Browsing: ರಾಜ್ಯ

ರಾಜ್ಯ

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ:  ಲಕ್ಷ್ಮೀ ಹೆಬ್ಬಾಳಕರ್

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ:  ಲಕ್ಷ್ಮೀ ಹೆಬ್ಬಾಳಕರ್ by-ಕೆಂಧೂಳಿ ಬೆಂಗಳೂರು,ಮಾ,19- ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ…

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ by-ಕೆಂಧೂಳಿ ಬೆಂಗಳೂರು,ಮಾ,19-ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ.…

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು  ಡಾ. ಶಾಲಿನಿ ರಜನೀಶ್ ಕರೆ

ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳನ್ನು ಖರೀದಿಸಲು  ಡಾ. ಶಾಲಿನಿ ರಜನೀಶ್ ಕರೆ by-ಕೆಂಧೂಳಿ ಬೆಂಗಳೂರು, ಮಾ, 19- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೆಂಗಳೂರಿನ ಐಎಎಸ್ ಅಸೋಸಿಯೇಷನ್‌ನಲ್ಲಿ ಮಾರ್ಚ್ 21ರವರೆಗೆ ಮೂರು ದಿನಗಳು ಆಯೋಜಿಸಿರುವ ಮಹಿಳಾ ಸ್ವ-ಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ವಿಶೇಷ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು…

ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಶೀಘ್ರ ಮೂಲಭೂತ ಸೌಕರ್ಯ  : ಸಚಿವ ಬೋಸರಾಜು

ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಶೀಘ್ರ ಮೂಲಭೂತ ಸೌಕರ್ಯ  : ಸಚಿವ ಬೋಸರಾಜು by-ಕೆಂಧೂಳಿ ಬೆಂಗಳೂರು, ಮಾ, 19-ನಾಗರಹೊಳೆಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ವಸತಿ ಶಾಲೆಗೆ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುವುದೆಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಭಾನಾಯಕರಾದ ಬೋಸರಾಜು ತಿಳಿಸಿದರು. ಇಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಸದಸ್ಯೆ ಶ್ರೀಮತಿ ಭಾರತಿ ಶೆಟ್ಟಿ ಈ ಬಗ್ಗೆ ನಿಯಮ 72 ರಡಿ ಮಂಡಿಸಿದ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು…

ತೊಗರಿ ಬೆಳೆಹಾನಿ;ಪರಿಹಾರ ಚುರುಕು- ಚೆಲುವರಾಯಸ್ವಾಮಿ

ತೊಗರಿ ಬೆಳೆಹಾನಿ;ಪರಿಹಾರ  ಚುರುಕು- ಚೆಲುವರಾಯಸ್ವಾಮಿ by-ಕೆಂಧೂಳಿ ಬೆಂಗಳೂರು, ಮಾ,19-ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿ ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ವಿರೋಧಪಕ್ಷದ ನಾಯಕರಾದ ಛಲವಾದಿ ಟಿ. ನಾರಯಾಯಣಸ್ವಾಮಿ, ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್ ಮತ್ತು ಸದಸ್ಯರಾದ ಶಶಿಲ್ ಜಿ.ನಮೋಶಿ, ಡಾ: ತಳವಾರ್ ಸಾಬಣ್ಣ, ವೈ.ಎಂ.ಸತೀಶ್, ಹೇಮಲತಾ ನಾಯಕ್ ಹಾಗೂ ನಿಯಮ…

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ:  ಶಿವರಾಜ್  ತಂಗಡಗಿ

ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಣೆ:  ಶಿವರಾಜ್  ತಂಗಡಗಿ by-ಕೆಂಧೂಳಿ ಬೆಂಗಳೂರು, ಮಾ,18-ಒಡಿಶಾ ರಾಜ್ಯದ ಪ್ರಸಿದ್ಧ ಕೋನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ‌ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವರು, 2015ರ ನಂತರ ಚಾಲುಕ್ಯ ಉತ್ಸವ…

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಎಂಇಎಸ್ ಅನ್ನು ನಿಷೇಧಿಸುವಂತೆ ಆಗ್ರಹಿಸಿ ಪ್ರತಿಭಟನೆ by-ಕೆಂಧೂಳಿ ಬೆಂಗಳೂರು, ಮಾ,16-ಬೆಳಗಾವಿಯಲ್ಲಿ ಮರಾಠಿ ಮೇಯರ್ ಮಾಡಿರುವುದನ್ನು ಖಂಡಿಸಿ ಎಂಇಎಸ್ ಅನ್ನು ನಿಷೇಧಿಸುವಂತೆ ಒತ್ತಾಯಿಸಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇದೇ ಮಾರ್ಚ್ 22 ರಂದು ಕರ್ನಾಟಕ ಬಂದ್ ನಡೆಸಲಿದ್ದು ಎಲ್ಲಾ ಸಂಘಟನೆಗಳು ವ್ಯಾಪಾರಿಗಳು ಸಹಕರಿಸುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದರು.ಈ ವೇಳೆ ಎಂ ಇಎಸ್ ನಿಷೇಧಿಸಬೇಕೆಂದು ಹಾಗೂ ಬೆಳಗಾವಿಯಲ್ಲಿ ಮರಾಠಿ ಮೇಯರ್ ಆಯ್ಕೆ ಮಾಡಿರುವುದನ್ನು ಖಂಡಿಸಿ ಎಂಇಎಸ್ ಫಲಕವನ್ನು ಸುಟ್ಟಿ…

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್.ಡಿ.ಕೆ by-ಕೆಂಧೂಳಿ

ಮಳವಳ್ಳಿ ವಸತಿ ಶಾಲೆಯ ದುರ್ಘಟನೆ; ಅಧಿಕಾರಿಗಳಿಂದ ಮಾಹಿತಿ ಪಡೆದ ಹೆಚ್.ಡಿ.ಕೆ by-ಕೆಂಧೂಳಿ ನವದೆಹಲಿ,ಮಾ,16- ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ…

ಉಪಸಭಾಪತಿ ಲಮಾಣಿಗೆ ಬೈಕ್ ಡಿಕ್ಕಿ-ಅಪಾಯದಿಂದ ಪಾರು

ಉಪಸಭಾಪತಿ ಲಮಾಣಿಗೆ ಬೈಕ್ ಡಿಕ್ಕಿ-ಅಪಾಯದಿಂದ ಪಾರು   by-ಕೆಂಧೂಳಿ ಚಿತ್ರದುರ್ಗ,ಮಾ,೧೫-ಅಪರಿಚಿತ ದ್ವಿಚಕ್ರವಾಹನ ಡಿಕ್ಕಿಹೊಡೆದ ಪರಿಣಾಮ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾದ ಘಟನೆ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ಶುಕ್ರವಾರ ಸಂಜೆ ಸಂಬಿಸಿದೆ ಲಮಾಣಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪಸಭಾಪತಿಗಳ ಕಾರು ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಯಾವುದೇ ಸಿಗ್ನಲ್ ಹಾಕದೆ ನಿಲ್ಲಿಸಿ, ಮೂತ್ರ ವಿಸರ್ಜನೆಗೆ ತೆರಳಿದ್ದರು ಎಂದು ವರದಿಯಾಗಿದೆ. ಇನ್ನೂ ಕೆಲವು ವರದಿಗಳ ಪ್ರಕಾರ ಅವರು ಎಳನೀರು ಕುಡಿಯಲು…

