ರಾಜ್ಯ
ಮುಳುಗಡೆ ಸಂತ್ರಸ್ತರಿಗೆ 15 ದಿನಗಳಲ್ಲಿ ಹಕ್ಕುಪತ್ರ ವಿತರಿಸಲು ಕಾರಜೋಳ ಸೂಚನೆ
ಬೆಳಗಾವಿ, ಆ.7: ಆಲಮಟ್ಟಿ ಹಾಗೂ ಹಿಪ್ಪರಗಿ ಬ್ಯಾರೇಜ್ ಹಿನ್ನೀರಿನಿಂದ ಮುಳುಗಡೆಯಾಗುವ ಅಥಣಿ ತಾಲ್ಲೂಕಿನ ಜನವಾಡ, ಮಹಿಷವಾಡಗಿ, ನಂದೇಶ್ವರ ಸೇರಿದಂತೆ ಎಲ್ಲ ಗ್ರಾಮಗಳಲ್ಲಿ ಮನೆಗಳ ಸಂಖ್ಯೆಯ ಆಧಾರದ ಮೇಲೆ ಪಂಚಾಯಿತಿ ಆಸ್ತಿ ರಿಜಿಸ್ಟರ್ ಮತ್ತು ಮುಳುಗಡೆ ಸಮೀಕ್ಷೆ ಆಧರಿಸಿ ಹದಿನೈದು ದಿನಗಳಲ್ಲಿ ಹಕ್ಕುಪತ್ರಗಳನ್ನು ವಿತರಿಸಬೇಕು ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಸೂಚನೆ ನೀಡಿದರು. ಚಿಕ್ಕೋಡಿ ಪ್ರವಾಸಿಮಂದಿರದಲ್ಲಿ ಶನಿವಾರ ನಡೆದ ಮುಂಗಾರು ಹಂಗಾಮಿನಲ್ಲಿ ಪ್ರವಾಹ/ಅತಿವೃಷ್ಟಿಯಿಂದ ಬಾಧಿತಗೊಂಡ ಪ್ರದೇಶಗಳಲ್ಲಿ ಕೈಗೊಂಡ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ…