ರಾಜ್ಯ
ನಾಳೆಯಿಂದ 1ರಿಂದ 5 ರವರೆಗೆ ಶಾಲೆಗಳು ಆರಂಭ
ಬೆಂಗಳೂರು,ಅ,24:1ರಿಂದ 5 ನೇ ತರಗತಿಗಳು ನಾಳೆಯಿಂದ ರಾಜ್ಯಾದ್ಯಂತ ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು,ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ 2…