ರಾಜ್ಯ
23ರಿಂದ 8 ರಿಂದ 11ನೇ ಶಾಲೆಗಳ ಆರಂಭಕ್ಕೆ ಸರ್ಕಾರ ನಿರ್ಧಾರ
ಬೆಂಗಳೂರು,ಆ,16: ಇದೇ ತಿಂಗಳ 23ರಿಂದ ಶಾಲಾ-ಕಾಲೇಜುಗಳನ್ನು ಆರಂಭ ಮಾಡಲು ಸರಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್ ಅವರು; 8ರಿಂದ 11ನೇ ತರಗತಿಗಳ ಭೌತಿಕ ಪಾಠಗಳನ್ನು ಆರಂಭ ಮಾಡಲು ನಿರ್ಧರಿಸಲಾಗಿದ್ದು, ಮಕ್ಕಳನ್ನು ಶಾಲೆಗೆ ಕಳಿಸುವಂತೆ ಪೋಷಕರನ್ನು ಕೋರಿದರು. ರಾಜ್ಯದಲ್ಲಿ ಒಂದನೇ ತರಗತಿಯಿಂದಲೇ ಶಾಲೆ ಆರಂಭಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಅಗಸ್ಟ್ 30 ರಂದು ತಜ್ಞರ ಸಲಹಾ ಸಮಿತಿ ಜತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು…