿಸಿದರು. ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿ ಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು. ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು…

2 ತಿಂಗಳಲ್ಲಿ ಪೂರ್ಣಪ್ರಮಾಣದ ಐಬಿಎಂ ಮೈಸೂರು ಕ್ಯಾಂಪಸ್ ಆರಂಭ: ಅಶ್ವತ್ಥನಾರಾಯಣ

ಬೆಂಗಳೂರು,ನ,08: ಸಾಫ್ಟ್ ವೇರ್ ಎಂಜಿನಿಯರಿಂಗ್, ವಿನ್ಯಾಸ ಮತ್ತು ಅನಲಿಟಿಕ್ಸ್ ಗಳಲ್ಲಿ ಪರಿಣತಿ ಹೊಂದಿರುವ ಐಬಿಎಂ ಸಮೂಹದ `ಕ್ಲೈಯಂಟ್ ಇನ್ನೋವೇಶನ್ ಸೆಂಟರ್’ಗೆ (ಸಿಐಸಿ) ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ವಿಕಾಸಸೌಧದಲ್ಲಿ ಈ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಈ ಅತ್ಯಾಧುನಿಕ ಕೇಂದ್ರವು ಮೈಸೂರಿನಿಂದ ತನ್ನ ಚಟುವಟಿಕೆಗಳನ್ನು ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹವು ಮೈಸೂರಿನಲ್ಲೂ ತನ್ನ ಕಚೇರಿಯನ್ನು ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ…

ಮುಂಬೈ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ನಾಮಕರಣಕ್ಕೆ ಒಪ್ಪಿಗೆ

ಬೆಂಗಳೂರು,ನ,08:_ಮಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ವೆಂದಿ ನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ  ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು…

ಬೆಂಗಳೂರಿನಲ್ಲಿ ಆಟೋದರ ಏರಿಕೆ

ಬೆಂಗಳೂರು,ನ,08: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇತ್ತು. ಇದನ್ನು 15 ರುಪಾಯಿಗೆ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ…

ಇಂದಿನಿಂದ ಹೋಟೆಲ್ ದರಗಳ ಹೆಚ್ಚಳ

ಬೆಂಗಳೂರು ,08: ದಿನಕಳೆದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ಸಾಕ್ಷಿ ಎಂಬಂತೆ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಬೆನ್ನಲ್ಲೆ ಇಂದಿನಿಂದ ನಗರದಲ್ಲಿ ಹೋಟೆಲ್‌ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10% ಹೆಚ್ಚಳ ಮಾಡುವ ಬಗ್ಗೆ ಅಸೋಸಿಯೇಷನ್ ನಿರ್ಧರಿಸಿದೆ. ಈ ಸಂಬಂದ ಕೆಲ ದಿನಗಳಿಂದ ಚಿಂದನೆ ನಡೆಯುತ್ತಿದೆ. ಮಹೋಲೆಟಲ್ ಮಾಲೀಕರ ಸಂಗದ ಜೊತೆ ಸಹಲವಾರು ಸುತ್ತಿನ ಸಬೆಗಳು…

ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್

ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…

ಭಾಷೆ ಸದೃವಾದರೆ ರಾಜ್ಯ ಶಕ್ತಿಶಾಲಿ-ಸಿಎಂ ಬೊಮ್ಮಾಯಿ

ಬೆಂಗಳೂರು,ನ೦೧: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ…

ಪೇಜಾವರರ ಹೇಳಿಕೆ ಹಾಸ್ಯಾಸ್ಪದ :ಡಾ. ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಅ,26:ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸರ್ಕಾರವು ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸುತ್ತಿದ್ದು, ಅರ್ಚಕವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಪ್ರಯತ್ನವಾಗಿದ್ದು, ಸರ್ಕಾರವು ಅರ್ಚಕ ಉದ್ಯೋಗವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮೀಸಲಿಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಭಾನುವಾರ ಮೈಸೂರಿನ ವಿಪ್ರ ಸಮ್ಮೇಳನದಲ್ಲಿ ಹೇಳಿರುವುದಾಗಿ ವರದಿಯಾಗಿದ್ದು ಅವರ ಈ ಹೇಳಿಕೆ ಹಾಸ್ಯಾಸ್ಪದ ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ. ಇದು ಶ್ರೇಣೀಕೃತ ವರ್ಣ ವ್ಯವಸ್ಥೆಯನ್ನು ವಿಸ್ತರಿಸುವ, ಪುರೋಹಿತಶಾಹಿತನವನ್ನು ಪುನಃ ಪ್ರತಿಷ್ಠಾಪಿಸುವ ಹುನ್ನಾರ. ಈ ಮೂಲಕ ವೇದಾಧ್ಯಯನವನ್ನು…

ನಾಳೆಯಿಂದ 1ರಿಂದ 5 ರವರೆಗೆ ಶಾಲೆಗಳು ಆರಂಭ

ಬೆಂಗಳೂರು,ಅ,24:1ರಿಂದ 5 ನೇ ತರಗತಿಗಳು ನಾಳೆಯಿಂದ ರಾಜ್ಯಾದ್ಯಂತ ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು,ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ ಎಂದು ‌ ಸ್ಪಷ್ಟಪಡಿಸಲಾಗಿದೆ.ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ 2…

ಮೂರು ಗ್ರಾಮಗಳ ಜನರಿಗೆ ಹಕ್ಕು ಪತ್ರ ನೀಡಿ ಪುನರ್ ವಸತಿ ಕಲ್ಪಿಸಲಾಗಿದೆ: ಶಶಿಕಲಾ ಜೊಲ್ಲೆ

ಸಿಂಧಗಿ,ಅ,23: ಸಿಂಧಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾರಾಪುರ, ಬ್ಯಾಡಗಿಹಾಳ, ತಾವರಖೆಡ ಗ್ರಾಮಗಳ ಜನರ ದಶಕಗಳ ಬೇಡಿಕೆಯಾಗಿದ್ದ ಪುನರ್ವಸತಿ ಮತ್ತು ಹಕ್ಕು ಪತ್ರ ನೀಡಿ ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ಮುಜರಾಯಿ, ವಕ್ಫ್.ಮತ್ತು ಹಜ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ. ಪಕ್ಷದ ಅಭ್ಯರ್ಥಿ ರಮೇಶ ಬೂಸನೂರು ಪರವಾಗಿ ಮತಯಾಚನೆ ಮಾಡಿದ ಅವರು, ಭೀಮಾ ಏತನೀರಾವರಿಯಿಂದ ತಾರಾಪುರ, ಬ್ಯಾಡಗಿಹಾಳ ಹಾಗೂ ತಾವರಖೇಡ ಗ್ರಾಮಗಳು ಮುಳುಗಡೆಯಾಗಿ ಪುನರ್ವಸತಿಗಾಗಿ ಕಳೆದ ಹತ್ತು ವರ್ಷಗಳಿಂದ ಹೋರಾಟ…

ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ.ಗಳ ಅನುದಾನ- ಸಿ.ಎಂ

ಹುಬ್ಬಳ್ಳಿ ಅ,23:ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತುತ ವರ್ಷದಲ್ಲಿ 50 ಕೋಟಿ ರೂ.ಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಇಂದು ಕಿತ್ತೂರು ಚನ್ನಮ್ಮ ವೃತ್ತದಲ್ಲಿ ರಾಣಿ ಚನ್ನಮ್ಮನ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತಿದ್ದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನು 2011 ರಲ್ಲಿ 8 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ ಪ್ರಾರಂಭಿಸಲಾಯಿತು. ಕಿತ್ತೂರು ಚನ್ನಮ್ಮ ಪ್ರತಿಮೆಯನ್ನು ಬೆಳಗಾವಿಯ ನಗರದ ಕೇಂದ್ರ ಭಾಗದಲ್ಲಿ ಸ್ಥಾಪಿಸುವಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ…

1 12 13 14 15 16 33
error: Content is protected !!