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಸಿಎಂ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ; ಸಿಎಂ by-ಕೆಂಧೂಳಿ ಬೆಂಗಳೂರು ಮಾ 14-ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ತಿಳಿಸಿದರು. ಈ ಬಗ್ಗೆ ವಿರೋಧ ಪಕ್ಷದ ಸದಸ್ಯರು ವ್ಯಕ್ತಪಡಿಸಿದ ಆತಂಕಕ್ಕೆ ಉತ್ತರಿಸಿದರು. ಉಪ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಈ ಸಂಗತಿಯ ಕೂಲಂಕುಷ ಪರಿಶೀಲನೆಗೆ ಉಪ ಸಮಿತಿ ರಚಿಸಲಾಗಿದೆ.…

ಪದವಿ ಶಿಕ್ಷಣ ಕಾಲೇಜುಗಳ ಪ್ರಾಂಶುಪಾಲರ ನೇರ ನೇಮಕಾತಿ- ಎಂ.ಸಿ.ಸುಧಾಕರ್

ಪದವಿ ಶಿಕ್ಷಣ ಕಾಲೇಜುಗಳ ಪ್ರಾಂಶುಪಾಲರ ನೇರ ನೇಮಕಾತಿ- ಎಂ.ಸಿ.ಸುಧಾಕರ್ by-ಕೆಂಧೂಳಿ ಬೆಂಗಳೂರು, ಮಾ, 13- ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ವಿಜಯಪುರ ನಗರ ವಿಧಾನಸಭಾ ಸದಸ್ಯ ಬಸನಗೌಡ ಆರ್ ಪಾಟೀಲ್ ಇವರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳ ಪರಿಶೀಲನೆಯ ಹಂತದಲ್ಲಿದ್ದು ಶೀಘ್ರವಾಗಿ…

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿ.ಕೆ. ಶಿ

ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಮೂಲಕ ಪರಿಹಾರ: ಡಿ.ಕೆ. ಶಿ by-ಕೆಂಧೂಳಿ ಬೆಂಗಳೂರು, ಮಾ.13*“ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಟನಲ್ ರಸ್ತೆ, ಡಬಲ್ ಡೆಕ್ಕರ್ ಮೇಲ್ಸೇತುವೆ, ಬಫರ್ ರೋಡ್, ಎಲಿವೇಟೆಡ್ ಕಾರಿಡಾರ್, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಸುಧಾಮ್ ದಾಸ್ ಅವರು…

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌

ಆರೋಗ್ಯಕರ ವಯಸ್ಸಾಗುವಿಕೆ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ : ದಿನೇಶ್‌ ಗುಂಡೂರಾವ್‌ by-ಕೆಂಧೂಳಿ ಬೆಂಗಳೂರು,ಮಾ,10- ಉತ್ತಮ ಆರೋಗಭ್ಯಾಸ ಹೊಂದುವುದರಿಂದ ಮಾತ್ರ ಪ್ರತಿಯೊಬ್ಬರು ಆರೋಗ್ಯವಂತ ದೀರ್ಘಾಯುಷಿಯಾಗಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (ಐಐಎಸ್‌ಸಿ) ಆಯೋಜಿಸಿದ್ದ “ಲಾಂಗಿವಿಟಿ ಇಂಡಿಯಾ ಕಾನ್ಫರೆನ್ಸ್‌” (ದೀರ್ಘಾಯುಷ್ಯ ಭಾರತ ಸಮ್ಮೇಳನ)ವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕುವುದು ಸವಾಲಿನ ವಿಷಯವಾಗಿದೆ. ನಮ್ಮ ಆಹಾರಭ್ಯಾಸಗಳು ನಮ್ಮನ್ನು ಅನಾರೋಗ್ಯದತ್ತ ಕೊಂಡೊಯ್ಯುತ್ತಿದೆ. ಎಷ್ಟು ವರ್ಷ ಬದುಕಿದ್ದೆವು ಎನ್ನುವುದಕ್ಕಿಂತ ಎಷ್ಟು…

ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ

ತಿದ್ದುಪಡಿ ಮೈಕ್ರೋ ಫೈನಾನ್ಸ್ ವಿದೇಯಕ ಅಂಗೀಕಾರ by-ಕೆಂಧೂಳಿ ಬೆಂಗಳೂರು, ಮಾ, 10-ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಯಿಂದ ಬಿಡುಗಡೆಗೊಳಿಸಲು ಸರ್ಕಾರ ಜಾರಿಮಾಡಿದ್ದ ತಿದ್ದು ಪಡಿ ಮಸೂದೆಯನ್ನು ಇಂದು ವಿಧಾನ ಸಭೆಯಲ್ಲಿ ಅಂಗೀಕಾರ ಮಾಡಲಾಯಿತು. ಇತ್ತೀಚಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಮೈಕ್ರೋ ಫೈನಾನ್ಸ್ ತಡೆಗೆ ಮಸೂದೆಯನ್ನು ಮಂಡನೆ ಮಾಡಿದ್ದರು. ಇದೀಗ ಮೈಕ್ರೋ ಫೈನಾನ್ಸ್ ವಿದೇಯಕವನ್ನು ಸ್ಪೀಕರ್ ಯುಟಿ ಖಾದರ್ ಅಂಗೀಕರಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಬೇಸತ್ತಿ ಸಾಕಷ್ಟು ಜನ ಆತ್ಮಹತ್ಯೆಗೆ ಶರಣಾದ ಘಟನೆಗಳು ನಡೆದಿದ್ದವು .…

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್

ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಹೆಣ್ಣು;ಸಾಹಿತಿ ಸಂಧ್ಯಾ ಹೊನಗುಂಟಿಕರ್ by-ಕೆಂಧೂಳಿ ಸುರಪುರ,ಮಾ,10- : ಹೆಣ್ಣೆಂದರೆ ಬಾಳ ಬದುಕಿನ ರೂವಾರಿ. ಹೆಣ್ಣು ಈ ಸಮಾಜದ ಕಣ್ಣು, ಬದುಕಿನ ಎಲ್ಲಾ ಸವಾಲುಗಳನ್ನು ಎದುರಿಸಿ ನಿಲ್ಲುವ ಗಟ್ಟಿ ಗಿತ್ತಿ ಆಕೆ. ಹೆಣ್ಣು ಪ್ರತಿಯೊಂದು ಕುಟುಂಬದ ಮೂಲ ಸ್ತಂಭಎಂದು ಕಲಬುರಗಿಯ ಹಿರಿಯ ಸಾಹಿತಿ ಸಂಧ್ಯಾ ಹೊನಗುಂಟಿಕರ್ ಹೇಳಿದರು. ಇಲ್ಲಿಯ ಗರುಡಾದ್ರಿ ಕಲಾ ಮಂದಿರದಲ್ಲಿ ಭಾನುವಾರ ಬಣಗಾರ ಫೌಂಡೇಷನ್ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ…

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ

ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ by-ಕೆಂಧೂಳಿ ಕೊಪ್ಪಳ ಮಾ 9-ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ. ಬಾಲ ಭವನ ನಿಮ್ಮೊಳಗಿನ ಪ್ರತಿಭೆ ಹೊರಗೆ ತರುವ ವೇದಿಕೆಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಬಾಲಭವನ‌ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಹಾಗೂ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು. ಮಗುವಿಗೆ ಊಟ ಮಾಡಿಸುವಾಗಲೂ ತಾಯಂದಿರು ಮೊಬೈಲ್ ನಲ್ಲಿ ತೋರಿಸುವುದರಿಂದ…

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ:  ಡಿ.ಕೆ. ಶಿ ಕಿವಿಮಾತು

ರಾಜಕೀಯದವರನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಶಿಕ್ಷಣ ಸಂಸ್ಥೆಗಳು ಬೆಳೆಯುತ್ತವೆ:  ಡಿ.ಕೆ. ಶಿ ಕಿವಿಮಾತು by-ಕೆಂಧೂಳಿ ಮಳವಳ್ಳಿ, ಮಾ. 09-“ಶಿಕ್ಷಣ ಸಂಸ್ಥೆಯ ಒಳಗೆ ರಾಜಕೀಯದವರನ್ನು ಸೇರಿಸಬೇಡಿ. ಆಗ ಮಾತ್ರ ಆ ಶಿಕ್ಷಣ ಸಂಸ್ಥೆಗಳು ಉನ್ನತ ಮಟ್ಟಕ್ಕೆ ಬೆಳೆಯುತ್ತವೆ. ಇಲ್ಲದಿದ್ದರೇ ಶಿಕ್ಷಣದ ಗುಣಮಟ್ಟ ಹಾಳಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿವಿಮಾತು ಹೇಳಿದರು. ಮಳವಳ್ಳಿಯಲ್ಲಿ ಬಿಎಂ ಎಜುಕೇಶನ್ ಟ್ರಸ್ಟ್ ವತಿಯಿಂದ ನಿರ್ಮಾಣವಾಗಿರುವ ಬಿಎಂ ಪಬ್ಲಿಕ್ ಶಾಲಾ ಕಟ್ಟಡ, ಆಡಳಿತ ಕಟ್ಟಡ ಹಾಗೂ ಸಾಯಿಬಾಬಾ ಮಂದಿರವನ್ನು ಭಾನುವಾರ ಲೋಕಾರ್ಪಣೆ ಮಾಡಿ ಡಿಸಿಎಂ ಮಾತನಾಡಿದರು.…

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ

ಎಲ್ಲಾ ರಂಗಗಳಲ್ಲೂ ಮಹಿಳೆಯರ ಸೇವೆ ; ರಾಅಮಲಿಂಗಾ ರೆಡ್ಡಿ ಶ್ಲಾಘನೆ by-ಕೆಂಧೂಳಿ ಬೆಂಗಳೂರು, ಮಾ, 08-ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ಸಾರಿಗೆ ಹಾಗೂ ಮುಜರಾಯಿ ಸಚಿವರು ಮಾತನಾಡಿ ಇಂದು ಎಲ್ಲಾ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ವೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು…

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ

ಮುಂದಿನ ವಿಧಾನಸಭೆ, ಲೋಕಸಭೆ ಚುನಾವಣೆಗೆ ಮಹಿಳೆಯರು ಸಜ್ಜಾಗಬೇಕು: ಡಿ.ಕೆ.ಶಿ ಕರೆ by-ಕೆಂಧೂಳಿ ಕಲಬುರ್ಗಿ, ಮಾ. 8-“2028 ರ ಹೊತ್ತಿಗೆ ಮಹಿಳಾ ಮೀಸಲಾತಿ ಅಸ್ತಿತ್ವಕ್ಕೆ ಬರಬಹುದು ಆದ ಕಾರಣ ಮಹಿಳೆಯರು ಚುನಾವಣೆಗೆ ಸ್ಪರ್ಧಿಸಲು ತಯಾರಾಗಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮನ್ನು ಯಾರೂ ತಡೆಯುವುದಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಅವರು ಮಾತನಾಡಿದರು. “ಈಗ ಪಂಚಾಯಿತಿಯಿಂದ ಪಾರ್ಲಿಮೆಂಟ್ ತನಕ ಮಹಿಳೆಯರು ಅಧಿಕಾರದಲ್ಲಿ ಇದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50 ರಷ್ಟು…

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ

ಬಜೆಟ್ ಮೂಲಕ ಜನರ ಮೂಗಿಗೆ ತುಪ್ಪ ಸವರಲುಹೊರಟ ಮುಖ್ಯಮಂತ್ರಿ- ವಿಜಯೇಂದ್ರ ಟೀಕೆ by-ಕೆಂಧೂಳಿ ಬೆಂಗಳೂರು,ಮಾ,09-ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸಿ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಜಟ್ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.…

1 14 15 16 17 18 49
error: Content is protected !!