ರಾಜ್ಯ
ಶೀಘ್ರ ಸ್ಥಳೀಯ ಚುನಾವಣೆಗಳು ನಡೆಯುವ ಸಾಧ್ಯತೆ
ಶೀಘ್ರ ಸ್ಥಳೀಯ ಚುನಾವಣೆಗಳು ನಡೆಯುವ ಸಾಧ್ಯತೆ ಬೆಳಗಾವಿ,ಜ,14-ನೆನಗುದಿಗೆ ಬಿದ್ದಿದ್ದ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ,ಸ್ಥಳೀಯ ಸಂಸ್ಥೆಗಳ ಚುನಾವಣೆ ಮೇ ತಿಂಗಳಲ್ಲಿ ನಡೆಯುವ ಸಾಧ್ಯತೆಗಳಿವೆ. ಏಪ್ರಿಲ್ ಅಥವಾ ಮೇ ಒಳಗೆ ಚುನಾವಣೆ ನಡೆಯುವ ಸುಳಿವನ್ನು ಚುನಾವಣಾ ಆಯುಕ್ತರು ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿ ಅವರು, ಚುನಾವಣಾ ಆಯೋಗದಿಂದ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ…